AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2025 Live Streaming: ಕೇಂದ್ರ ಬಜೆಟ್ ಮಂಡನೆ ದಿನ, ಸಮಯ ಮತ್ತು ಎಲ್ಲಿ ವೀಕ್ಷಿಸುವುದು?

Nirmala Sitharaman 8th Budget Presentation Live Streaming: ಸಾಕಷ್ಟು ನಿರೀಕ್ಷೆ, ಅಪೇಕ್ಷೆಗಳನ್ನು ಹೊಂದಿರುವ ಕೇಂದ್ರ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡನೆ ಮಾಡಲಾಗುತ್ತಿದೆ. ಜನವರಿ 31, ಶುಕ್ರವಾರದಂದು ಬಜೆಟ್ ಅಧಿವೇಶನದ ಮೊದಲ ಹಂತ ಆರಂಭವಾಗಿ ಫೆಬ್ರುವರಿ 13ರವರೆಗೆ ಇರಲಿದೆ. ಎರಡನೇ ಹಂತದ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ.

Budget 2025 Live Streaming: ಕೇಂದ್ರ ಬಜೆಟ್ ಮಂಡನೆ ದಿನ, ಸಮಯ ಮತ್ತು ಎಲ್ಲಿ ವೀಕ್ಷಿಸುವುದು?
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jan 31, 2025 | 5:55 PM

Share

ನವದೆಹಲಿ, ಜನವರಿ 30: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1, ಶನಿವಾರದಂದು ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಮಂದಗೊಳ್ಳುವಂತೆ ತೋರುತ್ತಿರುವ ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ ನಿರೀಕ್ಷೆ, ಅಪೇಕ್ಷೆ, ಒತ್ತಡಗಳ ನಡುವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಯಾವುದಕ್ಕೆ ಹೆಚ್ಚು ಗಮನ ಕೊಡಬಹುದು ಎನ್ನುವ ಕುತೂಹಲವಂತೂ ಇದೆ.

ಕೇಂದ್ರ ಬಜೆಟ್ ಭಾಷಣ….

ಫೆಬ್ರುವರಿ 1, ಶನಿವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರಿಂದ ಸಂಸತ್ತಿನಲ್ಲಿ ಬಜೆಟ್ ಮಂಡನೆ ಆರಂಭವಾಗುತ್ತದೆ. 2024ರ ಬಜೆಟ್​ನಲ್ಲಿ ಅವರ ಭಾಷಣ ಸುದೀರ್ಘದ್ದಾಗಿತ್ತು. ಈ ಬಾರಿಯದ್ದು ಅವರಿಗೆ ಎಂಟನೇ ಬಜೆಟ್ ಆಗಿದೆ. ಇದರಲ್ಲಿ ಎರಡು ಮಧ್ಯಂತರ ಬಜೆಟ್ ಕೂಡ ಸೇರಿವೆ.

ಕೇಂದ್ರ ಬಜೆಟ್ ನೇರ ಪ್ರಸಾರ

ಜನವರಿ 31ರಂದು ಬಜೆಟ್ ಅಧಿವೇಶನ ಆರಂಭ; ರಾಷ್ಟ್ರಪತಿ ಭಾಷಣ

ಬಜೆಟ್​ಗೆ ಒಂದು ದಿನ ಮೊದಲು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಬಜೆಟ್ ಅಧಿವೇಶನ ಎರಡು ಹಂತದಲ್ಲಿ ನಡೆಯುತ್ತದೆ. ಮೊದಲ ಹಂತವು ಜನವರಿ 31, ಶುಕ್ರವಾರ ಆರಂಭವಾಗುತ್ತದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಫೆಬ್ರುವರಿ 13ರವರೆಗೂ ಮೊದಲ ಹಂತದ ಬಜೆಟ್ ಸೆಷನ್ ಮುಂದುವರಿಯುತ್ತದೆ.

ಇದನ್ನೂ ಓದಿ: ಬಜೆಟ್ 2025: ಕೃಷಿ ವಲಯಕ್ಕೆ ಶೇ. 15ರಷ್ಟು ಹೆಚ್ಚು ಫಂಡಿಂಗ್ ಸಾಧ್ಯತೆ; ವಿವಿಧ ಕಾರ್ಯಗಳಿಗೆ ಹೆಚ್ಚು ಹಣ

ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ. ಈ ವೇಳೆ, ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿಂದ ಬಜೆಟ್ ಅಧಿವೇಶನಕ್ಕೆ ಚಾಲನೆ ಸಿಕ್ಕುತ್ತದೆ.

ಜನವರಿ 31ರಂದು ಆರ್ಥಿಕ ಸಮೀಕ್ಷೆ…

ಬಜೆಟ್​ನ ಮುಂಚೆ ಆರ್ಥಿಕ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತದೆ. ವಾಡಿಕೆಯಂತೆ ಬಜೆಟ್ ಹಿಂದಿನ ದಿನವಾದ ಜನವರಿ 31ರಂದು ಆರ್ಥಿಕ ಸಮೀಕ್ಷೆಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರ ನೇತೃತ್ವದಲ್ಲಿ ಸಿದ್ದಗೊಳ್ಳುವ ಈ ವರದಿಯನ್ನು ಹಣಕಾಸು ಸಚಿವರೇ ಸಂಸತ್ತಿನಲ್ಲಿ ಪ್ರಸ್ತುತಪಡಿಸುತ್ತಾರೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ಈ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಈಗಿನ ಆರ್ಥಿಕ ಸ್ಥಿತಿ ಹೇಗಿದೆ ಎನ್ನುವುದನ್ನು ಅವಲೋಕಿಸಲಾಗುತ್ತದೆ. ಆರ್ಥಿಕತೆಯ ಬಲಗಳೇನು, ದೌರ್ಬಲ್ಯಗಳೇನು ಎಂಬಿತ್ಯಾದಿ ಅಂಶಗಳನ್ನು ಪ್ರಸ್ತಾಪಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Thu, 30 January 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ