Karnataka Budget 2023: ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರಿಗೆ ಬಜೆಟ್​ನಲ್ಲಿ ಸಿಕ್ಕ ಬಂಪರ್ ಕೊಡುಗೆಗಳೇನು?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ರ ಕರ್ನಾಟಕ ಬಜೆಟ್​ ಅನ್ನು ಮಂಡಿಸಿದ್ದಾರೆ. ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.

Karnataka Budget 2023: ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರಿಗೆ ಬಜೆಟ್​ನಲ್ಲಿ ಸಿಕ್ಕ ಬಂಪರ್ ಕೊಡುಗೆಗಳೇನು?
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Follow us
|

Updated on:Feb 17, 2023 | 11:37 AM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ರ ಕರ್ನಾಟಕ ಬಜೆಟ್​ ಅನ್ನು ಮಂಡಿಸಿದ್ದಾರೆ. ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಸಿಲಾಗುತ್ತದೆ.

1-ಅಮೃತ ನಗರೋತ್ಥಾನ ಯೋಜನಯಡಿ ಬೆಂಗಳೂರು ನಗರದಲ್ಲಿ 6000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಹೈಡೆನ್ಸಿಟಿ ಕಾರಿಡಾರ್ ಯೋಜನೆಯಲ್ಲಿ ಒಟ್ಟು 108 ಕಿ.ಮೀ ರಸ್ತೆಗಳನ್ನು 273 ಕೋಟಿ ರೂ,ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹ ತಪ್ಪಿಸಲು ಒಟ್ಟು 195 ಕಿ.ಮೀ ಉದ್ದದ ಚರಂಡಿ ಮತ್ತು ಕಲ್ವರ್ಟ್​ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

2-ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್​ಗಳನ್ನು 150 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

3.ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್​ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಅಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆಯವರೆಗೆ ಇಂಟಿಗ್ರೇಟೆಡ್ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುತ್ತದೆ.

4. 1 ಸಾವಿರ ಕೋಟಿ ರೂ ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ ಆರ್ಟೀರಿಯಲ್ ಹಾಗೂ ಸಬ್​ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

5.ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ 300 ಕೋಟಿ ರೂ. ಒದಗಿಸಲಾಗುವುದು.

6.ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ.

7.ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್​ ಬೋರ್ಡ್​ ಜಂಕ್ಷನ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ 58.19 ಕಿ.ಮೀಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ಪ್ರಗತಿಯತಲ್ಲಿವೆ. ಈ ವರ್ಷದಲ್ಲಿ 40.15 ಕಿ.ಮೀ ಉದ್ದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ.

8.ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ.

9.ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಸಿರು ನಿಶಾನೆ ತೋರಿದೆ.

10. ಹವಾಮಾನ ಬದಲಾವಣೆಯ ಪರಿಣಾಮವನ್ನು ಕಡಿಮೆ ಮಾಡಲು ಮತ್ತು ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು 3000 ಕೋಟಿ ರೂ.ಗಳ ಯೋಜನೆಯನ್ನು ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು.

11. ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜೈಕಾ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳು 2023-24ನೇ ಸಾಲಿನಲ್ಲಿ ಪೂರ್ಣಗೊಳಸಿಲಾಗುವುದು.

12. ಬೆಂಗಳೂರು ನಗರದಲ್ಲಿ 1850 ಎಂಎಲ್​ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು ಇದರಲ್ಲಿ 1500 ಎಂಎಲ್​ಡಿ ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ.

13. ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ.

14.ವಾಣಿಜ್ಯ ಮಳಿಗೆಗಳು ಆಸ್ಪತ್ರೆಗಳು, ಹೋಟೆಲ್​ಗಳು ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದು ಕಡ್ಡಾಯ.

15.ಬೆಂಗಳೂರಿನಲ್ಲಿ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸಲಾಗುವುದು. ಈ ಉದ್ದೇಶಕ್ಕಾಗಿ 243 ವಾರ್ಡ್​ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್​ಗಳನ್ನು ಅನುಮೋದಿಸಲಾಗಿದೆ.

16.ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ.ಗಳ ಯೋಜನೆ

17.ಬೆಂಗಳೂರಿನ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ 250 ಸುಸಜ್ಜಿತ ಶಿ ಟಾಯ್ಲೆಟ್​ಗಳನ್ನು ನಿರ್ಮಿಸಲಾಗುವುದು. ಶೌಚಾಲಯ, ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್ ಸೌಲಭ್ಯ.

18. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ.ಗಳ ಅನುದಾನ ಒದಗಿಸಿದೆ.

ಕರ್ನಾಟಕ ಬಜೆಟ್ ಲೈವ್ ಅಪ್​ಡೇಟ್ಸ್

ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು

Published On - 11:12 am, Fri, 17 February 23

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು