Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ

01:15ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 1,511 ಅಂಶಗಳಷ್ಟು ಏರಿಕೆ ಕಂಡಿದ್ದು 47,796.96 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 394.35 ಅಂಶಗಳಷ್ಟು ಏರಿಕೆ ದಾಖಲಿಸಿದೆ. ಹಳೆಯದಾದ ಮತ್ತು ಮಾಲಿನ್ಯಕಾರಕ ವಾಹನಗಳ ಬಳಕೆ ತಡೆಯುವ ನಿಟ್ಟಿನಲ್ಲಿ ಇಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಹೊಸ ನೀತಿ ಘೋಷಿಸಿದ್ದಾರೆ. ಈ ಘೋಷಣೆ ಬೆನ್ನಲ್ಲೇ ಆಟೋ ಮೊಬೈಲ್​ ಷೇರುಗಳ ಬೆಲೆ ಹೆಚ್ಚಿದೆ.

Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ
ಸಾಂದರ್ಭಿಕ ಚಿತ್ರ
Edited By:

Updated on: Oct 16, 2026 | 6:32 PM

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಸುಮಾರು ಎರಡು ಗಂಟೆ ಕಾಲ ಬಜೆಟ್​ ಮಂಡನೆ ಮಾಡಿದ್ದಾರೆ. ಈ​ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕೆಲ ಷೇರುಗಳ ಮೌಲ್ಯ ಭಾರೀ ಏರಿಕೆ ಕಂಡಿದೆ.

ಮಧ್ಯಾಹ್ನ 01:15ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 1,511 ಅಂಶಗಳಷ್ಟು ಏರಿಕೆ ಕಂಡಿದ್ದು 47,796.96 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 394.35 ಅಂಶಗಳಷ್ಟು ಏರಿಕೆ ದಾಖಲಿಸಿದೆ. 14,042.95 ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ ಬ್ಯಾಂಕ್​ 1725 ಅಂಕ ಏರಿಕೆ ಕಂಡು 32,241 ಆಗಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ₹ 20 ಸಾವಿರ ಕೋಟಿ ಬಂಡವಾಳ ಮರುಪೂರಣ ಮಾಡುವ ನಿರ್ಧಾರ ಘೋಷಿಸಿದ ಬೆನ್ನಲ್ಲೇ ಬ್ಯಾಂಕ್​ ಷೇರುಗಳು ಭಾರೀ ಏರಿಕೆ ಕಂಡಿವೆ.

ಹಳೆಯದಾದ ಮತ್ತು ಮಾಲಿನ್ಯಕಾರಕ ವಾಹನಗಳ ಬಳಕೆ ತಡೆಯುವ ನಿಟ್ಟಿನಲ್ಲಿ ಇಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಹೊಸ ನೀತಿ ಘೋಷಿಸಿದ್ದಾರೆ. ಈ ಘೋಷಣೆ ಬೆನ್ನಲ್ಲೇ ಆಟೋ ಮೊಬೈಲ್​ ಷೇರುಗಳ ಬೆಲೆ ಹೆಚ್ಚಿದೆ.

 

Published On - 1:46 pm, Mon, 1 February 21

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us