AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​

Budget 2022: ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
TV9 Web
| Updated By: Lakshmi Hegde|

Updated on:Feb 01, 2022 | 9:49 AM

Share

ಸಂಸತ್ತಿನ ಬಜೆಟ್​ ಅಧಿವೇಶನ (Budget Session 2022) ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಅಂದರೆ ಕೆಲವೇ ಹೊತ್ತಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮುಂಗಡ ಪತ್ರವನ್ನು ಮಂಡನೆ ಮಾಡಿದ ಒಂದು ತಾಸಿನಲ್ಲಿ, ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಯಲ್ಲೂ ಪ್ರಸ್ತುತ ಪಡಿಸುವರು. ಆದಾಯ ಮತ್ತು ಖರ್ಚುಗಳ ಮಾಹಿತಿ ನೀಡಲಿದ್ದಾರೆ.  ಈಗಾಗಲೇ ದೆಹಲಿಯ ನಾರ್ತ್​ ಬ್ಲಾಕ್​​ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿರುವ ನಿರ್ಮಲಾ ಸೀತಾರಾಮನ್​, ಅಲ್ಲಿ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ. ಅದಾದ ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿಯಾದರು. 

ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ. ಕಳೆದ ವರ್ಷ ಕೂಡ ಅವರು ಟ್ಯಾಬ್​​ ಸಹಾಯದಿಂದಲೇ ಬಜೆಟ್​ ಓದಿದ್ದಾರೆ. ಕೊರೊನಾ ಕಾರಣದಿಂದ ಕಳೆದವರ್ಷದಿಂದಲೂ ಕಾಗದ ರಹಿತ ಬೆಜಟ್​ ಮಂಡನೆಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹಣಕಾಸು ಸಚಿವಾಲಯದಿಂದ ಹೊರಡುವ ಮುನ್ನ ಅಲ್ಲಿನ ಅಧಿಕಾರಿಗಳೊಂದಿಗೆ ಗ್ರೂಪ್​ ಫೋಟೋ ತೆಗೆಸಿಕೊಂಡಿದ್ದಾರೆ.

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಜೆಟ್​ ಅಧಿವೇಶನಕ್ಕೂ ಮೊದಲು ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳ, ಎಲ್ಲ ಸಂಸದರೂ ಮಕ್ತ ಮನಸಿನಿಂದ ಡಿಬೇಟ್​​ನಲ್ಲಿ ಪಾಲ್ಗೊಳ್ಳಿ.  ಆದರೆ ಮಾಡುವ ಚರ್ಚೆ ಮತ್ತು ಡಿಬೇಟ್​​ಗಳು ಅರ್ಥಪೂರ್ಣವಾಗಿರಲಿ. ಭಾರತವನ್ನು ಅಭಿವೃದ್ಧಿಯ ಹಾದಿಯಲ್ಲಿ ಇನ್ನಷ್ಟು ಮುನ್ನಡೆಸಲು ಪೂರಕವಾಗಿರಲಿ ಎಂದು ಹೇಳಿದ್ದರು.

ಇದನ್ನೂ ಓದಿ: Budget 2022 LIVE: ಇಂದು 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ; ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 1 February 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!