ರೆಸಾರ್ಟ್ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.
ಇದೇವೇಳೆ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
Published On - 4:59 pm, Tue, 26 March 19
ತಾಜಾ ಸುದ್ದಿ
Annual celebrations of Vasanthotsavam at Tirumala will commence from April 17hindu templeSalakatla Vasanthotsavamssri venkateshwara swamyTirumala Srivaru