Karnataka Budget 2023: ಕೆಂಪೇಗೌಡರ ಸರ್ಕಿಟ್, ಟೂರಿಸ್ಟ್ ಗೈಡ್​ಗಳಿಗೆ ಸಹಾಯಧನ ಹೆಚ್ಚಳ: ಪ್ರವಾಸೋದ್ಯಮಗಳಿಗೆ ಏನೇನು ಸಿಕ್ಕಿದೆ?

Tourism Sector: ರಾಮನಗರದ ಪ್ರಸಿದ್ಧ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ, ವಿಜಯಪುರದ ಗೋಲಗುಂಬಜ್, ಹಂಪಿಯ ವಿಜಯವಿಠಲ ದೇವಸ್ಥಾನಮ, ಬಾದಾಮಿ ಗುಹೆ, ಚಿಕ್ಕಬಳ್ಲಾಪುರದ ಭೋಗನಂದೀಶ್ವರ ದೇವಸ್ಥಾನ ಇತ್ಯಾದಿಗಳ ಅಭಿವೃದ್ಧಿಗೆ 60 ಕೋಟಿ ರೂ ಅನುದಾನ ನೀಡಲಾಗಿದೆ.

Karnataka Budget 2023: ಕೆಂಪೇಗೌಡರ ಸರ್ಕಿಟ್, ಟೂರಿಸ್ಟ್ ಗೈಡ್​ಗಳಿಗೆ ಸಹಾಯಧನ ಹೆಚ್ಚಳ: ಪ್ರವಾಸೋದ್ಯಮಗಳಿಗೆ ಏನೇನು ಸಿಕ್ಕಿದೆ?
Chikkaballapur Utsav flower temple, shiva linga are attracting people
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Feb 17, 2023 | 11:47 AM

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಈ ಬಾರಿ 3 ಲಕ್ಷ ಕೋಟಿ ರೂಗೂ ಹೆಚ್ಚು ಗಾತ್ರದ ಆಯವ್ಯಯ ಪತ್ರವನ್ನು (Karnataka Budget 2023) ಮಂಡಿಸಿದ್ದಾರೆ. ಪ್ರವಾಸೋದ್ಯಮ (Tourism) ಅಭಿವೃದ್ಧಿಗೂ ಕೆಲವೊಂದಿಷ್ಟು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ಪ್ರಮುಖ ಪ್ರವಾಸಿ ಸ್ಥಳಗಳಾದ ಚಾಮುಂಡಿ ಬೆಟ್ಟ, ಹಂಪಿ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಯೋಜನೆ ಹಾಕಲಾಗಿದೆ. ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಐತಿಹಾಸಿಕ ಸ್ಥಳಗಳನ್ನು ಇಟ್ಟುಕೊಂಡು ಪ್ರವಾಸಿ ಸರ್ಕಿಟ್ ಅನ್ನು ಈ ವರ್ಷದಿಂದಲೇ ಪ್ರಾರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಹೇಳಿದ್ದಾರೆ.

ಹಾಗೆಯೇ, ರಾಮನಗರದ ಪ್ರಸಿದ್ಧ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ, ವಿಜಯಪುರದ ಗೋಲಗುಂಬಜ್, ಹಂಪಿಯ ವಿಜಯವಿಠಲ ದೇವಸ್ಥಾನಮ, ಬಾದಾಮಿ ಗುಹೆ, ಚಿಕ್ಕಬಳ್ಲಾಪುರದ ಭೋಗನಂದೀಶ್ವರ ದೇವಸ್ಥಾನ ಇತ್ಯಾದಿಗಳ ಅಭಿವೃದ್ಧಿಗೆ 60 ಕೋಟಿ ರೂ ಅನುದಾನ ನೀಡಲಾಗಿದೆ. ರಾಜ್ಯದ ವಿವಿಧ ಸ್ಮಾರಕಗಳ 3ಡಿ ಮ್ಯಾಪಿಂಗ್ ಮತ್ತು ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲೀಕರಣ ಮಾಡುವತ್ತ ಸರ್ಕಾರ ಗಮನ ಕೊಟ್ಟಿದೆ.

ರಾಜ್ಯ ಬಜೆಟ್ 2023: ಪ್ರವಾಸೋದ್ಯಮಕ್ಕೆ ಸಿಕ್ಕಿದ್ದು:

  • ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗು ಸ್ವದೇಶ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳ ಅಭಿವೃದ್ಧಿ ಯೋಜನೆಗಳ ಮಂಜೂರು.
  • ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ
  • ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್ ಈ ವರ್ಷದಿಂದ
  • ಸಂತ ಸೇವಾ ಲಾಲ್ ಅವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸೂಗೊಂಡನಕೊಪ್ಪವನ್ನು ಅಭಿವೃದ್ಧಿಗೆ 5 ಕೋಟಿ ರೂ
  • ದಾವನಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿನ ಷಹಾಜಿ ಮಹಾರಾಜ್ ಸಮಾಧಿ ಸ್ಥಳ ಅಭಿವೃದ್ಧಿಗೆ 5 ಕೋಟಿ ರೂ
  • ಹಾವೇರಿಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ
  • ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ರೋಪ್ವೇ ನಿರ್ಮಾಣ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು
  • 398 ನೊಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ (Tourist Guides) ನೀಡಲಾಗುತ್ತಿರುವ 2 ಸಾವಿರ ರೂ ಪ್ರೋತ್ಸಾಹ ಧನವನ್ನು 5 ಸಾವಿರ ರೂಗೆ ಹೆಚ್ಚಳ. ಇದಕ್ಕಾಗಿ ಬಜೆಟ್​ನಲ್ಲಿ 1.10 ಕೋಟಿ ರೂ ಅನುದಾನ
  • ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆ ಬಿಂಬಿಸುವ ಹಂಪಿಯ ವಿಜಯವಿಠಲ ದೇವಾಲಯ, ಪುರಂದರ ಮಂಟಪ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಬೀದರ್ ಕೋಟೆಗಳ ಅಭಿವೃದ್ಧಿ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, 3ಡಿ ಪ್ರೊಜೆಕ್ಷನ್ ಮ್ಯಾಪಿಂಗ್, ಧ್ವನಿ ಮತ್ತು ಬೆಳಕು ಪ್ರದರ್ಶನಗಳ ಅಳವಡಿಕೆ. ಇದಕ್ಕಾಗಿ 2023-24ರ ಸಾಲಿನಲ್ಲಿ 60 ಕೋಟಿ ಅನುದಾನ
  • ರಾಜ್ಯದಲ್ಲಿನ ವಿವಿಧ ಸ್ಮಾರಕಗಳನ್ನು 3ಡಿ ಮ್ಯಾಪಿಂಗ್ ಮತ್ತು ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲೀಕರಿಸುವ ಕಾರ್ಯ ನಡೆದಿದೆ.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್