Package for Bihar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಇಲ್ಲ; ಆದರೆ, 26,000 ಕೋಟಿ ರೂ ಕೊಡುಗೆ

Union budget 2024: ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಬಿಹಾರ ಮತ್ತು ಆಂಧ್ರ ರಾಜ್ಯಗಳಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡದೆ ಹೋದರೂ 26,000 ಕೋಟಿ ರೂ ಪ್ಯಾಕೇಜ್ ಘೋಷಿಸಲಾಗಿದೆ. ಇದರಲ್ಲಿ ರಸ್ತೆ ಯೋಜನೆ ಸೇರಿದಂತೆ ಹಲವು ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒಳಗೊಳ್ಳಲಾಗಿದೆ.

Package for Bihar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಇಲ್ಲ; ಆದರೆ, 26,000 ಕೋಟಿ ರೂ ಕೊಡುಗೆ
ಬಿಹಾರ ಸಿಎಂ ನಿತೀಶ್ ಕುಮಾರ್

Updated on: Jul 23, 2024 | 12:13 PM

ನವದೆಹಲಿ, ಜುಲೈ 23: ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆಗೆ ಕೇಂದ್ರ ಸರ್ಕಾರ ಸಮ್ಮತಿಸಿಲ್ಲ. ಅದರೆ, ಆ ರಾಜ್ಯಕ್ಕೆ ಬಜೆಟ್​ನಲ್ಲಿ ದೊಡ್ಡ ಕೊಡುಗೆ ನೀಡಲಾಗಿದೆ. ಬಿಹಾರದಲ್ಲಿ ಮೂಲಸೌಕರ್ಯ ಅಭಿವೃದ್ದಿ ಮೊದಲಾದ ಯೋಜನೆಗಳಿಗೆ ಬರೋಬ್ಬರಿ 26,000 ಕೋಟಿ ರೂ ನೀಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ದಿಗೆ ಯೋಜನೆ ರೂಪಿಸಲಾಗುವುದು ಎಂದೂ ಹೇಳಿದ್ದಾರೆ.

ಅಮೃತಸರ್ ಕೋಲ್ಕತಾ ಕೈಗಾರಿಕಾ ಕಾರಿಡಾರ್ ಯೋಜನೆ ಅಡಿಯಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಕೇಂದ್ರವೊಂದನ್ನು ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಪಟ್ನಾ ಪುರ್ನಿಯಾ ಎಕ್ಸ್​ಪ್ರೆಸ್​ವೇ; ಬುಕ್ಸರ್ ಭಾಗಲ್​ಪುರ್ ಹೆದ್ದಾರಿ; ಬೋಧಗಯಾ, ರಾಜಗೀರ್, ವೈಶಾಲಿ, ದರ್ಭಾಂಗ ಹೆದ್ದಾರಿ; ಬಕ್ಸಾರ್​ನಲ್ಲಿ ಗಂಗಾ ನದಿ ಮೇಲೆ ಎರಡು ಪಥದ ಸೇತುವೆ ನಿರ್ಮಾಣ, ಈ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಬಜೆಟ್ ಲೈವ್ ಬ್ಲಾಗ್ ಲಿಂಕ್

ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ಮೆಡಿಕಲ್ ಕಾಲೇಜು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸ್ಥಾಪಿಸಲಾಗುವುದು. ಬಿಹಾರದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಘಟಕವೊಂದನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ ಆಂಧ್ರಪ್ರದೇಶ ರಾಜ್ಯಕ್ಕೂ ವಿಶೇಷ ಸ್ಥಾನಮಾನ ಬದಲು ಬಜೆಟ್​ನಲ್ಲಿ ಆ ರಾಜ್ಯಕ್ಕೆ ಸಾಕಷ್ಟು ಅನುದಾನಗಳನ್ನು ಕೊಡಲಾಗಿದೆ. ಈ ಮೂಲಕ ಎನ್​ಡಿಎ ಮಿತ್ರ ಪಕ್ಷಗಳನ್ನು ತೃಪ್ತಿಪಡಿಸುವ ಪ್ರಯತ್ನ ನಡೆದಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ