ಕರ್ನಾಟಕ ಮುಂಗಡಪತ್ರ 2023: ಬೊಮ್ಮಾಯಿ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ

Karnataka Budget 2023: ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ.

ಕರ್ನಾಟಕ ಮುಂಗಡಪತ್ರ 2023: ಬೊಮ್ಮಾಯಿ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ
ಕರ್ನಾಟಕ ಬಜೆಟ್
Follow us
ಪೃಥ್ವಿಶಂಕರ
| Updated By: Digi Tech Desk

Updated on:Feb 17, 2023 | 2:51 PM

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ಸರ್ಕಾರದ ಕೊನೆಯ ಬಜೆಟ್ (Budget) ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. ಇದರಲ್ಲಿ ಕ್ರೀಡಾ ವಲಯವೂ ಸೇರಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ನಾನಾ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ. ಹಾಗಿದ್ದರೆ ಬೊಮ್ಮಾಯಿ ಮಂಡಿಸಿದ ಬಜೆಟ್​ನಲ್ಲಿ ಕ್ರೀಡಾ ವಿಭಾಗಕ್ಕೆ ಸಿಕ್ಕಿದ್ದೇನು ಎಂಬುದರ ಪೂರ್ಣ ವಿವರ ಇಲ್ಲಿದೆ.

  1. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
  2. ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
  3. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.
  4. ಬಾಸ್ಕೆಟ್ ಬಾಲ್ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.
  5. ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
  6. ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.
  7. ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಸ್

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 17 February 23

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್