Income Tax Rebate: ಸಿಹಿ ಸುದ್ದಿ; ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ

Budget 2023 Income Tax Rebate; ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

Income Tax Rebate: ಸಿಹಿ ಸುದ್ದಿ; ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 01, 2023 | 1:24 PM

ನವದೆಹಲಿ: ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ (Income Tax) ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಬದಲಾವಣೆ ಘೋಷಿಸಿದರು. ಮಧ್ಯಮ ವರ್ಗದ ವೇತನದಾರ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಹೊಸ ತೆರಿಗೆ ವಿಧಾನದ ಅಡಿಯಲ್ಲಿ 7 ಲಕ್ಷ ರೂ. ಆದಾಯದವರೆಗೂ ಆದಾಯ ತೆರಿಗೆ ಇರುವುದಿಲ್ಲ ಎಂದು ಅವರು ಹೇಳಿದರು. ಹಣಕಾಸು ಸಚಿವರು ಈ ಘೋಷಣೆ ಮಾಡುತ್ತಿದ್ದಂತೆಯೇ ಆಡಳಿತ ಪಕ್ಷದ ಸಂಸದರು ಚಪ್ಪಾಳೆ ತಟ್ಟಿ ಸಂಭ್ರಮ ವ್ಯಕ್ತಪಡಿಸಿದರು.

ತೆರಿಗೆ ಸ್ಲ್ಯಾಬ್​ ಅನ್ನು 5 ಹಂತಗಳಲ್ಲಿ ಬದಲಾಯಿಸಲಾಗಿದೆ ಎಂದು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಇದರಂತೆ, 3ರಿಂದ 6 ಲಕ್ಷದ ರೂ.ವರೆಗಿನ ಆದಾಯಕ್ಕೆ ಶೇಕಡ 5ರಷ್ಟು ತೆರಿಗೆ ಇರಲಿದೆ. 6ರಿಂದ 9 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 10ರಷ್ಟು ತೆರಿಗೆ, 9ರಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 15ರಷ್ಟು ತೆರಿಗೆ ಹಾಗೂ 12ರಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ಹಾಗೂ 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ 30ರ ತೆರಿಗೆ ಇರಲಿದೆ. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳುವವರಿಗೆ 7 ಲಕ್ಷದ ರೂ.ರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ ಎಂದು ಬಜೆಟ್​​ನಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆಗೆ ಸಂಬಂಧಿಸಿದ ಮುಖ್ಯ ಘೋಷಣೆಗಳೇನು?

  1. ವಿನಾಯ್ತಿ: 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡುವ ಬಗ್ಗೆ ಪ್ರಸ್ತಾಪಿಸಿದರು.
  2. ಟ್ಯಾಕ್ಸ್​ ಸ್ಲ್ಯಾಬ್​ಗಳು: ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್​ ಸ್ಲ್ಯಾಬ್​ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದೆ. 3 ಲಕ್ಷ ರೂ.ನಿಂದ ತೆರಿಗೆ ಹಂತ ಆರಂಭವಾಗಲಿದೆ.
  3. ಸ್ಟಾಂಡರ್ಡ್​ ಡಿಡಕ್ಷನ್: ₹ 15.5 ಲಕ್ಷ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ ₹ 52,500 ಸ್ಟಾಂಡರ್ಡ್​ ಡಿಡಕ್ಷನ್ ಸೌಲಭ್ಯ ಸಿಗಲಿದೆ.
  4. ಗರಿಷ್ಠ ತೆರಿಗೆ: ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್​ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ. ಈ ಬೆಳವಣಿಗೆಯೊಂದಿಗೆ ದೇಶದಲ್ಲಿರುವ ಗರಿಷ್ಠ ತೆರಿಗೆ ದರವು ಶೇ 39ಕ್ಕೆ ಮಿತಗೊಳ್ಳಲಿದೆ.
  5. ಲೀವ್ ಎನ್​ಕ್ಯಾಶ್​ಮೆಂಟ್ (ರಜೆ ನಗದೀಕರಣ): ನಿವೃತ್ತರಾದಾಗ ಸಿಗುವ ರಜೆ ನಗದೀಕರಣ (ಲೀವ್ ಎನ್​ಕ್ಯಾಶ್​ಮೆಂಟ್) ಸೌಲಭ್ಯದ ಮೇಲೆ ಈವರೆಗೆ 3 ಲಕ್ಷ ರೂ.ವರೆಗೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು 25 ಲಕ್ಷ ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Wed, 1 February 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್