ಆಯುಷ್ಮಾನ್ ಭಾರತ್ ಸ್ಕೀಮ್: ಇನ್ಷೂರೆನ್ಸ್ ಮೊತ್ತ ಹೆಚ್ಚಿಸಲು ಮತ್ತು ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

Ayushman Bharat PM Jan Arogya Yojana: ಜುಲೈ 23ರಂದು ಮಂಡನೆಯಾಗುವ ಕೇಂದ್ರೀಯ ಬಜೆಟ್​ನಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಸರ್ಕಾರ ಹೆಚ್ಚು ಗಮನ ಕೊಡಬಹುದು. ಪಿಟಿಐ ಸುದ್ದಿಸಂಸ್ಥೆ ವರದಿ ಪ್ರಕಾರ ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆಯ ಕವರೇಜ್ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸುವ ಸಾಧ್ಯತೆ ಇದೆ. ಹಾಗೆಯೇ, ಫಲಾನುಭವಿಗಳ ಸಂಖ್ಯೆಯನ್ನೂ ಹೆಚ್ಚಿಸಲು ಸರ್ಕಾರ ಗುರಿ ಇಟ್ಟಿದೆ. ಬಜೆಟ್​ನಲ್ಲಿ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬಹುದು.

ಆಯುಷ್ಮಾನ್ ಭಾರತ್ ಸ್ಕೀಮ್: ಇನ್ಷೂರೆನ್ಸ್ ಮೊತ್ತ ಹೆಚ್ಚಿಸಲು ಮತ್ತು ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ
ಹೆಲ್ತ್ ಇನ್ಷೂರೆನ್ಸ್,
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 08, 2024 | 10:38 AM

ನವದೆಹಲಿ, ಜುಲೈ 8: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ (Ayushman Bharat PM Jan Arogya Yojana) ಬಂದ ಮೇಲೆ ಭಾರತದಲ್ಲಿ ಹೆಲ್ತ್ ಇನ್ಷೂರೆನ್ಸ್ ವ್ಯಾಪ್ತಿ ಹೆಚ್ಚಿದೆ. ಈ ಸ್ಕೀಮ್​ಗೆ ಇನ್ನಷ್ಟು ಒತ್ತು ಕೊಡಲು ಸರ್ಕಾರ ಯೋಜಿಸಿದೆ. ಈ ನಿಟ್ಟಿನಲ್ಲಿ ಜುಲೈ 23ರಂದು ಮಂಡನೆಯಾಗುವ ಬಜೆಟ್​ನಲ್ಲಿ ಕೆಲ ಪೂರಕ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ. ಪಿಟಿಐ ಸುದ್ದಿ ಸಂಸ್ಥೆ ವರದಿ ಪ್ರಕಾರ ಆಯುಷ್ಮಾನ್ ಇನ್ಷೂರೆನ್ಸ್ ಸ್ಕೀಮ್​ನ ಮೊತ್ತವನ್ನು ಹೆಚ್ಚಿಸುವುದಲ್ಲದೆ, ಫಲಾನುಭವಿಗಳ ಸಂಖ್ಯೆಯನ್ನು ಈಗಿರುವುದಕ್ಕಿಂತ ಎರಡು ಪಟ್ಟು ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ.

ಮುಂದಿನ ಮೂರು ವರ್ಷದಲ್ಲಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯನ್ನೂ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​ಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಇನ್ಷೂರೆನ್ಸ್ ಕವರೇಜ್ ಅನ್ನು ವರ್ಷಕ್ಕೆ 10 ಲಕ್ಷ ರೂಗೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್​ಎಚ್​ಎ) ಮಾಡಿರುವ ಅಂದಾಜು ಪ್ರಕಾರ, ಇನ್ಷೂರೆನ್ಸ್ ಮೊತ್ತದ ಹೆಚ್ಚಳ ಮತ್ತು ಫಲಾನುಭವಿಗಳ ಸಂಖ್ಯೆ ಹೆಚ್ಚಳದಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 12,076 ಕೋಟಿ ರೂನಷ್ಟು ಹೆಚ್ಚುವರಿ ವೆಚ್ಚ ಆಗಬಹುದು.

ಇದನ್ನೂ ಓದಿ: ಜು. 22ಕ್ಕೆ ಸಂಸತ್ ಅಧಿವೇಶ, ಜು.23ಕ್ಕೆ ಬಜೆಟ್ ಮಂಡನೆ: ​​ ಸಚಿವ ಕಿರಣ್ ರಿಜಿಜು

ಸದ್ಯ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯಲ್ಲಿ ಫಲಾನುಭವಿಯ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ. ಒಟ್ಟು 12 ಕೋಟಿ ಕುಟುಂಬಕ್ಕೆ ಹೆಲ್ತ್ ಕವರ್ ಇದೆ. ಇದಕ್ಕೆ ವರ್ಷಕ್ಕೆ ಸರ್ಕಾರ 7,200 ಕೋಟಿ ರೂ ಹಣವನ್ನು 2024ರ ಮಧ್ಯಂತರ ಬಜೆಟ್​ನಲ್ಲಿ ಎತ್ತಿ ಇಡಲಾಗಿತ್ತು. ಈಗ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನೂ ಈ ಸ್ಕೀಮ್ ವ್ಯಾಪ್ತಿಗೆ ತಂದಲ್ಲಿ 4-5 ಕೋಟಿಯಷ್ಟು ಸಂಖ್ಯೆ ಹೆಚ್ಚಳ ಆಗುತ್ತದೆ. ಫಲಾನುಭವಿಗಳ ಸಂಖ್ಯೆ 16-17 ಕೋಟಿಯಷ್ಟಾಗಬಹುದು.

ನೀತಿ ಆಯೋಗ್ ವರದಿ ಪ್ರಕಾರ ಭಾರತದಲ್ಲಿ ಕೆಳಗಿನ ಸ್ತರದ ಶೇ. 50ರಷ್ಟು ಜನರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಇನ್ಷೂರೆನ್ಸ್ ಕವರೇಜ್ ಇದೆ. ಶೇ. 20ರಷ್ಟು ಜನರಿಗೆ ಖಾಸಗಿ ಹಾಗೂ ಇತರ ಹೆಲ್ತ್ ಇನ್ಷೂರೆನ್ಸ್ ಬಲ ಇದೆ. ಇನ್ನುಳಿದ ಶೇ. 30ರಷ್ಟು ಜನರಿಗೆ ಯಾವ ಇನ್ಷೂರೆನ್ಸ್ ಕವರೇಜ್ ಇಲ್ಲ ಎನ್ನಲಾಗುತ್ತಿದೆ. ಇದು ಕೇವಲ ಅಂದಾಜು ಮಾತ್ರ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಯಲ್ಲಿ ಹಣದ ಮೊತ್ತ ಹೆಚ್ಚಳ ಸಾಧ್ಯತೆ; ಈ ಸ್ಕೀಮ್​ಗೆ ನೊಂದಾಯಿಸಿಕೊಳ್ಳುವುದು ಹೇಗೆ?

ಆದರೆ, ಆಯುಷ್ಮಾನ್ ಭಾರತ್ ಹಾಗೂ ಸರ್ಕಾರದ ಇತರ ಸ್ಕೀಮ್​ಗಳಲ್ಲಿ ಫಲಾನುಭವಿಗಳು ಪುನಾವರ್ತನೆಯಾಗಬಹುದಾದ್ದರಿಂದ ವಾಸ್ತವದಲ್ಲಿ ಇನ್ಷೂರೆನ್ಸ್ ಕವರೇಜ್ ಇಲ್ಲದವರ ಪ್ರಮಾಣವು ಶೇ. 30ಕ್ಕಿಂತಲೂ ಹೆಚ್ಚಿರಬಹುದು ಎನ್ನಲಾಗಿದೆ. ಆರೋಗ್ಯ ವಿಮೆಯಿಂದ ವಂಚಿತರಾಗಿರುವ ಈ ಜನರಿಗೆ ಆಯುಷ್ಮಾನ್ ಭಾರತ್ ಸ್ಕೀಮ್ ಅನ್ನು ತಲುಪಿಸುವುದು ಸರ್ಕಾರದ ಗುರಿಯಾಗಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್