Karnataka Budget: ರೆವೆನ್ಯೂ ಸರ್ಪ್ಲಸ್ ಬಜೆಟ್ ಎಂದ ಬೊಮ್ಮಾಯಿ; ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ?

Karnataka Economy, Budget 2023: ರಾಜ್ಯ ಸರ್ಕಾರ ರಾಜಸ್ವ ಹೆಚ್ಚಳದ ಅಯವ್ಯಯ ಮಂಡನೆ ಮಾಡುತ್ತಿರುವುದು ಹೆಮ್ಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಪ್ರಕಾರ ರಾಜ್ಯದಲ್ಲಿ ರೆವೆನ್ಯೂ ಸಂಗ್ರಹ ಗಮನಾರ್ಹವಾಗಿ ಹೆಚ್ಚಾಗಿದೆ. ಅದರ ವಿವರ ಇಲ್ಲಿದೆ.

Karnataka Budget: ರೆವೆನ್ಯೂ ಸರ್ಪ್ಲಸ್ ಬಜೆಟ್ ಎಂದ ಬೊಮ್ಮಾಯಿ; ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ?
ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 17, 2023 | 12:27 PM

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ರಾಜಸ್ವ ಸಂಗ್ರಹಣೆ (Revenue Collection) ಹೆಚ್ಚಾಳವಾಗಿದೆ. ಜಿಎಸ್​ಟಿ ಹೆಚ್ಚಾಗಿದೆ. ರಾಜ್ಯ ಸರ್ಕಾರ ಈ ಬಾರಿ ರೆವೆನ್ಯೂ ಸರ್ಪ್ಲಸ್ ಬಜೆಟ್ (Revenue Surplus Budget) ಮಂಡಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ (Karnataka Budget 2023) ಭಾಷಣದ ವೇಳೆ ಹೇಳಿದ್ದಾರೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಕರ್ನಾಟಕದ ಆರ್ಥಿಕ ಬೆಳವಣಿಗೆ ಶೇ. 7.9ರಷ್ಟು ಇರಬಹುದು ಎಂಬ ಅಂದಾಜು ಇರುವುದನ್ನು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಕೋವಿಡ್ ಮುಂಚಿನ ಆರ್ಥಿಕ ಪರಿಸ್ಥಿತಿಯ ಮಟ್ಟವನ್ನು (Pre-covid economic level) ರಾಜ್ಯವು ಮೀರಿ ಬೆಳೆಯುತ್ತಿದೆ ಎಂದೂ ಈ ಸಂದರ್ಭದಲ್ಲಿ ಸಿಎಂ ಹೇಳಿದ್ದಾರೆ. ರಾಜ್ಯದ ಆರ್ಥಿಕ ಮತ್ತು ಹಣಕಾಸು ಪರಿಸ್ಥಿತಿ ಬಗ್ಗೆ ಸಿಎಂ ಹೇಳಿದ ಕೆಲ ಅಂಶಗಳು ಇಲ್ಲಿವೆ:

ದಾವೊಸ್​ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ ಮತ್ತು ಬೆಂಗಳೂರಿನಲ್ಲಿ ನವೆಂಬರ್​ನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ಭಾರೀ ಪ್ರಮಾಣದ ಹೂಡಿಕೆ ಆಕರ್ಷಿಸಲಾಗಿದೆ. ಇದು ಕಾರ್ಯರೂಪಕ್ಕೆ ಬರುವಂತಾಗಲು ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ. ಬೆಂಗಳೂರಿನಿಂದಾಚೆಗೂ ಹೂಡಕೆ ಮಾಡಲು ಉದ್ಯಮಿಗಳು ಮುಂದಾಗಿದ್ದಾರೆ. ಇದರಿಂದ ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿ ದೃಷ್ಟಿಯಿಂದ ಸ್ವಾಗತಾರ್ಹ.

ರಾಜ್ಯದ ಆರ್ಥಿಕತೆಯು ಕೋವಿಡ್ ಮುಂಚಿನ ಮಟ್ಟವನ್ನು ಮೀರಿ ಚೇತರಿಸಿಕೊಂಡಿದೆ. 2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ. 7.9ರಷ್ಟು ಇದೆ. ಸೇವಾ ವಲಯ ಶೇ. 8.2 ಕೈಗಾರಿಕಾ ವಲಯ ಶೇ. 5.1, ಕೃಷಿ ವಲಯ ಶೇ. 5.5ರಷ್ಟು ಬೆಳವಣಿಗೆ ಸಾಧಿಸಿವೆ. ರಾಜ್ಯದ ತಲಾದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂನಿಂದ 3.32 ಲಕ್ಷ ರೂಗೆ ಹೆಚ್ಚಿದೆ.

ಇದನ್ನೂ ಓದಿ: Karnataka Budget 2023: ಕೆಂಪೇಗೌಡರ ಸರ್ಕಿಟ್, ಟೂರಿಸ್ಟ್ ಗೈಡ್​ಗಳಿಗೆ ಸಹಾಯಧನ ಹೆಚ್ಚಳ: ಪ್ರವಾಸೋದ್ಯಮಗಳಿಗೆ ಏನೇನು ಸಿಕ್ಕಿದೆ?

2022-23ರಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದೆ. ರಾಜಸ್ವ (ರೆವೆನ್ಯೂ) ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ. ಜಿಎಸ್​ಟಿ ಸಂಗ್ರಹ ಶೇ. 36ರಷ್ಟು ಹೆಚ್ಚಾಗಿದೆ. 2021-22ರ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹ ಶೇ. 21ರಷ್ಟು ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ನೇರ ಮತ್ತು ಪರೋಕ್ಷ ತೆರಿಗೆಯ ಹೆಚ್ಚಳದಿಂದ ರಾಜ್ಯದ ತೆರಿಗೆ ಪಾಲು 4,813 ಕೋಟಿ ರೂನಷ್ಟು ಹೆಚ್ಚಾಗಿದೆ. 2023-24ರ ಸಾಲಿನಲ್ಲಿ ಕೇಂದ್ರವು ರಾಜ್ಯಕ್ಕೆ 37,252 ಕೋಟಿ ರೂ ತೆರಿಗೆ ಪಾಲು ಅಂದಾಜು ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಹೆಚ್ಚು ಮೊತ್ತ ಆಗಿದೆ. ಇದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಇನ್ನಷ್ಟು ಉತ್ತಮಗೊಳ್ಳುತ್ತದೆ. ರಾಜ್ಯದ ರಾಜಸ್ವ ಕೊರತೆ (ರೆವೆನ್ಯೂ ಡೆಫಿಸಿಟ್) 8,703 ಕೋಟಿ ರೂನಷ್ಟು ಕಡಿಮೆ ಆಗಬಹುದು.

ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದೇವೆ. ಈ ಮೂಲಕ ರಾಜಸ್ವ ಹೆಚ್ಚಳದ ಬಜೆಟ್ ಮಂಡಿಸುತ್ತಿದ್ದೇವೆ,” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್ ಮಂಡಿಸುತ್ತಿರುವುದು ಇದು ಎರಡನೇ ಬಾರಿ. ಹಾಗೆಯೇ ಇದು ಈ ಸರ್ಕಾರದ ಕೊನೆಯ ಬಜೆಟ್ ಕೂಡ ಹೌದು. ಈ ಬಜೆಟ್ 3 ಲಕ್ಷ ಕೋಟಿ ರೂಗೂ ಹೆಚ್ಚು ಗಾತ್ರದ್ದಾಗಿರುವುದು ದಾಖಲೆ ಬರೆದಿದೆ. ಬಜೆಟ್ ಅಧಿವೇಶನದ ಬಳಿಕ ಚುನಾವಣಾ ನೀತಿ ಸಂಹಿತೆಗಳು ಜಾರಿಗೆ ಬರುವುದರಿಂದ ಬಜೆಟ್​ನಲ್ಲಿ ಅವರು ಮಾಡಿದ ಘೋಷಣೆಗಳು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತವೆ ಎಂಬುದು ಪ್ರಶ್ನೆ.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಸ್

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

Published On - 12:27 pm, Fri, 17 February 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು