AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಮಾರ್ಚ್​ 4ರಂದು ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ

CM Basavaraj Bommai: ಬಜೆಟ್ ಅಧಿವೇಶನವು ಮೂರು ವಾರಗಳ ಕಾಲ ನಡೆಯಲಿದೆ. ಇದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಚೊಚ್ಚಿಲ ಬಜೆಟ್

Karnataka Budget: ಮಾರ್ಚ್​ 4ರಂದು ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 18, 2022 | 7:36 PM

Share

ಬೆಂಗಳೂರು: ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಅಯವ್ಯಯವನ್ನು (Karnataka Budget 2022) ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮಾರ್ಚ್​​ 4ರಂದು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು ಮೂರು ವಾರಗಳ ಕಾಲ ನಡೆಯಲಿದೆ. ಇದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಚೊಚ್ಚಿಲ ಬಜೆಟ್. ನಗರದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯು ಬಜೆಟ್ ಮಂಡನೆಗೆ ಅನುಮೋದನೆ ನೀಡಿತು. ಆದರೆ ಈವರೆಗೆ ಬಜೆಟ್ ದಿನಾಂಕದ ಬಗ್ಗೆ ಮುಖ್ಯಮಂತ್ರಿ ಅಧಿಕೃತ ಹೇಳಿಕೆ ನೀಡಿಲ್ಲ. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಎಲ್ಲ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಬಜೆಟ್ ಮೀಟಿಂಗ್ ಕರೆದಿದ್ದೇನೆ. ಇನ್ನೂ ಪ್ರಮುಖ ಸಂಘ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಅನಂತರವೇ ಬಜೆಟ್ ಮಂಡನೆ ಕುರಿತು ನಿರ್ಧಾರ ಮಾಡಲಾಗುವುದು ಎಂದರು. ಬಜೆಟ್ ದಿನಾಂಕದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇಂದು ಮಧ್ಯಾಹ್ನ 12.30ಕ್ಕೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕವನ್ನು ಸಚಿವರು ಒಪ್ಪಿಕೊಂಡರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ದಿನಗಳಿಂದ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೊವಿಡ್ ಪಿಡುಗಿನ ಹಿಡಿತಕ್ಕೆ ಸಿಲುಕಿದ್ದ ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆಯು ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಲ್ಲ ಎಂಬ ಮಾತುಗಳು ಅಧಿಕಾರಿಗಳ ವಲಯದಲ್ಲಿ ಕೇಳಿ ಬರುತ್ತಿದೆ. ಏರಿದ ಹಣದುಬ್ಬರ ಮತ್ತು ಬೆಲೆಏರಿಕೆಯಿಂದ ಕಂಗಾಲಾಗಿರುವ ಜನರು ಸಹ ಬಜೆಟ್​ ಮೇಲೆ ನಿರೀಕ್ಷೆಗಳನ್ನು ಬೆಳೆಸಿಕೊಂಡಿದ್ದಾರೆ. ಎಂದಿನಂತೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ವಲಯಗಳಿಗೆ ಹೆಚ್ಚಿನ ಮಹತ್ವ ಸಿಗಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಬಜೆಟ್ ಪ್ರಕ್ರಿಯೆ ಶುರುವಾಗಿದ್ದು ಇಲಾಖಾವಾರು ಸಭೆ ನಡೆಸಿದ್ದೇನೆ. ಫೆಬ್ರವರಿ 25ರ ನಂತರ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್ ಸಿದ್ಧಪಡಿಸಲಾಗುವುದು. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆ ಗಮನಿಸಿ ಬಜೆಟ್​ ಸಿದ್ಧಪಡಿಸುತ್ತೇನೆ. ಬಜೆಟ್​ನಲ್ಲಿ ರೂಪಿಸುವ ಯೋಜನೆಗಳು ಹೇಗಿರುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೊಮ್ಮಾಯಿ ಈ ಮೊದಲು ಹೇಳಿದ್ದರು.

ಬಜೆಟ್​ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲು ನಿರ್ಧರಿಸಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು.

ಕಂದಾಯ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ತಮ್ಮ ಪ್ರಸ್ತಾವ ಸಲ್ಲಿಸಿದರು. ಕಳೆದ ಬಜೆಟ್​ನಲ್ಲಿ ಮೀಸಲಿಟ್ಟ ಅನುದಾನದ ಬಳಕೆ ವಿವರ ಹಾಗೂ ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ವಿವರಣೆ ನೀಡಿದರು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆಯಿಂದ ಬಜೆಟ್​ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕದಲ್ಲಿ 60ರಿಂದ 100 ವರ್ಷದ ದಾಖಲೆಗಳು ಸಾಕಷ್ಟು ಸಂಖ್ಯೆಯಲ್ಲಿವೆ. ಅವನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಡಿಜಿಟಲ್ ರೂಪದ ದಾಖಲಾತಿಗೆ ವ್ಯವಸ್ಥೆ ಮಾಡಬೇಕು. ಎಲ್ಲ ಕಡೆ ಡ್ರೋಣ್ ಸಮೀಕ್ಷೆ ಮಾಡಬೇಕು. ಹೊಸ ತಾಲೂಕುಗಳಲ್ಲಿ ಆಡಳಿತ ಸೌಧ ನಿರ್ಮಿಸಬೇಕು. ಮನೆ ಬಾಗಿಲಿಗೆ ಪಿಂಚಣಿ ಕೊಡುವ ವ್ಯವಸ್ಥೆ ತರಬೇಕು. ಇಲಾಖೆಗೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ನಾವು ಕೋರಿರುವ ಅನುದಾನದಲ್ಲಿ ಕೊವಿಡ್ ಪರಿಹಾರದ ಮೊತ್ತವೂ ಸೇರಿದೆ. ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್​ಡಿಆರ್​ಎಫ್ ನಿಯಮಕ್ಕಿಂತಲೂ ಹೆಚ್ಚಿನ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಹೆಕ್ಟೇರ್​ಗೆ ₹ 6 ಸಾವಿರ ರೂಪಾಯಿಯಂತೆ ಒಟ್ಟು ₹ 1135 ಕೋಟಿ ಮೊತ್ತವನ್ನು ಇಂದು ಮತ್ತು ನಾಳೆ ಬಿಡುಗಡೆ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬಸವರಾಜ ಬೊಮ್ಮಾಯಿ: ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ

ಇದನ್ನೂ ಓದಿ: ಹೈಕೋರ್ಟ್​ ಆದೇಶವನ್ನು ಎಲ್ಲರೂ ಪಾಲಿಸಬೇಕು; ಆಗ ಸಮಸ್ಯೆ ಬಗೆಹರಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ