Karnataka Budget 2023: ಆರೋಗ್ಯ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್​ನಲ್ಲಿ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ

|

Updated on: Feb 17, 2023 | 12:32 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ.

Karnataka Budget 2023: ಆರೋಗ್ಯ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್​ನಲ್ಲಿ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ
ಆರೋಗ್ಯ
Follow us on

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ.

1. ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಆರೋಗ್ಯ ಸೇವೆಗಳನ್ನು ತಳಹಂತದಲ್ಲಿಯೂ ಬಲಪಡಿಸಲು ಹಾಗೂ ಜನರಿಗೆ ಸ್ಥಳೀಯವಾಗಿ, ಸುಲಭವಾಗಿ ತಜ್ಞರ ಸೇವೆಯನ್ನು ಒದಗಿಸಲು 2022-23ನೇ ಸಾಲಿನಲ್ಲಿ ಘೋಷಿಸಿದಂತೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲೂಕು ಆಸ್ಪತ್ರೆ ಹಾಗೂ ಒಂದು ಜಿಲ್ಲಾ ಆಸ್ಪತ್ರೆಗಳನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದೆ. ಇದಕ್ಕೆ 781 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

2. ರಾಜ್ಯದ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್​​ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, 272 ನಮ್ಮ ಕ್ಲಿನಿಕ್​ಗಳು ಕಾರ್ಯಾರಂಭ ಮಾಡಿವೆ.

3. ತಾಲೂಕು ಆಸ್ಪತ್ರೆಗಳಿಲ್ಲದ ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು.

4. PM-ABHIM ಅಡಿಯಲ್ಲಿ ತೃತೀಯ ಹಂತದ ಆರೈಕೆಯನ್ನು ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಮತ್ತು ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್​ಗಳನ್ನು ಹಾಗೂ ತುಮಕೂರು ಮತ್ತು ಬೆಂಗಳೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್​ಗಳನ್ನು ಸ್ಥಾಪಿಸಲಾಗುವುದು.

5. ರಾಜ್ಯದಲ್ಲಿ ತಾಯಿಮರಣ ಹಾಗೂ ಶಿಶುಮರಣ ದರವನ್ನು ಇಳಿಸಲು ಸರ್ಕಾರವು ಕ್ರಮ ಕೈಗೊಂಡಿದ್ದು, 3 ವರ್ಷದಲ್ಲಿ ತಾಯಿ ಮರಣ ದರವನ್ನು ಇಳಿಸಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದು, ಇದರಿಂದಾಗಿ ಕಳೆದ 3 ವರ್ಷದಲ್ಲಿ ತಾಯಿ ಮರಣ ದರವನ್ನು ಪ್ರತಿ ಲಕ್ಷಕ್ಕೆ 83 ರಿಂದ 19ಕ್ಕೆ ಇಳಿಸಲು ಸಾಧ್ಯವಾಗಿರುತ್ತದೆ.

6. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

7. ರಾಜ್ಯದಲ್ಲಿ ರಕ್ತಹೀನತೆಯ ದೊಡ್ಡ ಸವಾಲನ್ನು ಎದುರಿಸಲು ಬಹು ಆಯಾಮಗಳ ದೃಷ್ಟಿಕೋನದೊಂದಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಇದರಲ್ಲಿ ನವಜಾತ ಶಿಶುಗಳು, ಮಕ್ಕಳು, ಗರ್ಭಿಣಿಯವರು, ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರು.ಗಳನ್ನು ಒದಗಿಸಲಾಗಿದೆ.

8. ಮನೆ ಮನೆಗೆ ಆರೋಗ್ಯ ಕಾರ್ಯಕ್ರಮದಲ್ಲಿ ಶಿಬಿರಗಳ ಆಯೋಜನೆ.

9. ಅತಿ ಕಡಿಮೆ ಬೆಲೆಯಲ್ಲಿ ಸಾರ್ವಜನಿಕರಿಗೆ ಔಷಧಿಗಳನ್ನು ಒದಗಿಸುತ್ತಿರುವ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ಕ್ರಮ.

10. ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ಮತ್ತು ಅದರ ಬಗ್ಗೆ ಅರಿವು ಮೂಡಿಸಲು ನಿಮ್ಹಾನ್ಸ್ ಸಹಯೋಗದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಯೋಜನೆ.

11. ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್ ಹೆಲ್ಡ್​ ಎಕ್ಸ್​ರೇ ಯಂತ್ರಗಳ ಸಹಾಯದಿಂದ ಕ್ಷಯರೋಗಿಗಳ ಆರಂಭಿಕ ತಪಾಸಣೆ ಚಿಕಿತ್ಸೆಗಾಗಿ 12.50 ಕೋಟಿ ರು. ಮೀಸಲು.

12. ಉಚಿತ ಡಯಾಲಿಸಿಸ್ ಸೇವೆಯನ್ನು 30,000 ಡಯಾಲಿಸಿಸ್ ಸೈಕಲ್​ಗಳಿಂದ 60,000 ಸೈಕಲ್​ಗಳಿಗೆ ಹೆಚ್ಚಿಸಲಾಗಿತ್ತು, ಈ ವರ್ಷ 1 ಲಕ್ಷ ಡಯಾಲಿಸಿಸ್ ಸೈಕಲ್ ಹೆಚ್ಚಳ.

13. ನವಜಾತ ಶಿಶುಗಳಿಂದ 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಲು ವಾತ್ಸಲ್ಯ ಯೋಜನೆ.

14. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಹಾಗೂ ಸ್ಥಳೀಯವಾಗಿಯೇ ಪ್ರಯೋಗಾಲಯಗಳ ಸೇವೆ ಒದಗಿಸಲು 129 ತಾಲೂಕು ಪ್ರಯೋಗಾಲಯಗಳ ಸ್ಥಾಪನೆ.

15. ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು, 16. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ

17. ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು ಕಳೆದ ವರ್ಷ ಜಯದೇವ ಸಂಸ್ಥೆಯಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ ಕೆಸಿ ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಗಳು ಹಾಗೂ 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು,

18. ಶಿವಮೊಗ್ಗ ಮತ್ತು ಕಲಬುರಗಿಯ ಕಿದ್ವಾಯಿ ಸಂಸ್ಥೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ. ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.

19. ಬೆಂಗಳೂರು, ಹುಬ್ಬಳ್ಳಿ., ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಐವಿಎಫ್ ಕ್ಲಿನಿಕ್​ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

 

ಕರ್ನಾಟಕ ಬಜೆಟ್ ಲೈವ್ ಅಪ್​ಡೇಟ್ಸ್

ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು