Healthcare Budget 2022: ಕೇಂದ್ರ ಬಜೆಟ್ 2022ರಿಂದ ಆರೋಗ್ಯ ಕ್ಷೇತ್ರದ ನಿರೀಕ್ಷೆಗಳೇನು?

ಪ್ರಸ್ತುತ ಸನ್ನಿವೇಶದಲ್ಲಿ ಬಹಳ ಮುಖ್ಯವಾದ ಆರೋಗ್ಯ ವಲಯವು ಕೇಂದ್ರ ಬಜೆಟ್ 2022ರಿಂದ ನಿರೀಕ್ಷೆ ಮಾಡಬಹುದಾದ್ದು ಏನು ಎಂಬುದರ ವಿವರ ಇಲ್ಲಿದೆ.

Healthcare Budget 2022: ಕೇಂದ್ರ ಬಜೆಟ್ 2022ರಿಂದ ಆರೋಗ್ಯ ಕ್ಷೇತ್ರದ ನಿರೀಕ್ಷೆಗಳೇನು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Feb 01, 2022 | 3:49 PM

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಸಹಜವಾಗಿಯೇ ಕುತೂಹಲ ಇರುವುದು ಆರೋಗ್ಯ ವಲಯದ ಬಗ್ಗೆ. ಯಾವ ಪ್ರಮಾಣದಲ್ಲಿ ಹಣ ಮೀಸಲಿಡಬಹುದು ಹಾಗೂ ಆರೋಗ್ಯ ಮೂಲಸೌಕರ್ಯಕ್ಕೆ ಯೋಜನೆಗಳನ್ನು ಘೋಷಣೆ ಮಾಡಬಹುದಾ ಎಂಬ ಬಗ್ಗೆ ಕೂಡ ಆಸಕ್ತಿ ಇದೆ. ಆದರೆ ಒಟ್ಟಾರೆಯಾಗಿ ಗಮನಿಸಿದಾಗ ಫೆಬ್ರವರಿ 1, 2022ರಂದು ಮಂಡನೆ ಆಗುವ ಬಜೆಟ್​ನಲ್ಲಿ ದೊಡ್ಡ ಮೊತ್ತವನ್ನು ಆರೋಗ್ಯ ಕ್ಷೇತ್ರಕ್ಕಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀಸಲಿಡುವಂತೆ ಕಾಣುತ್ತಿದೆ. ಈ ಹಿಂದಿನ ಹಣಕಾಸು ವರ್ಷಗಳಿಗೆ ಹೋಲಿಸಿದರೆ ಆರೊಗ್ಯ ಕ್ದೇತ್ರಕ್ಕೆ ಕನಿಷ್ಠ ಶೇ 10ರಷ್ಟು ಹೆಚ್ಚುವರಿ ಹಣವನ್ನು ನಿಗದಿ ಮಾಡುವಂತೆ ಕಾಣುತ್ತಿದೆ. ಇದಕ್ಕೆ ಪೂರಕವಾಗಿಯೇ ತಜ್ಞರು, ವಿಶ್ಲೇಷಕರು ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಒಟ್ಟಾರೆ ಪ್ಯಾಕೇಜ್​ನಲ್ಲಿ 15ರಿಂದ 18 ಸಾವಿರ ಕೋಟಿ ರೂಪಾಯಿ ಹೆಚ್ಚಿಗೆ ಹಣವನ್ನು ಇಡಬಹುದು ಎಂಬ ಅಂದಾಜಿದೆ. 2021ರ ಕೇಂದ್ರ ಬಜೆಟ್ ವೇಳೆ 223,846 ಕೋಟಿ ರೂಪಾಯಿಯನ್ನು ಒಟ್ಟಾರೆ ವೆಚ್ಚವಾಗಿ ಘೋಷಣೆ ಮಾಡಲಾಗಿತ್ತು. ಇಲ್ಲಿ ಗಮನಿಸಬೇಕಾದ ಸಂಗತಿ ಏನೆಂದರೆ, ಲಸಿಕೆ ಹಾಕುವ ಸಲುವಾಗಿ ಇಟ್ಟಿದ್ದ ಹಣಕಾಸು ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲೂ ಮುಂದುವರಿಸಿಕೊಂಡು ಹೋಗುವ ಅವಕಾಶಗಳಿವೆ. ಕೇಂದ್ರ ಸರ್ಕಾರವು ಕಳೆದ ಬಜೆಟ್​ನಲ್ಲಿ ಲಸಿಕೆಗಾಗಿ 50 ಸಾವಿರ ಕೋಟಿ ರೂಪಾಯಿಯನ್ನು ಇಟ್ಟಿತ್ತು. ಅಂದಹಾಗೆ ದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಇನ್ನಷ್ಟು ವಿಸ್ತರಿಸುವ ಕಡೆಗೆ ಸರ್ಕಾರವು ಗಮನ ಕೇಂದ್ರೀಕರಿಸಲಿದೆ.

ಸಂಸತ್​ನ ಬಜೆಟ್ ಅಧಿವೇಶನ ಜನವರಿ 31, 2022ರಂದು ಆರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022ರಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು ಏಪ್ರಿಲ್ 8ನೇ ತಾರೀಕಿನ ತನಕ ನಡೆಯಲಿದೆ. ಆರ್ಥಿಕ ಸಮೀಕ್ಷೆಯು ಜನವರಿ 31ರಂದು, ರಾಷ್ಟ್ರಪತಿಗಳ ಭಾಷಣದ ನಂತರ ಮಂಡನೆ ಆಗುವ ಸಾಧ್ಯತೆ ಇದೆ, ಎಂದು ಮೂಲಗಳು ತಿಳಿಸಿವೆ. ಅಧಿವೇಶನದ ಮೊದಲ ಭಾಗ ಫೆಬ್ರವರಿ 11ಕ್ಕೆ ಕೊನೆ ಆಗಲಿದೆ. ತಿಂಗಳ ಬಿಡುವಿನ ನಂತರ ಮಾರ್ಚ್​ 14ನೇ ತಾರೀಕಿನಂದು ಎರಡನೇ ಭಾಗದ ಅಧಿವೇಶನ ಶುರುವಾಗಲಿದ್ದು, ಏಪ್ರಿಲ್ 8ರಂದು ಮುಕ್ತಾಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್ 14ನೇ ತಾರೀಕಿನಂದು ಎರಡನೇ ಭಾಗದಲ್ಲಿ ಮತ್ತೆ ಅಧಿವೇಶನ ಆರಂಭವಾಗುವ ಹೊತ್ತಿಗೆ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ಫಲಿತಾಂಶವು ಬಂದಿರುತ್ತದೆ. ಈ ಐದು ರಾಜ್ಯಗಳ ಚುನಾವಣೆ ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.

ಇದನ್ನೂ ಓದಿ: Budget 2022: ಬಜೆಟ್​ನಲ್ಲಿ ಕ್ರಿಪ್ಟೋ ವಹಿವಾಟಿನ ಮೇಲೆ ಟಿಡಿಎಸ್/ಟಿಸಿಎಸ್ ವಿಧಿಸಲು ಸರ್ಕಾರ ಚಿಂತನೆ

Published On - 7:55 pm, Tue, 18 January 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್