Budget 2022: ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಒಟ್ಟು 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗಲಿದೆ. ಸಮಯಪಾಲನೆ ಮತ್ತು ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು ಈ ರೈಲುಗಳು ಒದಗಿಸುತ್ತವೆ

Budget 2022: ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Edited By:

Updated on: Feb 01, 2022 | 12:25 PM

ದೆಹಲಿ: ಸಂಸತ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸುತ್ತಿರುವ ಕೇಂದ್ರ ಬಜೆಟ್ 2022 (Budget  2022) ಅನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕೊವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯ ದೃಷ್ಟಿಯಿಂದ ಇದು ಎರಡನೇ ಕಾಗದರಹಿತ ಬಜೆಟ್ ಆಗಿದೆ.  ದೇಶದಲ್ಲಿ ಒಟ್ಟು 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗಲಿದೆ. ಸಮಯಪಾಲನೆ ಮತ್ತು ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು ಈ ರೈಲುಗಳು ಒದಗಿಸುತ್ತವೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. 100 ಪಿಎಂ ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಮುಂದಿನ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸರಕು ಸಾಗಣೆಗೆ ಪ್ರಾಮುಖ್ಯತೆ

ಆರ್ಥಿಕ ಪ್ರಗತಿಗೆ ಅತ್ಯಗತ್ಯವಾಗಿ ಬೇಕಿರುವ ಕಾರ್ಗೊ ಟರ್ಮಿನಲ್​ಗಳ ನಿರ್ಮಾಣಕ್ಕೆ ಸರ್ಕಾರ ಒತ್ತು ನೀಡಿದೆ. ಮುಂದಿನ ಮೂರು ವರ್ಷಗಳಲ್ಲಿ ಪಿಎಂ ಗತಿಶಕ್ತಿ ಯೋಜನೆಯಡಿ 100 ಕಾರ್ಗೋ ಟರ್ಮಿನಲ್​ಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಶೇ 9 ಮೀರಿದ ವೃದ್ಧಿದರದ ಕನಸು

ದೇಶದ ಆರ್ಥಿಕ ಅಭಿವೃದ್ಧಿಯ ಬೆಳವಣಿಗೆ ಸರಾಸರಿಯು ಶೇ 9.2 ಮುಟ್ಟುವ ಕನಸು ಇದೆ. ಇದು ವಿಶ್ವದ ಎಲ್ಲ ಬೃಹತ್ ಆರ್ಥಿಕತೆಗಳಲ್ಲಿಯೇ ಗರಿಷ್ಠ ಮಟ್ಟದ್ದು. ನಾವು ನಮ್ಮೆಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಅಭಿವೃದ್ಧಿಯ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವಿತ್ತ ಸಚಿವೆ  ಹೇಳಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಬಜೆಟ್​ನ ಅತಿಮುಖ್ಯ ಅಂಶಗಳು ಇವು.

1) ಪಿಎಂ ಗತಿಶಕ್ತಿ

2) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ

3) ಉತ್ಪಾದಕತೆಯ ವೃದ್ಧಿ

4) ಅವಕಾಶಗಳ ಹೆಚ್ಚಳ

5) ವಿದ್ಯುತ್ ಉತ್ಪಾದನೆ, ವಿತರಣೆಯಲ್ಲಿ ಸುಧಾರಣೆ

6) ಪರಿಸರ ಸಂರಕ್ಷಣೆ

7) ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು

MSME: ಸಾಲಖಾತ್ರಿ ಯೋಜನೆಗಳ ಅವಧಿ ವಿಸ್ತರಣೆ

ಕೊರೊನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಅನುಕೂಲಕ್ಕಾಗಿ ಜಾರಿಗಳಿಸಿದ್ದ ಎಲ್ಲ ಸಾಲಖಾತ್ರಿ ಯೋಜನೆಗಳನ್ನು ಇನ್ನೂ ಒಂದು ಆರ್ಥಿಕ ವರ್ಷದ ಅವಧಿಗೆ ವಿಸ್ತರಿಸಲಾಗಿದೆ. 1 ಲಕ್ಷಕ್ಕೂ ಹೆಚ್ಚು ಸಣ್ಣ ಉದ್ದಿಮೆಗಳಿಗೆ ತುರ್ತು ಸಾಲದ ಬೆಂಬಲ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ಯಮಿಗಳು ತಮ್ಮ ವ್ಯವಹಾರಗಳನ್ನು ಕೊರೊನಾ ಮುಂಚಿನ ಸ್ಥಿತಿಗೆ ತರುವಲ್ಲಿ ಸರ್ಕಾರವು ಎಲ್ಲ ನೆರವು ಒದಗಿಸಲಿದೆ ಎಂದು ಅವರು  ಹೇಳಿದ್ದಾರೆ.

ಇದನ್ನೂ ಓದಿ: Budget 2022: ಹೆಚ್ಚುತ್ತಿರುವ ಚೀನಾ, ಪಾಕ್​ ಉಪಟಳ; ಸೇನಾ ಕ್ಷೇತ್ರ ಬಲ ಅನಿವಾರ್ಯತೆಗಾಗಿ ಈ ಸಾಲಿನ ಬಜೆಟ್​​ನಲ್ಲಿ ಇನ್ನಷ್ಟು ನಿರೀಕ್ಷೆ

Published On - 11:31 am, Tue, 1 February 22