ನವದೆಹಲಿ: ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ (Income Tax) ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಬದಲಾವಣೆ ಘೋಷಿಸಿದರು. ಮಧ್ಯಮ ವರ್ಗದ ವೇತನದಾರ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಹೊಸ ತೆರಿಗೆ ವಿಧಾನದ ಅಡಿಯಲ್ಲಿ 7 ಲಕ್ಷ ರೂ. ಆದಾಯದವರೆಗೂ ಆದಾಯ ತೆರಿಗೆ ಇರುವುದಿಲ್ಲ ಎಂದು ಅವರು ಹೇಳಿದರು. ಹಣಕಾಸು ಸಚಿವರು ಈ ಘೋಷಣೆ ಮಾಡುತ್ತಿದ್ದಂತೆಯೇ ಆಡಳಿತ ಪಕ್ಷದ ಸಂಸದರು ಚಪ್ಪಾಳೆ ತಟ್ಟಿ ಸಂಭ್ರಮ ವ್ಯಕ್ತಪಡಿಸಿದರು.
ತೆರಿಗೆ ಸ್ಲ್ಯಾಬ್ ಅನ್ನು 5 ಹಂತಗಳಲ್ಲಿ ಬದಲಾಯಿಸಲಾಗಿದೆ ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಇದರಂತೆ, 3ರಿಂದ 6 ಲಕ್ಷದ ರೂ.ವರೆಗಿನ ಆದಾಯಕ್ಕೆ ಶೇಕಡ 5ರಷ್ಟು ತೆರಿಗೆ ಇರಲಿದೆ. 6ರಿಂದ 9 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 10ರಷ್ಟು ತೆರಿಗೆ, 9ರಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 15ರಷ್ಟು ತೆರಿಗೆ ಹಾಗೂ 12ರಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ಹಾಗೂ 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ 30ರ ತೆರಿಗೆ ಇರಲಿದೆ. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳುವವರಿಗೆ 7 ಲಕ್ಷದ ರೂ.ರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ಬಜೆಟ್ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Wed, 1 February 23