AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Interim Budget 2024: ಸಂಸತ್​ನಲ್ಲಿ ಇಂದು ಮಧ್ಯಂತರ ಬಜೆಟ್ ಮಂಡನೆ; ಏನಿದೆ ನಿರೀಕ್ಷೆ?

FM Nirmala Sitharaman To Present budget: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್​ನಲ್ಲಿ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಫೆ. 1, ಬೆಳಗ್ಗೆ 11 ಗಂಟೆಗೆ ಬಜೆಟ್ ಭಾಷಣ ಆರಂಭವಾಗಲಿದ್ದು, ಎರಡರಿಂದ ಎರಡೂವರೆ ತಾಸು ಇರಲಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು ಸತತ ಆರನೇ ಬಜೆಟ್ ಆಗಿದ್ದು, ಮೊರಾರ್ಜಿ ದೇಸಾಯಿ ಅವರ ದಾಖಲೆ ಸರಿಗಟ್ಟಿದ್ದಾರೆ.

Interim Budget 2024: ಸಂಸತ್​ನಲ್ಲಿ ಇಂದು ಮಧ್ಯಂತರ ಬಜೆಟ್ ಮಂಡನೆ; ಏನಿದೆ ನಿರೀಕ್ಷೆ?
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2024 | 6:00 AM

Share

ನವದೆಹಲಿ, ಫೆಬ್ರುವರಿ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಗುರುವಾರ (ಫೆ. 1)ಸಂಸತ್​ನಲ್ಲಿ ಮಧ್ಯಂತರ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಅವರ ಬಜೆಟ್ ಭಾಷಣ (budget speech) ಶುರುವಾಗಲಿದೆ. ಮಧ್ಯಾಹ್ನ 1ರಿಂದ 2 ಗಂಟೆಯವರೆಗೆ ಭಾಷಣ ಮುಂದುವರಿಯಬಹುದು. ಎನ್​ಡಿಎ-2 ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು ಸತತ ಆರನೇ ಬಜೆಟ್ ಕೂಡ ಆಗಿದೆ. ಮೊದಲ ಮಧ್ಯಂತರ ಬಜೆಟ್ ಕೂಡ ಅವರದ್ದಾಗಿದೆ. ಚುನಾವಣೆಗೆ ಮುಂಚಿನ ಬಜೆಟ್ ಇದಾದ್ದರಿಂದ ಸಾಕಷ್ಟು ಕುತೂಹಲವೂ ಇದೆ. ಆದರೆ, ಚುನಾವಣೆ ಬಳಿಕ ಮತ್ತೆ ಪೂರ್ಣ ಬಜೆಟ್ ಮಂಡನೆ ಆಗುವುದರಿಂದ ಈ ಮಧ್ಯಂತರ ಬಜೆಟ್​ಗೆ ಹೆಚ್ಚಿನ ಮಹತ್ವ ಇರುವುದಿಲ್ಲ. ಆದರೂ ಕೂಡ ಸರ್ಕಾರದ ಮುಂದಿನ ದಾರಿ ಬಗ್ಗೆ ಇರುವ ದೃಷ್ಟಿಕೋನ ಈ ಬಜೆಟ್​ನಿಂದ ತಿಳಿಯಬಹುದು.

ನಿನ್ನೆ ಜನವರಿ 31ರಂದು ಬಜೆಟ್ ಅಧಿವೇಶನ ಚಾಲನೆಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್​ನಲ್ಲಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದರು. ದೇಶದ ಆರ್ಥಿಕ ಬೆಳವಣಿಗೆಯ ವಿವರ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಜೆಟ್ ಅನ್ನು ನಾರಿ ಶಕ್ತಿ ವೈಭವ ಎಂದು ಬಣ್ಣಿಸಿದರು. ಬಜೆಟ್ ಅಧಿವೇಶನ ಫೆಬ್ರುವರಿ 9ರವರೆಗೂ ನಡೆಯಲಿದೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ ಉಳಿದ ದಿನಗಳು ಸಂಸತ್​ನಲ್ಲಿ ಅಧಿವೇಶನ ನಡೆಯಲಿದ್ದು, ಬಜೆಟ್ ಮೇಲೆ ಚರ್ಚೆಗಳಾಗಬಹುದು.

ಇದನ್ನೂ ಓದಿ: Economic Survey 2024: ಈ ಬಾರಿ ಬಜೆಟ್ ಮುಂಚಿನ ಆರ್ಥಿಕ ಸಮೀಕ್ಷೆ ಯಾಕಿಲ್ಲ? ಅದರ ಬದಲು ಬಿಡುಗಡೆ ಆದ ಬೇರೆ ವರದಿಯಲ್ಲಿ ಏನಿದೆ?

ಬಜೆಟ್ ಹಿಂದಿನ ದಿನ ಆರ್ಥಿಕ ಸಮೀಕ್ಷೆ ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಈ ಬಾರಿ ಮಧ್ಯಂತರ ಬಜೆಟ್ ಆದ್ದರಿಂದ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಿಲ್ಲ. ಅದರ ಬದಲು ಜನವರಿ 29ರಂದು ಆರ್ಥಿಕ ವ್ಯವಹಾರಗಳ ಸಚಿವಾಲಯದಿಂದ ದೇಶದ ಆರ್ಥಿಕ ಪರಿಸ್ಥಿತಿಯ ಪರಾಮರ್ಶೆ ವರದಿ ಮಾತ್ರ ಪ್ರಕಟವಾಗಿತ್ತು. ಅದು ದೇಶದ ಮುಂದಿನ ಎರಡು ವರ್ಷಗಳ ಆರ್ಥಿಕ ಬೆಳವಣಿಗೆಯ ಅಂದಾಜು ಸೇರಿದಂತೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿತ್ತು.

ಈ ಮಧ್ಯಂತರ ಬಜೆಟ್​ನಲ್ಲಿ ಲೇಖಾನುದಾನಕ್ಕೆ ಸಮ್ಮತಿ ಪಡೆಯಲಾಗುತ್ತದೆ. ಮುಂದಿನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಸರ್ಕಾರದ ಖರ್ಚು ವೆಚ್ಚಗಳಿಗೆ ಲೇಖಾನುದಾನ ಅನುವು ಮಾಡಿಕೊಡುತ್ತದೆ.

ಈ ಬಜೆಟ್​ನಲ್ಲಿ ಸಂಬಳದಾರರಿಗೆ ಬಹಳ ಮುಖ್ಯವಾದ ಆದಾಯ ತೆರಿಗೆ ನಿಯಮಗಳಲ್ಲಿ ಒಂದಿಷ್ಟು ಬದಲಾವಣೆಗಳಾಗಬಹುದು. ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿ ಹೆಚ್ಚುವ ಸಾಧ್ಯತೆ ಇದೆ ಎಂದು ಹಲವರು ನಿರೀಕ್ಷಿಸಿದ್ದಾರೆ. ಹೆಲ್ತ್ ಇನ್ಷೂರೆನ್ಸ್ ಪ್ರೀಮಿಯಮ್ ಇತ್ಯಾದಿ ವೆಚ್ಚಕ್ಕೆ ತೆರಿಗೆ ವಿನಾಯಿತಿ ಮಿತಿ ಹೆಚ್ಚಿಸಬೇಕೆಂಬ ಕೂಗು ಇದೆ.

ಇದನ್ನೂ ಓದಿ: Finance Commission: 16ನೇ ಫೈನಾನ್ಸ್ ಕಮಿಷನ್ ಸದಸ್ಯರ ನೇಮಕ; ಏನಿರುತ್ತದೆ ಈ ಆಯೋಗದ ಪಾತ್ರ? ಯಾರಿದ್ದಾರೆ ಈ ಆಯೋಗದಲ್ಲಿ?

ಹಾಗೆಯೇ, ಇವಿ ವಲಯ, ಕೃಷಿ, ಸಣ್ಣ ಉದ್ದಿಮೆ ಮೊದಲಾದವುಗಳು ಒಂದಷ್ಟು ನೀತಿ ಬದಲಾವಣೆಗಳನ್ನು ಬಯಸಿವೆ. ಒಟ್ಟಾರೆಯಾಗಿ, ಬೆಳಗ್ಗೆ 11 ಗಂಟೆಯ ಬಳಿಕ ಬಜೆಟ್​ನಲ್ಲಿ ಯಾವೆಲ್ಲಾ ಹೂರಣಗಳಿವೆ ಎಂಬುದು ಸ್ಪಷ್ಟವಾಗುತ್ತದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​