Download Budget 2023 PDF: ಬಜೆಟ್ ಪ್ರತಿಯನ್ನು ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬಜೆಟ್ ಮಂಡನೆ ಪ್ರಕ್ರಿಯೆ ಮುಗಿದ ಬಳಿಕವಷ್ಟೇ ಬಜೆಟ್ ಪಿಡಿಎಫ್​ ಪ್ರತಿ ಲಭ್ಯವಾಗಲಿದೆ. ಬಜೆಟ್ ಪ್ರತಿಯನ್ನು ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Download Budget 2023 PDF: ಬಜೆಟ್ ಪ್ರತಿಯನ್ನು ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 01, 2023 | 11:20 AM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್ (Union Budget 2023-24) ಮಂಡನೆ ಮಾಡಿದ ಬಳಿಕ ಬಜೆಟ್ ಭಾಷಣದ ಪೂರ್ಣ ಪ್ರತಿ ಇಂಡಿಯಾ ಬಜೆಟ್ ವೆಬ್​ಸೈಟ್​ನಲ್ಲಿ (www.indiabudget.gov.in) ಲಭ್ಯವಿರಲಿದೆ. ಈ ವೆಬ್​ಸೈಟ್​ನಿಂದ ಪಿಡಿಎಫ್​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಮೊದಲು ನೀವು ಬಜೆಟ್ ವೆಬ್​ಸೈಟ್​ ಲಿಂಕ್ ಓಪನ್ ಮಾಡಬೇಕು. ನಂತರ ‘ಬಜೆಟ್ ಸ್ಪೀಚ್’ ಟ್ಯಾಬ್​ ಅನ್ನು ಕ್ಲಿಕ್ ಮಾಡುವ ಮೂಲಕ ಬಜೆಟ್ ಪ್ರತಿಯನ್ನು ನೀವು ವೀಕ್ಷಿಸಬಹುದು. ಅಲ್ಲಿ ವಿವಿಧ ಹಣಕಾಸು ವರ್ಷಗಳ ಬಜೆಟ್​ ಪ್ರತಿಗಳಿರುತ್ತವೆ. ಈ ಪೈಕಿ ನಿಮ್ಮ ಆಯ್ಕೆಯ ಹಣಕಾಸು ವರ್ಷವನ್ನು ಕ್ಲಿಕ್ ಮಾಡಿ ನಂತರ ಡೌನ್​ಲೋಡ್ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಬಜೆಟ್ ಪ್ರತಿ ಡೌನ್​ಲೋಡ್ ಆಗುತ್ತದೆ.

ಈ ಬಾರಿಯ ಬಜೆಟ್​ ಪ್ರತಿ ಡೌನ್​ಲೋಡ್ ಮಾಡುವುದು ಹೇಗೆ?

ಈ ಬಾರಿಯ ಬಜೆಟ್ ಪ್ರತಿಯನ್ನು ಡೌನ್​ಲೋಡ್ ಮಾಡುವುದಕ್ಕಾಗಿ ನೀವು ಇಂಡಿಯಾ ಬಜೆಟ್ ವೆಬ್​ಸೈಟ್​ಗೆ ಭೇಟಿ ನೀಡಿದ ಬಳಿಕ ‘2023-24 ಬಜೆಟ್ ಪಿಡಿಎಫ್​’ ಅನ್ನು ಆಯ್ಕೆ ಮಾಡಬೇಕು. ನಂತರ ಡೌನ್​ಲೋಡ್ ಕ್ಲಿಕ್ ಮಾಡಬೇಕು. ಬಜೆಟ್ ಮಂಡನೆ ಪ್ರಕ್ರಿಯೆ ಮುಗಿದ ಬಳಿಕವಷ್ಟೇ ಬಜೆಟ್ ಪಿಡಿಎಫ್​ ಪ್ರತಿ ಲಭ್ಯವಾಗಲಿದೆ ಎಂಬುದು ನೆನಪಿರಲಿ.

ಬಜೆಟ್​ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ

ಅದೇ ರೀತಿ ಬಜೆಟ್ ಮಂಡನೆ ಬಳಿಕ ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಬಜೆಟ್ ಭಾಷಣ ಲಭ್ಯವಾಗಲಿದೆ. ಅಧಿಕೃತ ವೆಬ್​ಸೈಟ್​ನ ಲಿಂಕ್​ನಲ್ಲಿ ಪ್ರಾದೇಶಿಕ ಭಾಷೆಗಳ ಆಯ್ಕೆ ಇರುತ್ತದೆ. ನಿಮಗೆ ಯಾವ ಭಾಷೆ ಬೇಕೋ ಅದನ್ನು ಆಯ್ಕೆ ಮಾಡಿಕೊಂಡು, ನಿಮ್ಮದೇ ಭಾಷೆಯಲ್ಲಿ ಬಜೆಟ್ ಕಾಪಿಯನ್ನು ಓದಬಹುದು.

ಆ್ಯಪ್​ನಲ್ಲಿಯೂ ಸಿಗಲಿದೆ ಬಜೆಟ್ ಪ್ರತಿ

ಯೂನಿಯನ್​ ಬಜೆಟ್​ ಆ್ಯಪ್​ ಮೂಲಕವೂ ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬಜೆಟ್ ಪ್ರತಿಯನ್ನು ನೋಡಲು, ಡೌನ್​​ಲೋಡ್ ಮಾಡಲು ಅವಕಾಶವಿದೆ. ಆರ್ಥಿಕ ವ್ಯವಹಾರಗಳ ಇಲಾಖೆಯ ಮಾರ್ಗದರ್ಶನದಲ್ಲಿ ನ್ಯಾಷನಲ್ ಇನ್​ಫಾರ್ಮೆಟಿಕ್ಸ್ ಸೆಂಟರ್ (NIC) ಅಭಿವೃದ್ಧಿಪಡಿಸಿರುವ ಯೂನಿಯನ್ ಬಜೆಟ್ ಆ್ಯಪ್​​ನಲ್ಲಿ ಬಜೆಟ್​ ಸಂಬಂಧಿತ 14 ದಾಖಲೆಗಳು ದೊರೆಯಲಿವೆ. ಇವುಗಳಲ್ಲಿ ವಾರ್ಷಿಕ ಹಣಕಾಸು ಸ್ಟೇಟ್​ಮೆಂಟ್ (ಬಜೆಟ್), ಡಿಮಾಂಡ್ ಫಾರ್ ಗ್ರಾಂಟ್ಸ್, ಫೈನಾನ್ಸ್ ಬಿಲ್, ಹಣಕಾಸು ಸಚಿವರ ಬಜೆಟ್ ಭಾಷಣದ ಪ್ರತಿ ಕೂಡ ಸೇರಿದೆ.

ಬಜೆಟ್ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Wed, 1 February 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ