Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?
ನಿರ್ಮಲಾ ಸೀತಾರಾಮನ್
Follow us
ರಶ್ಮಿ ಕಲ್ಲಕಟ್ಟ
|

Updated on:Feb 01, 2023 | 4:25 PM

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ ಎರಡು ವರ್ಷಗಳ ಕಾಲ ಶೇ.7.5 ರಷ್ಟು ಸ್ಥಿರ ಬಡ್ಡಿದರದೊಂದಿಗೆ ‘ಮಹಿಳಾ ಸಮ್ಮಾನ್ ಬಚತ್ ಪತ್ರ'(Mahila Samman Bachat Patra Scheme) ಘೋಷಿಸಿದ್ದಾರೆ. ಇದರಲ್ಲಿ ಮಹಿಳೆ ಅಥವಾ ಹೆಣ್ಣು ಮಗುವಿನ ಹೆಸರಿನಲ್ಲಿ ಠೇವಣಿ ಇಡಬಹುದು. ಗರಿಷ್ಠ ಠೇವಣಿ ಮೊತ್ತವನ್ನು ₹ 2 ಲಕ್ಷ. ಯೋಜನೆಯು ಅರ್ಧದಲ್ಲೇ ಹಣ ಹಿಂಪಡೆಯುವ ಸೌಲಭ್ಯವನ್ನು ಹೊಂದಿರುತ್ತದೆ.”ಮಹಿಳಾ ಸಮ್ಮಾನ್ ಬಚತ್ ಪತ್ರ’ ಅಡಿಯಲ್ಲಿ ಒಂದು ಬಾರಿ ಮಾಡುವ ಹೊಸ ಸಣ್ಣ ಉಳಿತಾಯ ಯೋಜನೆ. ಮಹಿಳೆಯರು ಮತ್ತು ಹುಡುಗಿಯರಿಗೆ ಠೇವಣಿ ಸೌಲಭ್ಯವು ಶೇಕಡಾ 7.5 ರ ಬಡ್ಡಿದರದೊಂದಿಗೆ ಎರಡು ವರ್ಷಗಳ ಅವಧಿಗೆ ಇರುತ್ತದೆ” ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: Union Budget: ವಾಹನ, ಟಿವಿ, ಮೊಬೈಲ್ ಫೋನ್​ ಖರೀದಿಸ್ತೀರಾ? ತುಸು ತಾಳಿ, ಕಡಿಮೆಯಾಗಲಿದೆ ದರ

“ಈ ಗುಂಪುಗಳು ಹಲವಾರು ಸಾವಿರ ಸದಸ್ಯರನ್ನು ಹೊಂದಿರುವ ದೊಡ್ಡ ಉತ್ಪಾದಕ ಉದ್ಯಮಗಳು ಅಥವಾ ಸಮೂಹಗಳ ರಚನೆಯ ಮೂಲಕ ಆರ್ಥಿಕ ಸಬಲೀಕರಣದ ಮುಂದಿನ ಹಂತವನ್ನು ತಲುಪಲು ನಾವು ಈ ಗುಂಪುಗಳನ್ನು ಸಕ್ರಿಯಗೊಳಿಸುತ್ತೇವೆ” ಎಂದು ನಿರ್ಮಲಾ ಹೇಳಿದ್ದಾರೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ ₹ 2.25 ಲಕ್ಷ ಕೋಟಿಗೂ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯಡಿ ಸುಮಾರು ಮೂರು ಕೋಟಿ ಮಹಿಳಾ ರೈತರಿಗೆ ₹ 54,000 ಕೋಟಿ ನೀಡಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ (ಎಸ್‌ಸಿಎಸ್‌ಎಸ್) ಹೂಡಿಕೆ ಮಾಡಬಹುದಾದ ಗರಿಷ್ಠ ಮೊತ್ತವನ್ನು ₹ 15 ಲಕ್ಷದಿಂದ ₹ 30 ಲಕ್ಷಕ್ಕೆ ಹೆಚ್ಚಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಅಂಚೆ ಮಾಸಿಕ ಆದಾಯ ಯೋಜನೆಯು ಮಿತಿಯನ್ನು ಹೆಚ್ಚಿಸಿದೆ. ಒಂದೇ ಹೆಸರಿನಲ್ಲಿ ₹ 4.5 ಲಕ್ಷಕ್ಕೆ ಹೋಲಿಸಿದರೆ ₹ 9 ಲಕ್ಷ ಹೂಡಿಕೆ ಮಾಡಬಹುದು.

ಮಿತಿಗಳ ವರ್ಧನೆಯು ಹೆಚ್ಚಿನ ಹಣದುಬ್ಬರದ ಸಮಯದಲ್ಲಿ ನಿಯಮಿತ ಆದಾಯವನ್ನು ಹುಡುಕುತ್ತಿರುವ ಹೂಡಿಕೆದಾರರಿಗೆ ಸಾಂತ್ವನವಾಗಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Wed, 1 February 23

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?