Union Budget 2024: ಕೇವಲ 1 ಗಂಟೆಯಲ್ಲಿ ಬಜೆಟ್​ ಓದಿ ಮುಗಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು, ಗುರುವಾರದಂದು ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು. ಇದಕ್ಕೆ ಅವರು ತಗೆದುಕೊಂಡಿದ್ದ ಕೇವಲ 1 ಗಂಟೆ ಮಾತ್ರ ಇದು ಅತಿ ಕಡಿಮೆ ಅವಧಿಯ ಬಜೆಟ್ ಮಂಡನೆ ಎಂದರೆ ತಪ್ಪಾಗಲಾರದು.

Union Budget 2024: ಕೇವಲ 1 ಗಂಟೆಯಲ್ಲಿ ಬಜೆಟ್​ ಓದಿ ಮುಗಿಸಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Follow us
ನಯನಾ ರಾಜೀವ್
|

Updated on:Feb 01, 2024 | 12:24 PM

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು, ಗುರುವಾರದಂದು ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು. ಇದಕ್ಕೆ ಅವರು ತಗೆದುಕೊಂಡಿದ್ದ ಕೇವಲ 1 ಗಂಟೆ ಮಾತ್ರ ಇದು ಅತಿ ಕಡಿಮೆ ಅವಧಿಯ ಬಜೆಟ್ ಮಂಡನೆ ಎಂದರೆ ತಪ್ಪಾಗಲಾರದು.

ಅತಿ ದೊಡ್ಡ ಬಜೆಟ್ ಭಾಷಣದ ಹೆಗ್ಗಳಿಯೂ ಅವರದ್ದೇ ಆಗಿದೆ. 2023ರಲ್ಲಿ ಕೇವಲ 87 ನಿಮಿಷಗಳನ್ನು ತೆಗೆದುಕೊಂಡಿದ್ದರು. 2020ರಲ್ಲಿ ಬರೋಬ್ಬರಿ 2 ಗಂಟೆ 45 ನಿಮಿಷಗಳ ದೀರ್ಘಕಾಲದ ಬಜೆಟ್ ಮಂಡಿಸಿದ್ದರು. ತಮ್ಮ ಪ್ರಕಟಣೆಯ ನಡುವೆ ಬ್ರೇಕ್ ತೆಗೆದುಕೊಂಡು ನೀರು ಕುಡಿದು ಬಳಿಕ ಬಜೆಟ್​ ಓದುವುದನ್ನು ಮುಂದುವರೆಸಿದ್ದರು.

ಬಜೆಟ್ ಮಂಡನೆಯ ಇತಿಹಾಸದಲ್ಲಿ ಅಷ್ಟು ದೀರ್ಘಾವಧಿಯ ಭಾಷಣವನ್ನು ಯಾರೂ ಮಾಡಿರಲಿಲ್ಲ ಎಂದು ಹೇಳಲಾಗಿತ್ತು. ಇದೀಗ ಅವರು ಕೇವಲ 1 ಗಂಟೆಗಳ ಕಾಲ ಬಜೆಟ್​ ಮಂಡಿಸಿರುವುದು ಆಶ್ಚರ್ಯ ಮೂಡಿಸಿದೆ. 2022ರಲ್ಲಿ 92 ನಿಮಿಷಗಳ ಬಜೆಟ್​ ಮಂಡಿಸಿದ್ದರು.

1977ರಲ್ಲಿ ಹೀರೂಭಾಯಿ ಎಂ. ಪಟೇಲ್ ಎಂಬುವರು ಕೇವಲ 800 ಪದದ ಭಾಷಣವನ್ನು ಪ್ರಾಯಶಃ ಅರ್ಧಗಂಟೆಗೂ ಕಡಿಮೆ ಅವಧಿಯಲ್ಲಿ ಓದಿ ಮುಗಿಸಿದ್ದರು. 2021ರಲ್ಲಿ ಅವರು ಒಂದು ಗಂಟೆ 50 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದರು. ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು 2019ರಲ್ಲಿ. ಆ ವರ್ಷ ಅವರು, 2 ಗಂಟೆ 17 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದರು.

ಮತ್ತಷ್ಟು ಓದಿ: Economic Survey 2024: ಈ ಬಾರಿ ಬಜೆಟ್ ಮುಂಚಿನ ಆರ್ಥಿಕ ಸಮೀಕ್ಷೆ ಯಾಕಿಲ್ಲ? ಅದರ ಬದಲು ಬಿಡುಗಡೆ ಆದ ಬೇರೆ ವರದಿಯಲ್ಲಿ ಏನಿದೆ?

ಬಜೆಟ್​ ಪ್ರಮುಖಾಂಶಗಳು -ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. -2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. -ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. -ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ. -ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ. -ವಿತ್ತೀಯ ಕೊರತೆಯ ಮೇಲೆ ಹಿಡಿತ ಸಾಧಿಸಲಾಗಿದೆ. 23-24ನೇ ಹಣಕಾಸು ವರ್ಷಕ್ಕೆ ಪರಿಷ್ಕೃತ ವಿತ್ತೀಯ ಕೊರತೆ ಶೇ 5.8 ನಿಗದಿಪಡಿಸಲಾಗಿದೆ. -ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ. -ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Thu, 1 February 24

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ