
ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.
ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು ಒಳಿತು ಎಂದು ಸಚಿವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Published On - 7:05 am, Thu, 28 March 19