AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2025 Live Streaming: ಕೇಂದ್ರ ಬಜೆಟ್ ಮಂಡನೆ ಸಮಯ ಮತ್ತು ಎಲ್ಲಿ ಲೈವ್ ನೋಡಬಹುದು?

Nirmala Sitharaman 8th Budget Presentation Live Streaming: ಸಾಕಷ್ಟು ನಿರೀಕ್ಷೆ, ಅಪೇಕ್ಷೆಗಳನ್ನು ಹೊಂದಿರುವ ಕೇಂದ್ರ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡನೆ ಮಾಡಲಾಗುತ್ತಿದೆ. ಜನವರಿ 31, ಶುಕ್ರವಾರದಂದು ಬಜೆಟ್ ಅಧಿವೇಶನದ ಮೊದಲ ಹಂತ ಆರಂಭವಾಗಿ ಫೆಬ್ರುವರಿ 13ರವರೆಗೆ ಇರಲಿದೆ. ಎರಡನೇ ಹಂತದ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ.

Budget 2025 Live Streaming: ಕೇಂದ್ರ ಬಜೆಟ್ ಮಂಡನೆ ಸಮಯ ಮತ್ತು ಎಲ್ಲಿ ಲೈವ್ ನೋಡಬಹುದು?
ನಿರ್ಮಲಾ ಸೀತಾರಾಮನ್
ರಮೇಶ್ ಬಿ. ಜವಳಗೇರಾ
|

Updated on:Jan 31, 2025 | 8:07 PM

Share

ನವದೆಹಲಿ, (ಜನವರಿ 31): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1, ಶನಿವಾರದಂದು ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಮಂದಗೊಳ್ಳುವಂತೆ ತೋರುತ್ತಿರುವ ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ ನಿರೀಕ್ಷೆ, ಅಪೇಕ್ಷೆ, ಒತ್ತಡಗಳ ನಡುವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಯಾವುದಕ್ಕೆ ಹೆಚ್ಚು ಗಮನ ಕೊಡಬಹುದು ಎನ್ನುವ ಕುತೂಹಲವಂತೂ ಇದೆ.

ಕೇಂದ್ರ ಬಜೆಟ್ ಭಾಷಣ….

ನಾಳೆ ಅಂದರೆ ಫೆಬ್ರುವರಿ 1, ಶನಿವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರಿಂದ ಸಂಸತ್ತಿನಲ್ಲಿ ಬಜೆಟ್ ಮಂಡನೆ  ಆರಂಭವಾಗುತ್ತದೆ. 2024ರ ಬಜೆಟ್​ನಲ್ಲಿ ಅವರ ಭಾಷಣ ಸುದೀರ್ಘದ್ದಾಗಿತ್ತು. ಈ ಬಾರಿಯದ್ದು ಅವರಿಗೆ ಎಂಟನೇ ಬಜೆಟ್ ಆಗಿದೆ. ಇದರಲ್ಲಿ ಎರಡು ಮಧ್ಯಂತರ ಬಜೆಟ್ ಕೂಡ ಸೇರಿವೆ.

ಇದನ್ನೂ ಓದಿ: ಬಜೆಟ್ 2025: ಕೃಷಿ ವಲಯಕ್ಕೆ ಶೇ. 15ರಷ್ಟು ಹೆಚ್ಚು ಫಂಡಿಂಗ್ ಸಾಧ್ಯತೆ; ವಿವಿಧ ಕಾರ್ಯಗಳಿಗೆ ಹೆಚ್ಚು ಹಣ

ಕೇಂದ್ರ ಬಜೆಟ್ ನೇರ ಪ್ರಸಾರ

ಜನವರಿ 31ರಂದು ಬಜೆಟ್ ಅಧಿವೇಶನ ಆರಂಭ; ರಾಷ್ಟ್ರಪತಿ ಭಾಷಣ

ಬಜೆಟ್​ಗೆ ಒಂದು ದಿನ ಮೊದಲು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಬಜೆಟ್ ಅಧಿವೇಶನ ಎರಡು ಹಂತದಲ್ಲಿ ನಡೆಯುತ್ತದೆ. ಮೊದಲ ಹಂತವು ಜನವರಿ 31, ಶುಕ್ರವಾರ ಆರಂಭವಾಗುತ್ತದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಫೆಬ್ರುವರಿ 13ರವರೆಗೂ ಮೊದಲ ಹಂತದ ಬಜೆಟ್ ಸೆಷನ್ ಮುಂದುವರಿಯುತ್ತದೆ.

ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ. ಈ ವೇಳೆ, ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿಂದ ಬಜೆಟ್ ಅಧಿವೇಶನಕ್ಕೆ ಚಾಲನೆ ಸಿಕ್ಕುತ್ತದೆ.

ಜನವರಿ 31ರಂದು ಆರ್ಥಿಕ ಸಮೀಕ್ಷೆ…

ಬಜೆಟ್​ನ ಮುಂಚೆ ಆರ್ಥಿಕ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತದೆ. ವಾಡಿಕೆಯಂತೆ ಬಜೆಟ್ ಹಿಂದಿನ ದಿನವಾದ ಜನವರಿ 31ರಂದು ಆರ್ಥಿಕ ಸಮೀಕ್ಷೆಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರ ನೇತೃತ್ವದಲ್ಲಿ ಸಿದ್ದಗೊಳ್ಳುವ ಈ ವರದಿಯನ್ನು ಹಣಕಾಸು ಸಚಿವರೇ ಸಂಸತ್ತಿನಲ್ಲಿ ಪ್ರಸ್ತುತಪಡಿಸುತ್ತಾರೆ.

ಈ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಈಗಿನ ಆರ್ಥಿಕ ಸ್ಥಿತಿ ಹೇಗಿದೆ ಎನ್ನುವುದನ್ನು ಅವಲೋಕಿಸಲಾಗುತ್ತದೆ. ಆರ್ಥಿಕತೆಯ ಬಲಗಳೇನು, ದೌರ್ಬಲ್ಯಗಳೇನು ಎಂಬಿತ್ಯಾದಿ ಅಂಶಗಳನ್ನು ಪ್ರಸ್ತಾಪಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Fri, 31 January 25

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್