AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?

Karnataka Budget 2023, Date and Time: ಫೆಬ್ರುವರಿ 17ರಂದು ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆಬ್ರುವರಿ 20ರಿಂದ 22ರವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on:Feb 14, 2023 | 2:35 PM

Share

ಬೆಂಗಳೂರು: ಈಗಿನ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಇದೇ ಫೆಬ್ರುವರಿ 17ರಂದು ಮಂಡನೆಯಾಗುತ್ತಿದೆ. ಇದೇ ಶುಕ್ರವಾರ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Chief Minister Basavaraj Bommai) ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಲಿದೆ.

ಈಗಾಗಲೇ ಬಜೆಟ್ ಅಧಿವೇಶನ ಫೆಬ್ರುವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ. ಫೆಬ್ರುವರಿ 17ರಂದು ಬಜೆಟ್ ಮಂಡನೆಯಾಗಿ ಫೆಬ್ರುವರಿ 20ರಿಂದ 22ರವರೆಗೂ ಅದರ ಮೇಲೆ ಚರ್ಚೆ ನಡೆಯಲಿದೆ. ಫೆಬ್ರುವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ.

ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಬಜೆಟ್ ಮೇಲೆ ಹಲವರ ಕುತೂಹಲದ ಕಣ್ಣು ನೆಟ್ಟಿದೆ. ಆದರೆ, ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರಿಂದ ಈ ಬಜೆಟ್​ನಲ್ಲಿ ಸರ್ಕಾರ ಕೊಡುವ ಕೊಡುಗೆಗಳು ಕೇವಲ ಘೋಷಣೆ ಮಾತ್ರವೇ ಆಗಿರಲಿದೆ. ಹೀಗಾಗಿ, ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳುವುದು ಅಸಾಧ್ಯ. ಜನರನ್ನು ಆಕರ್ಷಿಸಲು ಭರಪೂರ ಘೋಷಣೆಗೆ ಬೊಮ್ಮಾಯಿ ಮುಂದಾಗಬಹುದು.

ಇದನ್ನೂ ಓದಿ: Politics: ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಸೆಕೆಂಡ್ ಇನ್ನಿಂಗ್ಸ್; ಯಾರೆಲ್ಲಾ ರಾಜಕೀಯಕ್ಕೆ ಎಂಟ್ರಿ?

ಕಳೆದ ವರ್ಷದ ಬಜೆಟ್​ನಲ್ಲಿ ಬಸವರಾಜ ಬೊಮ್ಮಾಯಿ 2.65 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದರು. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಕ್ಷೇತ್ರಕ್ಕೆ 68 ಸಾವಿರ ಕೋಟಿ ರೂ ಅನುದಾನ ಕೊಟ್ಟಿದ್ದರು. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55 ಸಾವಿರ ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ ಕ್ಷೇತ್ರಕ್ಕೆ 56 ಸಾವಿರ ಕೋಟಿ ರೂ, ಮಹಿಳೆಯರ ಸಬಲೀಕರಣ ಮತ್ತು ಕ್ಷೇಮಾಭಿವೃದ್ಧಿಗೆ 43 ಸಾವಿರ ಕೋಟಿ ರೂ, ಮಕ್ಕಳ ಅಭ್ಯುದಯಕ್ಕೆ 40 ಸಾವಿರ ಕೋಟಿ ರೂ, ಕೃಷಿನ ಕ್ಷೇತ್ರಕ್ಕೆ 33 ಸಾವಿರ ಕೋಟಿ ರೂ ಅನುದಾನವನ್ನು ಕೊಡಲಾಗಿತ್ತು.

Published On - 2:35 pm, Tue, 14 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!