ವೇಶ್ಯಾವಾಟಿಕೆ ಅಪರಾಧವಲ್ಲ: ಮಹಿಳೆಗೆ ತನ್ನ ವೃತ್ತಿ ಆಯ್ಕೆಯ ಹಕ್ಕಿದೆ -ಕೋರ್ಟ್

ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ ಮಾಡುವ ಎಲ್ಲಾ ಹಕ್ಕು ಇದೆ ಎಂದು ಬಾಂಬೆ ಉಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಕಳೆದ ವರ್ಷ ಹಾಸ್ಟೆಲ್​ ಒಂದರ ಮೇಲೆ ನಡೆದಿದ್ದ ದಾಳಿಯಲ್ಲಿ ಮೂವರು ಲೈಂಗಿಕ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರ ಮೇಲೆ ಕಾನೂನು ಕ್ರಮ ಸಹ ಜರುಗಿಸಿದ್ದರು. ಇದನ್ನು ಪ್ರಶ್ನಿಸಿ ಲೈಂಗಿಕ ಕಾರ್ಯಕರ್ತೆಯರು ಕೋರ್ಟ್​ ಮೆಟ್ಟಿಲೇರಿದ್ದರು.

ಇದೀಗ, ಬಾಂಬೆ ಉಚ್ಚ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದ್ದು ಮೂವರೂ ಮಹಿಳೆಯರ ವಿರುದ್ಧದ ಆರೋಪವನ್ನು ತಳ್ಳಿಹಾಕಿದೆ.

ಜೊತೆಗೆ, ವೇಶ್ಯಾವಾಟಿಕೆ ಅಪರಾಧವಲ್ಲ. ಆದರೆ, ಮಹಿಳೆಯೊಬ್ಬಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗುವುದು ಶಿಕ್ಷಾರ್ಹ ಅಪರಾಧ ಎಂದು ಬಾಂಬೆ ಉಚ್ಚ ನ್ಯಾಯಾಲಯ ಸ್ಪಷ್ಟನೆ ನೀಡಿದೆ.

Related Tags:

Related Posts :

Category:

error: Content is protected !!