Budget 2023: ಭಾರತದ ಅಮೃತ ಕಾಲಕ್ಕೆ ಬೇಕಾದ ಎಲ್ಲ ಸೌಕರ್ಯ ಒದಗಿಸುವ ಬಜೆಟ್ – ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

Azadi ka Amrit Mahotsav time: ಇಂದು ಮಂಡಿಸಿರುವ ಕೇಂದ್ರ ಬಜೆಟ್ ಭಾರತದ ಅಮೃತ ಕಾಲಕ್ಕೆ ತಕ್ಕಂತಿದೆ ಎಂದು ಕೇಂದ್ರ ಸಂಸದ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬಣ್ಣಿಸಿದ್ದಾರೆ.

Budget 2023: ಭಾರತದ ಅಮೃತ ಕಾಲಕ್ಕೆ ಬೇಕಾದ ಎಲ್ಲ ಸೌಕರ್ಯ ಒದಗಿಸುವ ಬಜೆಟ್ - ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ
ಭಾರತದ ಅಮೃತ ಕಾಲಕ್ಕೆ ಬೇಕಾದ ಬಜೆಟ್ - ಪ್ರಲ್ಹಾದ್ ಜೋಶಿ ಬಣ್ಣನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 01, 2023 | 8:52 PM

ನವದೆಹಲಿ : ಇಂದು ಮಂಡಿಸಿರುವ ಕೇಂದ್ರ ಬಜೆಟ್ ಭಾರತದ ಅಮೃತ ಕಾಲಕ್ಕೆ (Azadi ka Amrit Mahotsav time) ತಕ್ಕಂತಿದೆ ಎಂದು ಕೇಂದ್ರ ಸಂಸದ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಬಣ್ಣಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ಸಂಭಾವ್ಯ ತೆರಿಗೆಯ ಮಿತಿಯನ್ನು ವಿಸ್ತರಿಸುವ ಮೂಲಕ ದೇಶದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರಕಾರ ವಿಶೇಷವಾಗಿ ಕಾಳಜಿ ವಹಿಸಿದೆ ಎಂದು ಪ್ರಲ್ಹಾದ ಜೋಶಿಯವರು ಸುದ್ದಿಗೋಷ್ಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು ಹಾಗೂ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು‌. ಈ ಅನುದಾನವು ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದರಿಂದ 16,000 ಕೋಟಿ ರೂ. ಈ ಯೋಜನೆಗೆ ಲಭ್ಯವಾಗಲಿದೆ. ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್‌ಗೆ ಸುಮಾರು 19 ಟಿಎಂಸಿ ಅಡಿ ನೀರಾವರಿ ಒದಗಿಸುತ್ತದೆ. ವಾಣಿ ವಿಲಾಸ ಜಲಾಶಯದ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ 10.8 ಟಿಎಂಸಿ ಅಡಿ ನೀರನ್ನು ಬಳಸಿ 350 ಕ್ಕೂ ಹೆಚ್ಚು ಟ್ಯಾಂಕ್‌ಗಳನ್ನು ತುಂಬಿಸಲು ಯೋಜಿಸಲಾಗಿದೆ ಎಂದರು‌.

ಇನ್ನು ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸಲು ಮುಂದಾಗಿರುವ ಬಗ್ಗೆಯೂ ಹರ್ಷ ವ್ಯಕ್ತಪಡಿಸಿದ ಪ್ರಲ್ಹಾದ ಜೋಶಿಯವರು, “ದೇಶದಲ್ಲಿ ಇರುವ ಬುಡಕಟ್ಟು ಜನಾಂಗದ ಮಕ್ಕಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ಬಜೆಟ್ ಮಂಡನೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ. ದೇಶದ ಕಟ್ಟಕಡೆಯ ಜನರಿಗೂ ಕೂಡ ಶಿಕ್ಷಣ ಸೌಲಭ್ಯ ಒದಗಿಸಿ ಸಾಮಾನ್ಯ ಜನರ ಜೀವನವನ್ನು ಉತ್ತಮವಾಗಿಸಲು ಶ್ರಮಿಸುತ್ತಿರುವ ಪ್ರಧಾನ ಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

ಇನ್ನು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರಿಗೂ ವಸತಿ ಕಲ್ಪಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕಳೆದ ಬಜೆಟ್‌ನಲ್ಲಿ ರೂ. 48,000 ಕೋಟಿ ಘೋಷಿಸಿದ್ದ ಕೇಂದ್ರ ಸರಕಾರ, ಈ ಬಾರಿಯ ಬಜೆಟ್‌ನಲ್ಲಿ ರೂ. 79,000 ಕೋಟಿ ಘೋಷಿಸುವ ಮೂಲಕ ಜನಸಾಮಾನ್ಯರ ಪರವಾಗಿ ಬಜೆಟ್ ಮಂಡನೆ ಮಾಡಿದೆ. ಈ ಯೋಜನೆಯಿಂದ ವಸತಿ ವಂಚಿತ ಕುಟುಂಬಗಳು ಮನೆ ನಿರ್ಮಿಸಿ ಉತ್ತಮ ಜೀವನ‌ ನಡೆಸಬಹುದಾಗಿದೆ ಎಂದರು.

ಸಣ್ಣ ಮತ್ತು ಮಧ್ಯಮ ಸ್ತರದ ಉದ್ಯಮಗಳಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರಕಾರವು, ಸಂಭಾವ್ಯ ತೆರಿಗೆಯ ಮಿತಿಯನ್ನು ವಿಸ್ತರಿಸಿದೆ. ಈ ಮೂಲಕ ದೇಶದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ವಿಶೇಷವಾಗಿ ಕಾಳಜಿ ವಹಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸುದ್ದಿಗೋಷ್ಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ಬಜೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Wed, 1 February 23

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ