Budget 2023: ಮ್ಯಾನ್‌ಹೋಲ್ ಟು ಮೆಷಿನ್: ಒಳಚರಂಡಿ ವ್ಯವಸ್ಥೆ ಕುರಿತು ಬಜೆಟ್ನಲ್ಲಿ ಮಹತ್ವದ ಘೋಷಣೆ
ಒಳಚರಂಡಿ ವ್ಯವಸ್ಥೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
ಒಳಚರಂಡಿ ವ್ಯವಸ್ಥೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಮ್ಯಾನ್‌ಹೋಲ್ ಟು ಮೆಷಿನ್ ಮೋಡ್ ಎಂದು ಕರೆದಿರುವ ಹಣಕಾಸು ಸಚಿವರು, ದೇಶದಾದ್ಯಂತ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಯಾಂತ್ರಿಕ ಪ್ರಕ್ರಿಯೆಯ ಮೂಲಕ ನಿರ್ಮೂಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಎಲ್ಲಾ ನಗರಗಳು ಮತ್ತು ಪಟ್ಟಣಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಮ್ಯಾನ್‌ಹೋಲ್‌ನಿಂದ ಮೆಷಿನ್ ಹೋಲ್ ಮೋಡ್‌ಗೆ ಶೇಕಡಾ 100 ರಷ್ಟು ಪರಿವರ್ತಿಸಲು ಸಕ್ರಿಯಗೊಳಿಸಲಾಗುವುದು ಎಂದು ಅವರು ಹೇಳಿದರು.
ಮತ್ತಷ್ಟು ಓದಿ: Budget 2023: ದೇಖೋ ಅಪ್ನಾ ದೇಶ್ ಯೋಜನೆಯಡಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ: ನಿರ್ಮಲಾ
ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು 2017 ರಿಂದ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 400 ಜನರು ಸಾವನ್ನಪ್ಪಿದ್ದಾರೆ ಎಂದು ಸಂಸತ್ತಿಗೆ ತಿಳಿಸಿದ್ದರು. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಅನ್ನು ಕೊನೆಗಾಣಿಸುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದಾರೆ.
ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ