ಫೆ. 1ಕ್ಕೆ ಮಧ್ಯಂತರ ಬಜೆಟ್ ಮಂಡನೆ; ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ: ವರದಿ

Interim Budget 2024: ಈ ಬಾರಿಯ ಮಧ್ಯಂತರ ಬಜೆಟ್​ಗೆ ಜನವರಿ 31ರಿಂದ ಫೆಬ್ರುವರಿ 9ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ. ನಿರ್ಮಲಾ ಸೀತಾರಾಮನ್ ಅವರು ಐದನೇ ಬಾರಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ಬದಲು ಭಾರತದ ಆರ್ಥಿಕ ಸ್ಥಿತಿಗತಿ ಕುರಿತ ಸಂಕ್ಷಿಪ್ತ ವರದಿ ಪ್ರಸ್ತುಪಡಿಸುವ ನಿರೀಕ್ಷೆ ಇದೆ.

ಫೆ. 1ಕ್ಕೆ ಮಧ್ಯಂತರ ಬಜೆಟ್ ಮಂಡನೆ; ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ: ವರದಿ
ನಿರ್ಮಲಾ ಸೀತಾರಾಮನ್
Follow us
|

Updated on: Jan 11, 2024 | 3:04 PM

ನವದೆಹಲಿ, ಜನವರಿ 11: ನರೇಂದ್ರ ಮೋದಿ ನೇತೃತ್ವದ ಎನ್​ಡಿಎ-2 ಸರ್ಕಾರದ ಕೊನೆಯ ಬಜೆಟ್ ಫೆಬ್ರುವರಿ 1ರಂದು (Interim Budget) ಮಂಡನೆಯಾಗಲಿದೆ. ಬಜೆಟ್ ಮಂಡನೆಗೆ ಒಂದು ದಿನ ಮುಂಚೆ, ಅಂದರೆ, ಜನವರಿ 31ರಂದ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ (Joint session) ಉದ್ದೇಶಿಸಿ ಭಾಷಣ ಮಾಡುತ್ತಾರೆ. ಅದಾದ ಮರುದಿನ, ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ನಡೆಯಲಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಬಜೆಟ್ ಅಧಿವೇಶನ ಫೆಬ್ರುವರಿ 9ರವರೆಗೆ ನಡೆಯಲಿದೆ. ಜನವರಿ 31ರಂದು ಆರಂಭವಾಗಿ 11 ದಿನಗಳ ಅವಧಿಯವರೆಗೆ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಈ ಬಜೆಟ್​ನಲ್ಲಿ ದೊಡ್ಡ ಮಟ್ಟದ ಘೋಷಣೆಗಳು ಬರದೇ ಹೋದರೂ ಒಂದಷ್ಟು ಮಹತ್ವದ ನಿರ್ಧಾರಗಳನ್ನು ಘೋಷಿಸಬಹುದು ಎನ್ನಲಾಗಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗಳು ಇರುವುದರಿಂದ ಅದಕ್ಕೆ ಮುಂಚಿನ ಬಜೆಟ್ ಮಧ್ಯಂತರ ಬಜೆಟ್ ಆಗಿರುತ್ತದೆ. ಚುನಾವಣೆ ಬಳಿಕ ಹೊಸ ಸರ್ಕಾರ ಬಂದು ಜುಲೈ ತಿಂಗಳಲ್ಲಿ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಬಹುದು. ಅಲ್ಲಿಯವರೆಗೆ ಸರ್ಕಾರದ ಅಗತ್ಯ ವೆಚ್ಚಗಳಿಗೆ ಸಮ್ಮತಿ ನೀಡಲು ಮತ್ತು ಆರ್ಥಿಕತೆಗೆ ಬೇಕಾದ ಹಣ ವಿನಿಯೋಗ ಸರಾಗವಾಗಿ ನಡೆಯಲು ಮಧ್ಯಂತರ ಬಜೆಟ್ ಮತ್ತು ವೋಟ್ ಆನ್ ಅಕೌಂಟ್ ಇರುತ್ತದೆ.

ಇದನ್ನೂ ಓದಿ: Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

ಮಧ್ಯಂತರ ಬಜೆಟ್​ನಲ್ಲಿ ದೊಡ್ಡ ಯೋಜನೆಗಳ ಘೋಷಣೆ ಮಾಡುವಂತಿಲ್ಲ. ಚುನಾವಣೆಯಲ್ಲಿ ಜನರನ್ನು ಉದ್ದೇಶಪೂರ್ವಕವಾಗಿ ಪ್ರಭಾವಿತಗೊಳಿಸುವುದನ್ನು ತಪ್ಪಿಸಲು ಈ ನಿರ್ಬಂಧ ಹಾಕಲಾಗಿದೆ. ಹಾಗೆಯೇ, ಆರ್ಥಿಕ ಸಮೀಕ್ಷೆಯನ್ನೂ ಇಂಟರೆಮ್ ಬಜೆಟ್​ನಲ್ಲಿ ಪ್ರಸ್ತುಪಡಿಸುವಂತಿಲ್ಲ. ಆದಾಗ್ಯೂ ಸಮಗ್ರ ಆರ್ಥಿಕ ಸಮೀಕ್ಷೆ ಬದಲು 2024-25ರ ವರ್ಷಕ್ಕೆ ಭಾರತೀಯ ಆರ್ಥಿಕತೆಯ ಸ್ಥಿತಿಗತಿ ಕುರಿತ ಮಾಹಿತಿಪತ್ರವನ್ನು ಪ್ರಸ್ತುಪಡಿಸುವ ಸಾಧ್ಯತೆ ಇದೆ. ಇದ ಬಜೆಟ್ ಮಂಡನೆಗೆ ಮುನ್ನ ನಡೆಯಬಹುದು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ