ನವದೆಹಲಿ, ಜೂನ್ 21: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ರಚಿಸುವ ಮುನ್ನ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಲಹೆ ಸೂಚನೆಗಳನ್ನು ಪಡೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಇಂದು (ಜೂನ್ 21) ಶುಕ್ರವಾರ ವಿವಿಧ ಕೃಷಿ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರು ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಎರಡೂವರೆ ಗಂಟೆ ಕಾಲ ನಡೆದ ಚರ್ಚೆಯಲ್ಲಿ ಐಸಿಎಫ್ಎ, ಭಾರತ್ ಕೃಷಿಕ್ ಸಮಾಜ್, ಸಿಎಸಿಪಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಎಕನಾಮಿಕ್ಸ್ ಅಂಡ್ ಪಾಲಿಸಿ ರೀಸರ್ಚ್, ಯುನೈಟೆಡ್ ಪ್ಲಾಂಟರ್ಸ್ ಅಸೋಸಿಯೇಶನ್ ಆಫ್ ಸದರ್ನ್ ಇಂಡಿಯಾ ಮೊದಲಾದ ಸಂಘ ಸಂಸ್ಥೆಗಳು ಈ ನಿಯೋಗದಲ್ಲಿದ್ದವು.
ಇದನ್ನೂ ಓದಿ: ಬಜೆಟ್ಗೆ ಮುಂಚೆ ಪ್ರಮುಖ ಆರ್ಥಿಕ ತಜ್ಞರ ಜೊತೆ ನಿರ್ಮಲಾ ಸೀತಾರಾಮನ್ ಸಭೆ
ಕೃಷಿ ಕ್ಷೇತ್ರದ ತಜ್ಞರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ನೀಡಿದ ವಿವಿಧ ಸಲಹೆ ಮತ್ತು ಬೇಡಿಕೆಗಳಲ್ಲಿ ಈ ಮೇಲಿನವು ಕೆಲವು. ಎಲ್ಲವನ್ನೂ ಆಲಿಸಿಕೊಂಡಿರುವ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಸಚಿವಾಲಯದ ಅಧಿಕಾರಿಗಳು ಅಂತಿಮವಾಗಿ ಯಾವೆಲ್ಲಾ ಅಂಶಗಳನ್ನು ಬಜೆಟ್ನಲ್ಲಿ ಅಡಕಗೊಳಿಸುತ್ತಾರೆ ಕಾದು ನೋಡಬೇಕು. ಜುಲೈ 22ಕ್ಕೆ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆಗುವ ಸಾಧ್ಯತೆ ಇದೆ.
ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 4:55 pm, Fri, 21 June 24