ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಕಿರು ಉದ್ಯಮಿಗಳಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ

ಬಜೆಟ್ ಬಗ್ಗೆ ಸಲಹೆ, ಟೀಕೆ ಎಲ್ಲವೂ ಬಂದಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ. ಎಲ್ಲಿ ನ್ಯೂನತೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಕಿರು ಉದ್ಯಮಿಗಳಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ
ಸಿಎಂ ಬೊಮ್ಮಾಯಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 16, 2022 | 1:22 PM

ಬೆಂಗಳೂರು: ಹಣಕಾಸು ಇಲಾಖೆಯನ್ನೂ ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಬುಧವಾರ ಬಜೆಟ್ (Karnataka Budget) ಮೇಲಿನ ಚರ್ಚೆಗೆ, ಪ್ರತಿಪಕ್ಷಗಳು ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದರು. ಕರ್ನಾಟಕದ ಕಿರು ಉದ್ಯಮಿಗಳಿಗೆ ₹ 75 ಕೋಟಿ ನೆರವು ಒದಗಿಸಿದ್ದೇವೆ. ಬೆಂಗಳೂರು ನಗರ ಅಭಿವೃದ್ಧಿಗೆ 6,000 ಕೋಟಿ ಮೀಸಲಿಡಲಾಗಿದೆ. ಬಜೆಟ್​ಗೆ ಮೊದಲೇ ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೂ ಅನುದಾನ ನೀಡಿದ್ದೇವೆ. ಬಜೆಟ್ ಬಗ್ಗೆ ಸಲಹೆ, ಟೀಕೆ ಎಲ್ಲವೂ ಬಂದಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ. ಎಲ್ಲಿ ನ್ಯೂನತೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕದಲ್ಲಿ ಇದೀಗ ಗ್ರಾಮ ಒನ್ ಯೋಜನೆ ಆರಂಭಿಸಲಾಗಿದೆ. ರೈತರಿಗಾಗಿ ರೈತ ಶಕ್ತಿ ಯೋಜನೆ ತಂದಿದ್ದೆವು. ಈ ಯೋಜನೆಯಿಂದ ರೈತರಿಗೆ, ದುಡಿಯುವ ವರ್ಗಕ್ಕೆ ಸಾಕಷ್ಟು ಅನುಕೂಲಗಳಾಗಿವೆ. ಆರ್ಥಿಕತೆ ಎನ್ನುವುದು ಒಟ್ಟಾರೆ ದುಡಿಮೆಯ ಫಲಶ್ರುತಿ. ನಮ್ಮ ಆದ್ಯತೆ ಜನ ಕೇಂದ್ರೀಕೃತವಾಗಿರಬೇಕು ಎನ್ನುವುದನ್ನು ನಾನು ದೃಢವಾಗಿ ನಂಬಿದ್ದೇನೆ. ಬಜೆಟ್​ ರೂಪಿಸುವಾಗಲೂ ಇದೇ ಅಂಶವನ್ನು ಮುಖ್ಯವಾಗಿ ಇರಿಸಿಕೊಂಡಿದ್ದೆ ಎಂದರು.

ಯಶಸ್ವಿನಿ ಯೋಜನೆಯನ್ನು ಮತ್ತೆ ಆರಂಭಿಸುವ ಪ್ರಸ್ತಾವ ಮಂಡಿಸಿದ್ದೇನೆ. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಗಳಿದ್ದರೂ ಗ್ರಾಮೀಣ ಪ್ರದೇಶಗಳ ಜನರಿಗೆ ಇವುಗಳ ಲಾಭ ಸಿಗುತ್ತಿಲ್ಲ. ರೈತರು ನನ್ನನ್ನು ಭೇಟಿಯಾದಾಗಲೆಲ್ಲಾ ಯಶಸ್ವಿನಿ ಮತ್ತೆ ಆರಂಭಿಸುವಂತೆ ಮನವಿ ಮಾಡುತ್ತಿದ್ದರು. ರೈತರ ಬೇಡಿಕೆಯ ಮೇರೆಗೆ ಯಶಸ್ವಿನಿ ಯೋಜನೆ ತಂದಿದ್ದೇವೆ ಎಂದು ಹೇಳಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ 371 ಜೆ ಹಾಗೂ ನಂಜುಂಡಪ್ಪ ವರದಿಗಳು ಮಂಡನೆಯಾಗಿವೆ. ಆದರೂ ಕೆಲವು ತಾಲ್ಲೂಕುಗಳು ಹಿಂದುಳಿದಿವೆ. ಆರೋಗ್ಯ, ಶಿಕ್ಷಣ ಮತ್ತು ಪೌಷ್ಟಿಕಾಂಶದ ಕೊರತೆ ಇದೆ. ಮೊದಲು‌ ಜಿಲ್ಲಾವಾರು ಪ್ಲಾನ್ ಮಾಡುತ್ತಿದ್ದೆವು. ಅದರಿಂದ ಹೆಚ್ಚು ಅನುಕೂಲವಾಗಲಿಲ್ಲ. ಹೀಗಾಗಿ ಸೆಕ್ಟರ್​ವಾರು ಯೋಜನೆ ಜಾರಿ ಮಾಡುತ್ತಿದ್ದೇವೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ಕೊಟ್ಟಿದ್ದೇವೆ. 93 ತಾಲೂಕುಗಳು ಶಿಕ್ಷಣದಲ್ಲಿ ಹಿಂದುಳಿದಿವೆ. 102 ತಾಲೂಕುಗಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿದೆ. ಇದ್ದ ಸಂಪನ್ಮೂಲಗಳನ್ನು ಜನಕಲ್ಯಾಣಕ್ಕೆ ಬಳಸಿದ್ದೇವೆ. ಮಕ್ಕಳ ಶಿಕ್ಷಣ, ಪೌಷ್ಟಿಕತೆ ಕೊರತೆ ಸರಿಪಡಿಸಲು ಪ್ರಯತ್ನಿಸಿದ್ದೇವೆ. ಅಂಬೇಡ್ಕರ್ ವಸತಿ ನಿಲಯಕ್ಕೆ ಒತ್ತು ಕೊಟ್ಟಿದ್ದೇವೆ ಎಂದು ಹೇಳಿದರು.

ಬಜೆಟ್​ ಮೇಲಿನ ಚರ್ಚೆಯಲ್ಲಿ 19 ಸದಸ್ಯರು ಭಾಗಿಯಾಗಿದ್ದರು. 23 ಗಂಟೆ 39 ನಿಮಿಷಗಳ ಅವಧಿಯಲ್ಲಿ ಚರ್ಚೆ ನಡೆಯಿತು. ಕೊರೊನಾ ಸಂಕಷ್ಟದ ನಡುವೆಯೂ ಕಳೆದ ಐದಾರು ತಿಂಗಳಿನಿಂದ ರಾಜ್ಯದ ಆರ್ಥಿಕತೆ ಉತ್ತಮವಾಗಿದೆ. ಇದಕ್ಕೆ ದುಡಿಯುವ ವರ್ಗ, ವ್ಯಾಪಾರಸ್ಥರು, ರೈತರು, ಕಾರ್ಮಿಕರು ಕಾರಣ ಎಂದು ಬೊಮ್ಮಾಯಿ ಶ್ಲಾಘಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಮಕ್ಕಳಿಗೆ ಅಗತ್ಯ ಪ್ಲಾಟ್​ಫಾರ್ಮ್​ ರೂಪಿಸಿಕೊಡುತ್ತಿದ್ದೇವೆ. ಹಳ್ಳಿ‌ ಮಕ್ಕಳಿಗೆ ಹೆಚ್ಚು ಅನುಕೂಲ ಸಿಗಬೇಕು ಎನ್ನುವುದು ನಮ್ಮ ಉದ್ದೇಶ. ಡಿಜಿಟಲ್ ರೂಪದಲ್ಲಿಯೇ ಎಲ್ಲ ಅಗತ್ಯ ಮಾಹಿತಿ ಒದಗಿಸುತ್ತೇವೆ. ಟಾಟಾ ಕಂಪನಿಯ ಸಹಭಾಗಿತ್ವದಲ್ಲಿ ಐಟಿಐ ಕಾಲೇಜುಗಳಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಕೌಶಲ ಅಭಿವೃದ್ಧಿಯಾಗಬೇಕು ಎಂಬ ನಿಟ್ಟಿನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದೇವೆ. ಇದರಿಂದ ಸ್ವಯಂ ಉದ್ಯೋಗ ಜಾಸ್ತಿ ಆಗಬೇಕು. ಅದಕ್ಕಾಗಿ ಹೊಸ ಉದ್ಯೋಗ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ಏಪ್ರಿಲ್ ತಿಂಗಳಲ್ಲಿ ಹೊಸ ಉದ್ಯೋಗ ನೀತಿ ಜಾರಿಯಾಗಲಿದೆ. ನಮ್ಮ ಯುವಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸಿಗಬೇಕು ಎನ್ನುವುದು ನಮ್ಮ ಉದ್ದೇಶ. ಹೆಚ್ಚು ಜನರಿಗೆ ಉದ್ಯೋಗ ಕೊಡುವ ಉದ್ಯಮಿಗಳಿಗೆ ಸರ್ಕಾರದ ವತಿಯಿಂದ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಬಜೆಟ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಆದ್ಯತೆ ನೀಡಲಾಗಿದೆ. ಅವರಿಗೂ ಮನೆ ಕಟ್ಟಿಸಿಕೊಡುವ ಯೋಜನೆ ರೂಪಿಸುತ್ತಿದ್ದೇವೆ. ಇಂಥ ಯೋಜನೆಯನ್ನು ಜಾರಿ ಮಾಡುತ್ತಿರುವುದು ಇದೇ ಮೊದಲು ಎಂದರು.

ಇದನ್ನೂ ಓದಿ: Hijab Verdict: ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಆನ್ ಲೈನ್ ಗ್ಯಾಂಬ್ಲಿಂಗ್ ತಡೆ ಕಾನೂನು ತಂದೆವು, ಆದ್ರೆ ಹೈಕೋರ್ಟ್ ಮತ್ತೆ ತಡೆ ಕೊಟ್ಟಿದೆ- ಸದನದಲ್ಲಿ ಸಿಎಂ ಬೊಮ್ಮಾಯಿ ಅಸಹಾಯಕತೆ

Published On - 1:21 pm, Wed, 16 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್