Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಗೃಹಿಣಿಯರಿಗೆ ಗೌರವಧನ; ರೈತರಿಗೆ ಶೂನ್ಯಬಡ್ಡಿಗೆ ಹೆಚ್ಚು ಸಾಲ: ಬೊಮ್ಮಾಯಿ ಬಜೆಟ್​ನಲ್ಲಿ ಏನೆಲ್ಲಾ ಘೋಷಣೆಯಾಗಬಹುದು?

Big Announcements Likely In Karnataka Budget 2023: ಗೃಹಿಣಿಯರಿಗೆ ಸಹಾಯಧನ, ಆಶಾ ಕಾರ್ಯಕರ್ತೆಯರ ಸಂಬಳ ಏರಿಕೆ, ಕುಲಕಸುಬುಗಳಿಗೆ ಉತ್ತೇಜನ, ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಕಡಿವಾಣಕ್ಕೆ ಕ್ರಮ, ಇವೇ ಇತ್ಯಾದಿ ಯೋಜನೆಗಳನ್ನು ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್​ನಲ್ಲಿ ಘೋಷಿಸಬಹುದು.

Karnataka Budget: ಗೃಹಿಣಿಯರಿಗೆ ಗೌರವಧನ; ರೈತರಿಗೆ ಶೂನ್ಯಬಡ್ಡಿಗೆ ಹೆಚ್ಚು ಸಾಲ: ಬೊಮ್ಮಾಯಿ ಬಜೆಟ್​ನಲ್ಲಿ ಏನೆಲ್ಲಾ ಘೋಷಣೆಯಾಗಬಹುದು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 16, 2023 | 11:56 AM

ಬೆಂಗಳೂರು: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ (Karnataka Budget 2023) ಮಂಡಿಸುತ್ತಿದ್ದಾರೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಆಗಿದ್ದು, ಕೆಲ ಮಹತ್ವದ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇದೆ. ಸರ್ಕಾರದ ಮೂಲಗಳು ಟಿವಿ9ಗೆ ತಿಳಿಸಿರುವ ಪ್ರಕಾರ ನಿರೀಕ್ಷೆಯಂತೆ ಬೊಮ್ಮಾಯಿ ಅವರಿಂದ ಕೆಲ ಆಕರ್ಷಕ ಯೋಜನೆಗಳ ಘೋಷಣೆಯಾಗಲಿದೆ (Big Announcements). ಬಹಳ ಮಹತ್ವದ ನಿರ್ಧಾರದಲ್ಲಿ ಸರ್ಕಾರ ಮಹಿಳೆಯರಿಗೆಂದು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಬಹುದು.

ರೈತರಿಗೆ ಹೆಚ್ಚು ಸಾಲ ಸೌಲಭ್ಯ, ಗೃಹಿಣಿಯರಿಗೆ ಗೌರವಧನ, ರೈತರಿಗೆ ಡೀಸೆಲ್ ಸಹಾಯಧನದ ವಿಸ್ತರಣೆ, ರಾಜ್ಯದ ಎಲ್ಲಾ ಹೋಬಳಿಗಳಲ್ಲಿ ನಮ್ಮ ಕ್ಲಿನಿಕ್​ಗಳ ಸ್ಥಾಪನೆ, 10 ಸಾವಿರ ಶಾಲಾ ಕಟ್ಟಡಗಳ ನಿರ್ಮಾಣ ಇತ್ಯಾದಿ ಘೋಷಣೆಗಳನ್ನು ಬೊಮ್ಮಾಯಿ ತಮ್ಮ ಕೊನೆಯ ಬಜೆಟ್​ನಲ್ಲಿ ಮಾಡುವ ನಿರೀಕ್ಷೆ ಇದೆ. ಕುಲಕಸುಬುಗಳನ್ನ ಮುಂದುವರಿಸಲು ಉತ್ತೇಜಿಸುವಂತಹ ಕ್ರಮವನ್ನು ಸರ್ಕಾರ ಕೈಗೊಳ್ಳಬಹುದು ಎನ್ನಲಾಗುತ್ತಿದೆ.

ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ ಮೀಸಲು, ಆಶಾ ಕಾರ್ಯಕರ್ತೆಯರ ಸಂಬಳ ಏರಿಕೆ ಮಾಡಲು ಬಜೆಟ್​ನಲ್ಲಿ ನಿರ್ಧರಿಸಬಹುದು. ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿಯ ಕನಸು ನೆರವೇರಬಹುದು.

ಇದನ್ನೂ ಓದಿ: Bengaluru Traffic: ಟ್ರಾಫಿಕ್​ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಪೈಕಿ ಬೆಂಗಳೂರು

ಈ ಬಜೆಟ್​ನಲ್ಲಿ ಏನೆಲ್ಲಾ ಘೋಷಣೆ ಆಗಬಹುದು ಎಂಬ ವಿವರ ಈ ಕೆಳಕಂಡಂತಿದೆ:

  • ಗೃಹಲಕ್ಷ್ಮೀ ಯೋಜನೆ: ಇದರಲ್ಲಿ ಗೃಹಿಣಿಯರಿಗೆ 1,500 ರೂ ಸಹಾಯಧನ
  • ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡಲಾಗುವ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
  • ಕಾಯಕ ಯೋಜನೆ: ಕುಲಕಸುಬು ಆಧಾರಿತ ಸಾಂಪ್ರದಾಯಿಕ ವೃತ್ತಿ ಮಾಡುವವರಿಗೆ 50 ಸಾವಿರ ರೂ ಪ್ರೋತ್ಸಾಹ ಧನ
  • ರೈತರಿಗೆ ಡೀಸೆಲ್ ಸಹಾಯಧನ ವಿಸ್ತರಣೆ
  • ಗಾಣಿಗ, ಮಡಿವಾಳ, ಮೇದಾರ, ನೇಕಾರ, ಕುಂಬಾರ, ಅಕ್ಕಸಾಲಿಗ ಸಮುದಾಯಗಳಿಗೆ ಪ್ರತ್ಯೇಕ ನಿಗಮ
  • ನೂತನ ಬೆಂಬಲ ಬೆಲೆ ವಿಧಾನ: ಒಂದು ಎಕರೆಯಲ್ಲಿ ಯಾವುದೇ ಬೆಳೆ ಬೆಳೆಯಲು ಎಷ್ಟು ಖರ್ಚಾಗುತ್ತೆ, ಅದಕ್ಕೆ ಎಷ್ಟು ಲಾಭ ಕೊಡಬೇಕು ಎಂದು ನಿರ್ಧರಿಸಿ ಬೆಂಬಲ ಬೆಲೆ ನಿಗದಿ ಮಾಡಬಹುದು.
  • ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ
  • ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ನಮ್ಮ ಕ್ಲಿನಿಕ್ ಸ್ಥಾಪನೆ
  • ಮಹಿಳಾ ಸ್ವಸಹಾಯ ಸಂಘಗಳಿಗೆ ಸ್ತ್ರೀ ಶಕ್ತಿ ಯೋಜನೆ ಅಡಿ 5 ಲಕ್ಷ ರೂ ಹಂಚಿಕೆ
  • ಸ್ವ ಸಹಾಯ ಸಂಘಗಳ ಬಡ್ಡಿ ಅಥವಾ ಸಾಲಗಳನ್ನು ಮನ್ನಾ ಮಾಡಬಹುದು.
  • ಎನ್​ಇಪಿ ಶಿಕ್ಷಣವನ್ನು ಪ್ರಾಥಮಿಕ ಶಿಕ್ಷಣ ಹಂತದಲ್ಲೂ ಅನುಷ್ಠಾನಕ್ಕೆ ತರುವುದು
  • 15 ಸಾವಿರ ಶಾಲಾ ಶಿಕ್ಷಕರ ನೇಮಕ
  • ರಾಜ್ಯದಲ್ಲಿ 8-10 ಸಾವಿರ ಶಾಲಾ ಶಿಕ್ಷಕರ ನೇಮಕ
  • ವಿವೇಕ ಯೋಜನೆ ಅಡಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದು
  • ನೀರಾವರಿ ಯೋಜನೆಗಳಿಗೆ ಹೆಚ್ಚು ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ
  • ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ವಿಶೇಷ ಯೋಜನೆ
  • 12 ಕಡೆ ಟ್ರಾಫಿಕ್ಫ್ರೀ ಕಾರಿಡಾರ್ ನಿರ್ಮಾಣ
  • ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಅನುಷ್ಠಾನ ಘೋಷಣೆ

ಕರ್ನಾಟಕ ಬಜೆಟ್​ಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ

Published On - 11:56 am, Thu, 16 February 23

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್