ರಾಜ್ಯ ಬಜೆಟ್ 2023: ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ಬೊಮ್ಮಾಯಿ ಸರ್ಕಾರ ಬಜೆಟ್ನಲ್ಲಿ ಕೊಟ್ಟಿದ್ದೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ನಲ್ಲಿ ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ನಲ್ಲಿ ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.
1. ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು, ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1 ಸಾವಿರ ರೂ.ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
2. ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಲ್ಲಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಈ ವರ್ಷ ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು.
3. ಹಳ್ಳಿ ಮುತ್ತು ಯೋಜನೆಯಡಿ ಗ್ರಾಮೀಣ ಕನ್ನಡ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುತ್ತದೆ.
4. ಮಹಿಳೆಯರ ಸಬಲೀಕರಣಕ್ಕೆ ಗೃಹ ಶಕ್ತಿ ಯೋಜನೆ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500 ರೂ.ಗಳ ಸಹಾಯ ಧನ
1 ಲಕ್ಷ ಮಹಿಳೆಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ ಪ್ರಾರಂಭಿಸಲು ಕೌಶಲ್ಯಾಭಿವೃದ್ಧಿ ತರಬೇತಿ ಸಂಘಟಿತ ವಲಯದಲ್ಲಿ ದುಡಿಯುವ ಅಂದಾಜು 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ಒದಗಿಸಲು 1000 ಸಾವಿರ ಕೋಟಿ ರು.
5.ಸಹಕಾರ ವಲಯದಲ್ಲಿ 45,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 1800 ಕೋಟಇ ರೂ. ಸಾಲ ವಿತರಣೆ ಗುರಿ
6.ನಗರ ಪ್ರದೇಶದ ಕಟ್ಟಡ ನಿರ್ಮಾಣ ಮಹಿಳಾ ಕಾರ್ಮಿಕರಿಗೆ ನೆರವಾಗಲು ನಗರ ಪ್ರದೇಶದಲ್ಲಿ 4 ಸಾವಿರ ಶಿಶುವಿಹಾರ ಹಾಗೂ ನರೇಗಾ ಯೋಜನೆಯ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಿಸಲು 500 ಶಿಶುವಿಹಾರ ಪ್ರಾರಂಭ.
7. ಸ್ವಚೇತನ ಯೋಜನೆಯಡಿ 5 ಸಾವಿರ ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆಗೆ 50 ಕೋಟಿ ರೂ. ಅನುದಾನ.
8.ಆ್ಯಸಿಡ್ ದಾಳಿ ಸಂತ್ರಸ್ತರಿಗೆ ವಸತಿ ಸೌಲಭ್ಯ ಹಾಗೂ ಸ್ವಯಂ ಉದ್ಯೋಗಕ್ಕಾಗಿ ಸಾಲಸೌಲಭ್ಯ ನೀಡಲು ಕ್ರಮ. ಉತ್ಕೃಷ್ಟ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪನೆ.
9.ಮಕ್ಕಳ ಪಾಲನಾ ಸಂಸ್ಥೆಗಳಿಂದ ಹೊರ ಬಂದ 18 ರಿಂದ 21 ವರ್ಷ ವಯೋಮಾನದ ಗಂಡು ಮಕ್ಕಳಿಗೆ 4 ಪಾಲನಾ ಗೃಹ ಪ್ರಾರಂಭಿಸಲು 2 ಕೋಟಿ ರೂ. ಅನುದಾನ.
ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು
Published On - 12:52 pm, Fri, 17 February 23