Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಗುಡ್ ನ್ಯೂಸ್; ಇಲ್ಲಿದೆ ವಿವರ
Union Budget Highlights: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಜೆಟ್ ಅನ್ನು 66% ಹೆಚ್ಚಿಸಿ 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು (ಫೆಬ್ರವರಿ 1) ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ (Budget Speech) ನಿರ್ಮಲಾ ಸೀತಾರಾಮನ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು ಶೇ. 66ರಷ್ಟು ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ (PM Awas Yojana) ಬಜೆಟ್ ಅನ್ನು 66% ಹೆಚ್ಚಿಸಿ 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯಡಿ ಮನೆ ಖರೀದಿಸುವವರಿಗೆ ಇದು ಸಿಹಿ ಸುದ್ದಿಯಾಗಿದೆ.
2022ರ ಸೆಪ್ಟೆಂಬರ್ 29ರ ವೇಳೆಗೆ 2 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಹಂಚಿಕೊಂಡ ಅಂಕಿ-ಅಂಶಗಳು ತೋರಿಸಿವೆ. 2022-23ರ ಕೇಂದ್ರ ಬಜೆಟ್‌ನಲ್ಲಿ ಎಲ್ಲರಿಗೂ ವಸತಿ ಎಂಬ ಸರ್ಕಾರದ ಉಪಕ್ರಮಕ್ಕೆ 48,000 ಕೋಟಿ ರೂ. ಮೀಸಲಿಡಲು ಹಣಕಾಸು ಸಚಿವಾಲಯ ಪ್ರಸ್ತಾಪಿಸಿತ್ತು. ಪಿಎಂಎವೈಯ ಗುರುತಿಸಲಾದ ಅರ್ಹ ಫಲಾನುಭವಿಗಳಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ 80 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.
ಇದನ್ನೂ ಓದಿ: Budget 2023 Live: ಬಜೆಟ್ ಮಂಡನೆಗೆ ಮೊದಲೇ ಷೇರು ಮಾರುಕಟ್ಟೆಯಲ್ಲಿ ಆಶಾದಾಯಕ ಬೆಳವಣಿಗೆ, ಬಲಗೊಂಡ ರೂಪಾಯಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಅಂದರೆ ಬುಧವಾರ ಬಜೆಟ್ ಮಂಡಿಸಿ ಬಡವರಿಗಾಗಿ ಹಲವು ಬೃಹತ್ ಘೋಷಣೆಗಳನ್ನು ಮಾಡಿದ್ದಾರೆ. ಬಡವರಿಗೂ ಸ್ವಂತ ಮನೆ ಇರಬೇಕು ಎಂದು ಕೇಂದ್ರದ ಮೋದಿ ಸರ್ಕಾರ ಬಜೆಟ್‌ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಿದೆ.
The outlay for PM Awas Yojana is been enhanced by 66% to over 79,000 crores.
For poor persons who are in prison, required financial support will be provided for the bail and penalty amount: Finance Minister @nsitharamanoffc #AmritKaalBudget #UnionBudget2023 pic.twitter.com/JkpqxzICnF
— PIB India (@PIB_India) February 1, 2023
ಅಷ್ಟೇ ಅಲ್ಲ, ಬಡವರಿಗಾಗಿ ಅಂತ್ಯೋದಯ ಯೋಜನೆ ಬಗ್ಗೆಯೂ ಮೋದಿ ಸರ್ಕಾರ ದೊಡ್ಡ ಘೋಷಣೆ ಮಾಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರವು 2 ಲಕ್ಷ ಕೋಟಿ ರೂ.ಗಳನ್ನು ಭರಿಸುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಂತ್ಯೋದಯ ಯೋಜನೆಯಡಿ ಬಡವರಿಗೆ ಉಚಿತ ಆಹಾರ ಧಾನ್ಯ ಪೂರೈಕೆಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: Union Budget 2023: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲು
ಹಳೆಯ ಅಥವಾ ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳುವ ಯಾವುದೇ ಭಾರತೀಯ ವರ್ಷಕ್ಕೆ 7 ಲಕ್ಷ ರೂ. ಆದಾಯ ಪಡೆಯುತ್ತಿದ್ದರೆ ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಹಾಗೇ, ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ ಹೂಡಿಕೆ ಮಿತಿಯನ್ನು 9 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಮೊದಲು 4.5 ಲಕ್ಷ ರೂ. ಹೂಡಿಕೆಗೆ ಮಾತ್ರ ಅವಕಾಶವಿತ್ತು. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷ ರೂ. ಮಿತಿಯನ್ನು ಈ ಬಾರಿಯಿಂದ 30 ಲಕ್ಷ ರೂ.ಗೆ ಕೇಂದ್ರ ಸರ್ಕಾರವು ವಿಸ್ತರಿಸಿದೆ.