ಬೆಂಗಳೂರು: ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್ನಲ್ಲಿ (Budget) ಅಂಥಹ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಕಟುವಾಗಿ ಟೀಕಿಸಿದ್ದಾರೆ. ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್. ಸಾಮಾನ್ಯರ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೊವಿಡ್, ಬೆಲೆ ಏರಿಕೆಯಿಂದ ಬಸವಳಿದ ಬಡ ಜನರ ಬಗ್ಗೆ ಕನಿಕರ ತೋರಿಲ್ಲ. ಕೊವಿಡ್ ಸಂಕಷ್ಟದ ನಂತರ ದೇಶದಲ್ಲಿ ಬಡತನಕ್ಕೆ ಹೆಚ್ಚು ಜನರು ದೂಡಲ್ಪಡುತ್ತಿದ್ದರೆ, ಸಿರಿವಂತರು ಮತ್ತಷ್ಟು ಸಿರಿವಂತರಾಗುತ್ತಿದ್ದಾರೆ. ಈ ಬಗ್ಗೆ ಬಜೆಟ್ನಲ್ಲಿ ಪರಿಹಾರ ನೀಡಿಲ್ಲ ಅಂತ ಕುಮಾರಸ್ವಾಮಿ ಹೇಳಿದರು.
ಬಜೆಟ್ ಬಗ್ಗೆ ದೊಡ್ಡ ಮಟ್ಟಿಗೆ ಹೇಳುವಂತದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಬಜೆಟ್ ಬಗ್ಗೆ ಇನ್ನೂ ಸಂಪೂರ್ಣವಾಗಿ ಗಮನಿಸಿಲ್ಲ. ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ – ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ. ನದಿ ಜೋಡಣೆ ವಿಚಾರ ಬರಿ ಚರ್ಚೆಯಲ್ಲಿ. ಇದೆ ಕಾರ್ಯರೂಪಕ್ಕೆ ಬರಬೇಕಿದೆ.
ಹೆಚ್ಚಿನ ತೆರಿಗೆ ವಿಧಿಸಿಲ್ಲ ಅನ್ನುವುದು ಬಿಟ್ಟರೇ ಬೇರೆ ಏನೂ ಇಲ್ಲ. ಯಾವುದೇ ಹೊಸ ರೀತಿಯ ಅಭಿವೃದ್ದಿ ಕಾರ್ಯಕ್ರಮವಿಲ್ಲ. ಈ ವರ್ಷವನ್ನು ಕಳೆಯುವ ಬಜೆಟ್ ಅಷ್ಟೇ ಇದು ಎಂದು ಅವರು ಟೀಕಿಸಿದರು.
ನಿರಾಸದಾಯಕ ಬಜೆಟ್- ಸಂಸದ ಪ್ರಜ್ವಲ್ ರೇವಣ್ಣ:
ಇದು ಬಹಳ ನಿರಾಸದಾಯಕ ಬಜೆಟ್. ಬಜೆಟ್ ಮೇಲೆ ನಂಬಿಕೆಯೇ ಹೋಗಿದೆ. 25 ಜನ ಬಿಜೆಪಿ ಎಂಪಿಗಳು ಕರ್ನಾಟಕದಿಂದ ಇದ್ದಾರೆ, ಆದರೆ ಏನ್ ತಂದರು ರಾಜ್ಯಕ್ಕೆ? ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ಫೇಲ್ ಬಜೆಟ್. ಬಹಳಷ್ಟು ನಿರೀಕ್ಷೆಗಳು ಇದ್ದವು. ಕಾವೇರಿ- ಮೇಕೆದಾಟು ವಿಚಾರಕ್ಕೆ ಬಜೆಟ್ನಲ್ಲಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಬಜೆಟ್ನಲ್ಲಿ ರಾಜ್ಯಗಳ ಸಹಮತ ಇದ್ದರೇ ಮಾತ್ರ ಜೋಡೆ ಎಂದಿದ್ದಾರೆ. ಇದು ಎಷ್ಟರ ಮಟ್ಟಿಗೆ ನ್ಯಾಯ. ಇದು ಕಳಪೆ ಬಜೆಟ್. ಕರ್ನಾಟಕ ಕ್ಕೆ ಏನು ಕೊಟ್ಟಿಲ್ಲ ಅಂತ ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ
ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು
D. R. Bendre : ಹಿಟ್ಲರ್ ಬಗ್ಗೆ ಕವಿತೆ ಬರೆದ ಕರ್ನಾಟಕದ ಈ ‘ಹರ್ ಬಂಡರ್’ ಮಹಾಕವಿಗಳೂ ಮತ್ತವರ ಲೀಲಾಪ್ರಸಂಗವೂ
Published On - 5:23 pm, Tue, 1 February 22