ಆದಾಯ ತೆರಿಗೆ ಸ್ಲ್ಯಾಬ್ ದರ, ಎಕ್ಸೆಂಪ್ಷನ್ ಮಿತಿಯಲ್ಲಿ ಬದಲಾವಣೆ ನಿರೀಕ್ಷಿಸುತ್ತಿರುವವರಿಗೆ ಕಾದಿದೆ ನಿರಾಸೆ

Union Budget 2024: ಈ ಬಾರಿಯ ಬಜೆಟ್​ನಲ್ಲಿ ಸಾಕಷ್ಟು ತೆರಿಗೆ ರಿಯಾಯಿತಿಗಳನ್ನು ಸರ್ಕಾರ ನೀಡಬಹುದು ಎಂದು ಹಲವರು ನಂಬಿದ್ದಾರೆ. ಈ ನಿರೀಕ್ಷೆ ಪ್ರತೀ ವರ್ಷದಂತೆ ನೀರ ಮೇಲಿನ ಹೋಮದಂತೆ ಎನ್ನುವಂತಹ ಸುದ್ದಿಯೊಂದು ಕೇಳಿಬರುತ್ತಿದೆ. ಈ ಸುದ್ದಿ ಪ್ರಕಾರ ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದಲ್ಲಾಗಲೀ, ಎಕ್ಸೆಂಪ್ಷನ್ ಲಿಮಿಟ್​ನಲ್ಲಾಗಲೀ ಬದಲಾವಣೆ ಆಗುವ ಸಾಧ್ಯತೆ ಇಲ್ಲ.

ಆದಾಯ ತೆರಿಗೆ ಸ್ಲ್ಯಾಬ್ ದರ, ಎಕ್ಸೆಂಪ್ಷನ್ ಮಿತಿಯಲ್ಲಿ ಬದಲಾವಣೆ ನಿರೀಕ್ಷಿಸುತ್ತಿರುವವರಿಗೆ ಕಾದಿದೆ ನಿರಾಸೆ
ಆದಾಯ ತೆರಿಗೆ
Follow us
|

Updated on: Jul 11, 2024 | 5:54 PM

ನವದೆಹಲಿ, ಜುಲೈ 11: ಮುಂಗಡ ಪತ್ರ ಮಂಡನೆಗೆ ದಿನಗಣನೆ ನಡೆದಿರುವ ಸಂದರ್ಭದಲ್ಲಿ ನಿರೀಕ್ಷೆಗಳು, ಅಪೇಕ್ಷೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಪ್ರತಿ ವರ್ಷದ ನಿರೀಕ್ಷೆಗಳಲ್ಲಿ ಆದಾಯ ತೆರಿಗೆಯದ್ದು ಒಂದು ಇದ್ದೇ ಇರುತ್ತದೆ. ಈ ಬಾರಿ ಮೈತ್ರಿ ಅವಲಂಬಿತ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನುಮಾನ ಎನ್ನಲಾಗುತ್ತಿತ್ತು. ಅದರಲ್ಲೂ ಆದಾಯ ತೆರಿಗೆ ದರವನ್ನು ಬಜೆಟ್​ನಲ್ಲಿ ಪರಿಷ್ಕರಿಸಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ವರದಿಗಳ ಪ್ರಕಾರ ಈ ವರ್ಷವೂ ಆದಾಯ ತೆರಿಗೆ ಪಾವತಿದಾರರಿಗೆ ನಿರಾಸೆ ಕಾದಿದೆ. ಅದರಲ್ಲೂ ಸಂಬಳದ ಆದಾಯ ಪಡೆಯುವ ಮಧ್ಯಮವರ್ಗದವರಿಗೆ ನಿರಾಸೆ ಮುಂದುವರಿಯಬಹುದು.

ಈ ಬಾರಿ ಆದಾಯ ತೆರಿಗೆ ದರದಲ್ಲಿ ಇಳಿಕೆ ಮಾಡಬೇಕು ಎನ್ನುವ ಒತ್ತಾಯ ತೆರಿಗೆ ಪಾವತಿದಾರರಿಂದ ಮಾತ್ರವಲ್ಲ, ಉದ್ಯಮ ವಲಯದ ಮುಖಂಡರಿಂದಲೂ ಬಂದಿದೆ. ಟ್ಯಾಕ್ಸ್ ರಿಲೀಫ್ ಸಿಕ್ಕರೆ ಜನರ ಕೈಯಲ್ಲಿ ಹೆಚ್ಚಿನ ಉಳಿತಾಯ ಹಣ ಇರುತ್ತದೆ. ಇದರಿಂದ ಮಾರುಕಟ್ಟೆಯಲ್ಲಿ ಖರೀದಿ ಅಥವಾ ಉಪಭೋಗ ಹೆಚ್ಚುತ್ತದೆ. ಇದು ವಿವಿಧ ಉದ್ದಿಮೆಗಳಿಗೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬ ವಾದ ಇದೆ.

ಟ್ಯಾಕ್ಸ್ ಸ್ಲಾಬ್ ದರದಲ್ಲಿ ಬದಲಾವಣೆ ಮಾಡುವುದಕ್ಕಿಂತ ಹೆಚ್ಚಾಗಿ ಸೆಕ್ಷನ್ 80ಸಿ ಅಡಿಯಲ್ಲಿ ಸಿಗುವ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎನ್ನುವ ಕೂಗಂತೂ ಬಲವಾಗಿ ಕೇಳಿಬರುತ್ತಿದೆ. ದುರದೃಷ್ಟಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಬಜೆಟ್​ನಲ್ಲಿ ಈ ರಿಯಾಯಿತಿ ನೀಡುವ ಗೋಜಿಗೆ ಹೋಗುವ ಸಾಧ್ಯತೆ ಇಲ್ಲ ಎಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿಯೊಂದರಲ್ಲಿ ಅಂದಾಜು ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ 2024: ಮಹಿಳೆಯರಿಗೆ ವಿಶೇಷ ತೆರಿಗೆ ಲಾಭ ಸಿಗುತ್ತದಾ? ನಿರೀಕ್ಷೆಗಳಿವು…

ಹೊಸ ತೆರಿಗೆ ವ್ಯವಸ್ಥೆಯಲ್ಲಿ ಸದ್ಯ 3 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಅಥವಾ ಟ್ಯಾಕ್ಸ್ ಎಕ್ಸೆಂಪ್ಷನ್ ಇದೆ. 3ರಿಂದ 5 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 5ರಷ್ಟು ತೆರಿಗೆ; 6ರಿಂದ 9 ಲಕ್ಷ ರೂ ಆದಾಯಕ್ಕೆ ಶೇ. 10ರಷ್ಟು ತೆರಿಗೆ; 9ರಿಂದ 12 ಲಕ್ಷ ರೂ ಆದಾಯಕ್ಕೆ ಶೇ. 15ರಷ್ಟು ತೆರಿಗೆ; 12ರಿಂದ 15 ಲಕ್ಷ ರೂ ಆದಾಯಕ್ಕೆ ಶೇ. 20ರಷ್ಟು ತೆರಿಗೆ, ಮತ್ತು 15 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಇದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್