Budget 2022: ಭಾರತದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಸರ್ಕಾರದ ಮುಂದಿನ ಗುರಿ; ಸಚಿವೆ ನಿರ್ಮಲಾ ಸೀತಾರಾಮನ್

| Updated By: ಸುಷ್ಮಾ ಚಕ್ರೆ

Updated on: Feb 01, 2022 | 12:00 PM

Union Budget 2022 Highlights: ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Budget 2022: ಭಾರತದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಸರ್ಕಾರದ ಮುಂದಿನ ಗುರಿ; ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us on

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಕೇಂದ್ರ ಬಜೆಟ್ 2022 (Union Budget 2022) ಮಂಡಿಸುತ್ತಿದ್ದು, ದೇಶಾದ್ಯಂತ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು. ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಕರೆದೊಯ್ಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳನ್ನು ನೀಡುತ್ತದೆ. ಪಿಎಂ ಗತಿ ಶಕ್ತಿ ಯೋಜನೆಯಡಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಭಾರತದಲ್ಲಿ ಯುವಕರು, ಮಹಿಳೆಯರು ಮತ್ತು ಬಡವರ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ. ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಯಶಸ್ವಿಯಾಗಿಸಲಿದೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. 2022-23ರ ಈ ಬಜೆಟ್‌ನಲ್ಲಿ 4 ಕ್ಷೇತ್ರಗಳ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರದ ಈ ಬಜೆಟ್‌ನಲ್ಲಿ 4 ಹಂತಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲಾಗಿದೆ. ಪಿಎಂ ಗತಿ ಶಕ್ತಿ ಮಿಷನ್, ಸರ್ವರ ಪಾಲ್ಗೊಳ್ಳುವಿಕೆಯಲ್ಲಿ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ, ಬಂಡವಾಳ ಹಿಂತೆಗತಕ್ಕೆ ಆದ್ಯತೆ ಈ 4 ಹಂತಗಳಲ್ಲಿ ಅಭಿವೃದ್ಧಿ ಯೋಜನೆಗೆ ಈ ಬಜೆಟ್‌ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ.

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಆಧುನಿಕ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪಿಎಂ ಗತಿ ಶಕ್ತಿ ಮೂಲಕ ಅಭಿವೃದ್ಧಿಗೆ ದಿಟ್ಟ ಕ್ರಮ ವಹಿಸಲಾಗಿದೆ. 25 ಸಾವಿರ ಕಿ.ಮೀ ಹೆದ್ದಾರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 3 ವರ್ಷದಲ್ಲಿ 100 ಕಾರ್ಗೋ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಗ್ರಾಮ ಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ವಿಶೇಷ ಅನುದಾನ ಘೋಷಿಸಲಾಗಿದೆ. ಗಡಿಪ್ರದೇಶಗಳ ಗ್ರಾಮಗಳ ಮೂಲಸೌಕರ್ಯಕ್ಕೆ ಆರ್ಥಿಕ ನೆರವು ನೀಡಲಾಗುವುದು. ಎಲ್ಲಾ ಪೋಸ್ಟ್‌ ಆಫಿಸ್‌ಗಳಲ್ಲೂ ಬ್ಯಾಂಕಿಂಗ್‌ ವ್ಯವಸ್ಥೆಗೆ ಯೋಜನೆ ರೂಪಿಸಲಾಗುವುದು. 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್‌ಗಳನ್ನು ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಹೈಡ್ರೋ ಸೋಲಾರ್ ಪ್ರಾಜೆಕ್ಟ್‌ಗೆ 1400 ಕೋಟಿ ಹಂಚಿಕೆ ಮಾಡಲಾಗುವುದು. 112 ಆಕಾಂಕ್ಷೆಯ ಜಿಲ್ಲೆಗಳಲ್ಲಿ ಶೇಕಡಾ 95ರಷ್ಟು ಪ್ರಗತಿಯಾಗಲಿದೆ. 1.5 ಲಕ್ಷ ಅಂಚೆ ಕಚೇರಿಗಳು ಕೋರ್ ಬ್ಯಾಂಕ್ ಆಗಿ ಅಭಿವೃದ್ಧಿ ಮಾಡಲಾಗುವುದು. ಅಂಚೆ ಕಚೇರಿಗಳನ್ನು ಕೋರ್ ಬ್ಯಾಂಕ್‌ಗಳಾಗಿ ಪರಿವರ್ತನೆ ಮಾಡಲಾಗುವುದು. 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ನಿರ್ಮಿಸಲಾಗುವುದು. 1483 ಕೇಂದ್ರದ ಅನವಶ್ಯಕ ಕಾನೂನು ರದ್ದು ಮಾಡಲಾಗುವುದು. ಗಡಿ ಗ್ರಾಮಗಳಿಗೆ ಸಂಪರ್ಕ ನೀಡಿಕೆಗೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: Budget 2022 Download PDF: ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳುವ ವಿಧಾನ ಇಲ್ಲಿದೆ

Union Budget 2022: ಕೇಂದ್ರ ಬಜೆಟ್​ 2022ರಿಂದ ಆದಾಯ ತೆರಿಗೆಯ ಟಾಪ್ 5 ನಿರೀಕ್ಷೆಗಳು

Published On - 11:46 am, Tue, 1 February 22