Karnataka Budget 2023: ಬೊಮ್ಮಾಯಿ ಬಜೆಟ್​​ಗೆ ದಿನಗಣನೆ, ಗರಿಗೆದರಿದ ನಿರೀಕ್ಷೆಗಳು; ಯಾವ ವಲಯಕ್ಕೆ ಸಿಗಲಿದೆ ಎಷ್ಟು ಅನುದಾನ?

ಬಜೆಟ್ ಸಿದ್ಧತೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲಾಖಾವಾರು ಹಲವಾರು ಸಭೆಗಳನ್ನು ನಡೆಸಿದ್ದಾರೆ. ಬಡವರು, ಮಧ್ಯಮ ವರ್ಗ, ದೀನ ದಲಿತರು ಹಾಗೂ ರೈತರು ಮನಗೆಲ್ಲುವಂಥ ಬಜೆಟ್ ಮಂಡಿಸಲು ಹಣಕಾಸು ಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Karnataka Budget 2023: ಬೊಮ್ಮಾಯಿ ಬಜೆಟ್​​ಗೆ ದಿನಗಣನೆ, ಗರಿಗೆದರಿದ ನಿರೀಕ್ಷೆಗಳು; ಯಾವ ವಲಯಕ್ಕೆ ಸಿಗಲಿದೆ ಎಷ್ಟು ಅನುದಾನ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ganapathi Sharma

Updated on:Feb 15, 2023 | 11:21 AM

ಬೆಂಗಳೂರು: ರಾಜ್ಯ ಬಜೆಟ್​​ಗೆ (Karnataka Budget) ದಿನಗಣನೆ ಆರಂಭವಾಗಿದ್ದು, ನಿರೀಕ್ಷೆಗಳೂ ಗರಿಗೆದರಿವೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿರಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಎರಡನೇ ಬಜೆಟ್ ಆಗಿರಲಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಬಜೆಟ್​ ಬಗ್ಗೆ ಜನಸಾಮಾನ್ಯರ ನಿರೀಕ್ಷೆಗಳೂ ಗರಿಗೆದರಿವೆ. ಇದಕ್ಕೆ ಪೂರಕವಾಗಿ ಕಳೆದ 10 ತಿಂಗಳುಗಳಲ್ಲಿ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ತೆರಿಗೆ ಆದಾಯವೂ ಸಂಗ್ರಹವಾಗಿದೆ. ಹೀಗಾಗಿ ದೊಡ್ಡ ಗಾತ್ರದ ಬಜೆಟ್​ ಅನ್ನು ಬೊಮ್ಮಾಯಿ ಮಂಡಿಸಬಹುದು ಎಂದು ಹೇಳಲಾಗುತ್ತಿದೆ.

ಈ ಮಧ್ಯೆ, ಬಜೆಟ್ ಸಿದ್ಧತೆಗಾಗಿ ಬೊಮ್ಮಾಯಿ ಇಲಾಖಾವಾರು ಹಲವಾರು ಸಭೆಗಳನ್ನು ನಡೆಸಿದ್ದಾರೆ. ಬಡವರು, ಮಧ್ಯಮ ವರ್ಗ, ದೀನ ದಲಿತರು ಹಾಗೂ ರೈತರು ಮನಗೆಲ್ಲುವಂಥ ಬಜೆಟ್ ಮಂಡಿಸಲು ಹಣಕಾಸು ಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಜೆಟ್ ಮಂಡನೆ ದಿನಾಂಕ, ಸಮಯ

ಫೆಬ್ರವರಿ 17ರಂದು ಶುಕ್ರವಾರ ಬೆಳಗ್ಗೆ 10:15ಕ್ಕೆ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಬಹುದು ಎಂದು ನಿರೀಕ್ಷಿಸಲಾಗಿದೆ. ಫೆಬ್ರವರಿ 20ರಿಂದ 22ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

3 ಲಕ್ಷ ಕೋಟಿ ರೂ. ಗಾತ್ರದ ಬಜೆಟ್?

ಬಸವರಾಜ ಬೊಮ್ಮಾಯಿ ಅವರು 3 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗು ತಿಳಿಸಿವೆ. ಕಳೆದ ಬಾರಿ 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಅನ್ನು ಅವರು ಮಂಡನೆ ಮಾಡಿದ್ದರು. ಈ ವರ್ಷದ ತೆರಿಗೆ ಆದಾಯ ಹೆಚ್ಚಳವಾಗಿರುವುದರಿಂದ ಸಹಜವಾಗಿಯೇ ಬಜೆಟ್ ಗಾತ್ರ ಹೆಚ್ಚಿರಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಹೆಚ್ಚಿದ ತೆರಿಗೆ ಆದಾಯ

ಕಳೆದ ಹತ್ತು ತಿಂಗಳಲ್ಲಿ ರಾಜ್ಯದ ಬೊಕ್ಕಸಕ್ಕೆ ನಿರೀಕ್ಷೆಗಿಂತ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ಜನವರಿ ತಿಂಗಳೊಂದರಲ್ಲಿಯೇ 6,000 ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆ ಮೂಲಕ ಭರ್ಜರಿ ಆದಾಯ ಸಂಗ್ರಹವಾಗಿದ್ದು, ಮಾರ್ಚ್ ತಿಂಗಳ ಅಂತ್ಯಕ್ಕೆ 70 ಸಾವಿರ ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 2022-23 ಸಾಲಿನಲ್ಲಿ 77,010 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹಿಸುವ ಬಗ್ಗೆ ಹಣಕಾಸು ಇಲಾಖೆ ಅಂದಾಜಿಸಿದೆ.

ವಲಯವಾರು ಅನುದಾನ ನಿರೀಕ್ಷೆ

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಈ ಬಾರಿಯ ಬಜೆಟ್​​​ನಲ್ಲಿ 40,000 ಕೋಟಿ ರೂ. ಅನುದಾನ ಘೋಷಿಸುವ ನಿರೀಕ್ಷೆ ಇದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗೆ 75,000 ಕೋಟಿ ರೂ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನಕ್ಕೆ 60,000 ಕೋಟಿ ರೂ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 10,000 ಕೋಟಿ ರೂ, ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ 400 ಕೋಟಿ ರೂ. ಅನುದಾನ ಘೋಷಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 65,000 ಕೋಟಿ ರೂ, ಮಹಿಳಾ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 50,000 ಕೋಟಿ ರೂ, ಮಕ್ಕಳ ಕಲ್ಯಾಣಕ್ಕೆ 50,000 ಕೋಟಿ ರೂ, ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಇತರ ಜನಕಲ್ಯಾಣ ಕಾರ್ಯಕ್ರಮಗಳಿಗೆ 10,000 ಕೋಟಿ ರೂ, ಹೆಚ್ಚುವರಿ ಅನುದಾನ ನೀಡುವ ಸಾಧ್ಯತೆ ಇದೆ.

ಕರ್ನಾಟಕ ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Wed, 15 February 23

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್