AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

PM Kisan Scheme Update In Budget: ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಪಿಎಂ ಕಿಸಾನ್ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಹಣದ ನೆರವನ್ನು ದ್ವಿಗುಣಗೊಳಿಸುವ ಸಾಧ್ಯತೆ ಇದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ
ಕೃಷಿಕ ಮಹಿಳೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 11, 2024 | 2:45 PM

Share

ನವದೆಹಲಿ, ಜನವರಿ 11: ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಮಹತ್ವದ ಘೋಷಣೆಗಳ ಸಾಧ್ಯತೆ ಬಹಳ ಕಡಿಮೆ. ಆದರೆ, ಕೃಷಿಕ ಮಹಿಳೆಯರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಧನ ಸಹಾಯ ದ್ವಿಗುಣಗೊಳ್ಳಬಹುದು ಎನ್ನಲಾಗುತ್ತಿದೆ. ಫೆಬ್ರುವರಿ 1ರ ಬಜೆಟ್​ನಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಬರಬಹುದು ಎಂದು ವರದಿಗಳು ಹೇಳುತ್ತಿವೆ.

ಪಿಎಂ ಕಿಸಾನ್ ಯೋಜನೆಯಲ್ಲಿ ಈಗ ವರ್ಷಕ್ಕೆ 6,000 ರೂ ರೂ ನೀಡಲಾಗುತ್ತಿದೆ. ಮಹಿಳಾ ಕೃಷಿಕರಿಗೆ ಇದು 12,000 ರೂಗೆ ಹೆಚ್ಚಾಗಬಹುದು. ಅಂದರೆ, ಜಮೀನು ಮಾಲಕತ್ವ ಹೊಂದಿರುವ ಮಹಿಳೆಯರಿಗೆ ಹೆಚ್ಚಿನ ಧನಸಹಾಯ ಸಿಗಬಹುದು. ಇದು ಬಿಟ್ಟರೆ ಬೇರೆ ಮಧ್ಯಂತರ ಬಜೆಟ್​ನಲ್ಲಿ ಪ್ರಮುಖ ನಿರ್ಧಾರ ಬರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ಫೆಬ್ರುವರಿ 1ರ ಬಜೆಟ್: ರಫ್ತು ಸುಂಕ, ರೈಲ್ವೆ, ಕೃಷಿ ವಿಚಾರದಲ್ಲಿ ಸಂಭವನೀಯ ಘೋಷಣೆಗಳೇನು? ಇಲ್ಲಿದೆ ಡೀಟೇಲ್ಸ್

ಹಿಂದೆ ಕೆಲ ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಯಲ್ಲಿ ಹಣದ ಮೊತ್ತವನ್ನು ಸರ್ಕಾರ ಹೆಚ್ಚಿಸಲು ಯೋಜಿಸಿದೆ ಎಂದು ಹೇಳಲಾಗಿತ್ತು. 6,000 ರೂ ಇರುವ ಧನಸಹಾಯದ ಮೊತ್ತವನ್ನು 8,000 ರೂಗೆ ಹೆಚ್ಚಿಸಬಹುದು ಎನ್ನಲಾಗಿತ್ತು. ಸರ್ಕಾರ ಈ ಯೋಜನೆಯ ಸರ್ವ ಫಲಾನುಭವಿಗಳಿಗೂ ನೆರವು ಹೆಚ್ಚಿಸುತ್ತದಾ? ಅಥವಾ ಮಹಿಳಾ ಕೃಷಿಕರನ್ನು ಮಾತ್ರವೇ ಗುರಿ ಮಾಡಿ ಸಹಾಯ ನೀಡುತ್ತದಾ ಸ್ಪಷ್ಟವಾಗಿಲ್ಲ.

ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ

ಬಜೆಟ್ ಮಂಡನೆಗೆ ಒಂದು ದಿನ ಮುಂಚೆ, ಅಂದರೆ, ಜನವರಿ 31ರಂದ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ (Joint session) ಉದ್ದೇಶಿಸಿ ಭಾಷಣ ಮಾಡುತ್ತಾರೆ. ಅದಾದ ಮರುದಿನ, ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ನಡೆಯಲಿದೆ.

ಇದನ್ನೂ ಓದಿ: Union Budget: ಮುಂಬರುವ ಮಧ್ಯಂತರ ಬಜೆಟ್​ನಲ್ಲಿ ಟ್ಯಾಕ್ಸ್ ರಿಬೇಟ್ 7.5 ಲಕ್ಷ ರೂಗೆ ಹೆಚ್ಚಿಸುವ ಸಾಧ್ಯತೆ ಇಲ್ಲ: ವರದಿ

ಇಂಡಿಯಾ ಟುಡೇ ವರದಿ ಪ್ರಕಾರ, ಬಜೆಟ್ ಅಧಿವೇಶನ ಫೆಬ್ರುವರಿ 9ರವರೆಗೆ ನಡೆಯಲಿದೆ. ಜನವರಿ 31ರಂದು ಆರಂಭವಾಗಿ 11 ದಿನಗಳ ಅವಧಿಯವರೆಗೆ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Thu, 11 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ