ವಾಜಪೇಯಿಗೆ ಗೌರವ: ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮರುನಾಮಕರಣ

  • Ayesh Banu
  • Published On - 15:23 PM, 22 Nov 2020

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹೆಸರು ಬದಲಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂಸ್ಥೆಯ ಹೆಸರನ್ನು ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ನಾಮಕಾರಣ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜ್ಯೋತಿಪ್ರಕಾಶ್ ಸೂಚಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ವಾಯತ್ತ ಸಂಸ್ಥೆಯಾಗಿ ಆರಂಭಿಸಲು ಸರ್ಕಾರವು ಡಿಸೆಂಬರ್ 2016ರಲ್ಲಿ ತಾತ್ವಿಕ ಅನುಮೋದನೆ ನೀಡಿತ್ತು.