AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಬಗ್ಗೆ ದೊಡ್ಡ ಮಟ್ಟಿಗೆ ಹೇಳುವಂತದ್ದು ಏನೂ ಇಲ್ಲ; ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯ

ಬಜೆಟ್ ಬಗ್ಗೆ ದೊಡ್ಡ ಮಟ್ಟಿಗೆ ಹೇಳುವಂತದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ಬಜೆಟ್ ಬಗ್ಗೆ ದೊಡ್ಡ ಮಟ್ಟಿಗೆ ಹೇಳುವಂತದ್ದು ಏನೂ ಇಲ್ಲ; ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: sandhya thejappa|

Updated on:Feb 01, 2022 | 5:24 PM

Share

ಬೆಂಗಳೂರು: ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್​ನಲ್ಲಿ (Budget) ಅಂಥಹ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಟುವಾಗಿ ಟೀಕಿಸಿದ್ದಾರೆ. ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್. ಸಾಮಾನ್ಯರ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೊವಿಡ್, ಬೆಲೆ ಏರಿಕೆಯಿಂದ ಬಸವಳಿದ ಬಡ ಜನರ ಬಗ್ಗೆ ಕನಿಕರ ತೋರಿಲ್ಲ. ಕೊವಿಡ್ ಸಂಕಷ್ಟದ ನಂತರ ದೇಶದಲ್ಲಿ ಬಡತನಕ್ಕೆ ಹೆಚ್ಚು ಜನರು ದೂಡಲ್ಪಡುತ್ತಿದ್ದರೆ, ಸಿರಿವಂತರು ಮತ್ತಷ್ಟು ಸಿರಿವಂತರಾಗುತ್ತಿದ್ದಾರೆ. ಈ ಬಗ್ಗೆ ಬಜೆಟ್​ನಲ್ಲಿ ಪರಿಹಾರ ನೀಡಿಲ್ಲ ಅಂತ ಕುಮಾರಸ್ವಾಮಿ ಹೇಳಿದರು.

ಬಜೆಟ್ ಬಗ್ಗೆ ದೊಡ್ಡ ಮಟ್ಟಿಗೆ ಹೇಳುವಂತದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಬಜೆಟ್ ಬಗ್ಗೆ ಇನ್ನೂ ಸಂಪೂರ್ಣವಾಗಿ ಗಮನಿಸಿಲ್ಲ. ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ – ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ. ನದಿ ಜೋಡಣೆ ವಿಚಾರ ಬರಿ ಚರ್ಚೆಯಲ್ಲಿ. ಇದೆ ಕಾರ್ಯರೂಪಕ್ಕೆ ಬರಬೇಕಿದೆ.

ಹೆಚ್ಚಿನ ತೆರಿಗೆ ವಿಧಿಸಿಲ್ಲ ಅನ್ನುವುದು ಬಿಟ್ಟರೇ ಬೇರೆ ಏನೂ ಇಲ್ಲ. ಯಾವುದೇ ಹೊಸ ರೀತಿಯ ಅಭಿವೃದ್ದಿ ಕಾರ್ಯಕ್ರಮವಿಲ್ಲ. ಈ ವರ್ಷವನ್ನು ಕಳೆಯುವ ಬಜೆಟ್ ಅಷ್ಟೇ ಇದು ಎಂದು ಅವರು ಟೀಕಿಸಿದರು.

ನಿರಾಸದಾಯಕ ಬಜೆಟ್- ಸಂಸದ ಪ್ರಜ್ವಲ್ ರೇವಣ್ಣ: ಇದು ಬಹಳ ನಿರಾಸದಾಯಕ ಬಜೆಟ್. ಬಜೆಟ್ ಮೇಲೆ ನಂಬಿಕೆಯೇ ಹೋಗಿದೆ. 25 ಜನ ಬಿಜೆಪಿ ಎಂಪಿಗಳು ಕರ್ನಾಟಕದಿಂದ ಇದ್ದಾರೆ, ಆದರೆ ಏನ್ ತಂದರು ರಾಜ್ಯಕ್ಕೆ? ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ಫೇಲ್ ಬಜೆಟ್. ಬಹಳಷ್ಟು ನಿರೀಕ್ಷೆಗಳು ಇದ್ದವು. ಕಾವೇರಿ- ಮೇಕೆದಾಟು ವಿಚಾರಕ್ಕೆ ಬಜೆಟ್ನಲ್ಲಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಬಜೆಟ್ನಲ್ಲಿ ರಾಜ್ಯಗಳ ಸಹಮತ ಇದ್ದರೇ ಮಾತ್ರ ಜೋಡೆ ಎಂದಿದ್ದಾರೆ. ಇದು ಎಷ್ಟರ ಮಟ್ಟಿಗೆ ನ್ಯಾಯ. ಇದು ಕಳಪೆ ಬಜೆಟ್. ಕರ್ನಾಟಕ ಕ್ಕೆ ಏನು ಕೊಟ್ಟಿಲ್ಲ ಅಂತ ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು

D. R. Bendre : ಹಿಟ್ಲರ್ ಬಗ್ಗೆ ಕವಿತೆ ಬರೆದ ಕರ್ನಾಟಕದ ಈ ‘ಹರ್ ಬಂಡರ್’ ಮಹಾಕವಿಗಳೂ ಮತ್ತವರ ಲೀಲಾಪ್ರಸಂಗವೂ

Published On - 5:23 pm, Tue, 1 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ