Karnataka Budget 2023: ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಉಡುಗೊರೆ, 29 ಕಡೆ ಎ.ಪಿ.ಜೆ ಕಲಾಂ ವಸತಿ ಶಾಲೆ
ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ. ಪಠ್ಯಕ್ರಮದೊಂದಿಗೆ ಎ.ಪಿ.ಜೆ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.
ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ 2ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಚುನಾವಣೆ ಹೊತ್ತಲ್ಲಿ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಭರಪೂರ ಕೊಡುಗೆ ನೀಡಿದ್ದಾರೆ. ಈ ಬಾರಿ ಬರೋಬ್ಬರಿ 3.9 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದು ಅಲ್ಪಸಂಖ್ಯಾತರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ
- ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ. ಪಠ್ಯಕ್ರಮದೊಂದಿಗೆ ಎ.ಪಿ.ಜೆ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಸದರಿ ಶಾಲೆಗಳನ್ನು 25 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ವಹಣೆಯನ್ನು ಮಾಡಲಾಗುತ್ತಿದೆ.
- ಪ್ರಸಕ್ತ ಸಾಲಿನಲ್ಲಿ 96 ಕೋಟಿ ರೂ. ಅನುದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ 31 ವಸತಿ ಶಾಲೆಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸುಮಾರು 7,800 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
- “ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿಯನ್ನು ನೀಡಲು 2 ಕೋಟಿ ರೂ ಒದಗಿಸಲಾಗುವುದು.
- ಅಲ್ಪಸಂಖ್ಯಾತರ ಪದವೀಧರ ಮಹಿಳೆಯರು ಉತ್ತಮ ಉದ್ಯೋಗಾವಕಾಶ ಪಡೆಯಲು ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐ.ಐ.ಎಂ.ಬಿ. (IIMB) ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.
- ರಾಜ್ಯದಲ್ಲಿ 40,000 ಕ್ಕಿಂತಲೂ ಹೆಚ್ಚು ವಕ್ಫ್ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್‌ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
- ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ಪಿಂಜಾರ, ದರ್ವೇಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.
- ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು ಹೆಚ್ಚಿಸಿ 110 ಕೋಟಿ ರೂ. ಒದಗಿದಲಾಗುವುದು.
Published On - 2:54 pm, Fri, 17 February 23