ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ […]
Follow us on
ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡ್ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.