AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 25 ಸಾವಿರಕ್ಕೆ ಏರಿಕೆ; ರಾಜ್ಯ ಬಜೆಟ್​ನಲ್ಲಿ ಘೋಷಣೆ

Karnataka Budget, Tax Collections: ಕಡಿಮೆ ಆದಾಯದ ನೌಕರರಿಗೆ ವೃತ್ತಿ ತೆರಿಗೆಯಿಂದ ಮುಕ್ತಿ ಕೊಡಲಾಗಿದೆ. ವೃತ್ತಿ ತೆರಿಗೆಯಿಂದ ವಿನಾಯಿತಿ ಇರುವ ಮಿತಿಯನ್ನು 15 ಸಾವಿರ ರೂ ನಿಂದ 25 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ.

Budget 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 25 ಸಾವಿರಕ್ಕೆ ಏರಿಕೆ; ರಾಜ್ಯ ಬಜೆಟ್​ನಲ್ಲಿ ಘೋಷಣೆ
ಜಿಎಸ್​ಟಿ
TV9 Web
| Edited By: |

Updated on:Feb 17, 2023 | 2:04 PM

Share

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಕಡಿಮೆ ಅದಾಯದವರಿಗೆ ವೃತ್ತಿ ತೆರಿಗೆ (Profession Tax) ವಿನಾಯಿತಿ ಮಿತಿಯನ್ನು ಹೆಚ್ಚಿಸಿರುವುದಾಗಿ ತಮ್ಮ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಪ್ರೊಫೆಷನಲ್ ಟ್ಯಾಕ್ಸ್​ನಿಂದ ವಿನಾಯಿತಿ ಕೊಡಲಾಗುವ ಮಿತಿಯನ್ನು 25 ಸಾವಿರ ರೂಪಾಯಿಗೆ ಏರಿಸಲಾಗಿದೆ. ಈ ಹಿಂದೆ ಇದರ ಮಿತಿ 15 ಸಾವಿರ ರೂ ಇತ್ತು. ಹಾಗೆಯೇ, ವಾಣಿಜ್ಯ ತೆರಿಗೆ ಇಲಾಖೆ ದಾಖಲೆ ಮಟ್ಟದಲ್ಲಿ ಅದಾಯ ಗಳಿಸಿರುವ ಸಂಗತಿಯನ್ನು ಸಿಎಂ ಬೊಮ್ಮಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮತ್ತೊಂದು ಗಮನಾರ್ಹ ನಿರ್ಧಾರದಲ್ಲಿ ಕರ ಸಮಾಧಾನ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದು ಜಿಎಸ್​ಟಿ ಪೂರ್ವ ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಇರುವ ಯೋಜನೆಯಾಗಿದೆ.

ವಾಣಿಜ್ಯ ತೆರಿಗೆಗಳು

ಕಡಿಮೆ ಆದಾಯದ ನೌಕರರಿಗೆ ವೃತ್ತಿ ತೆರಿಗೆಯಿಂದ ಮುಕ್ತಿ ಕೊಡಲಾಗಿದೆ. ವೃತ್ತಿ ತೆರಿಗೆಯಿಂದ ವಿನಾಯಿತಿ ಇರುವ ಮಿತಿಯನ್ನು 15 ಸಾವಿರ ರೂ ನಿಂದ 25 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಅಂದರೆ 25 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವವರಿಂದ ಪ್ರೊಫೆಷನ್ ಟ್ಯಾಕ್ಸ್ ಪಡೆಯಲಾಗುವುದಿಲ್ಲ. 25 ಸಾವಿರ ರೂಗಿಂತ ಹೆಚ್ಚು ಸಂಬಳ ಪಡೆಯುವವರು 200 ರೂ ವೃತ್ತಿ ತೆರಿಗೆ ಪಾವತಿಸಬೇಕು.

ಜಿಎಸ್​ಟಿ ಪೂರ್ವ ತೆರಿಗೆ ವಿವಾದಗಳನ್ನು ಇತ್ಯರ್ಥಗೊಳಿಸಲು ಕರ ಸಮಾಧಾನ ಯೋಜನೆ ಜಾರಿಗೆ ತರಲಾಗುತ್ತಿದೆ. ತೆರಿಗೆ ಬಾಕಿ ಉಳಿಸಿಕೊಂಡವರು ಯಾವುದೇ ವ್ಯಾಜ್ಯದ ತಲೆನೋವಿಲ್ಲದೆ ಬಾಕಿ ಹಣ ಪಾವತಿಸುವ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 30ರವರೆಗೂ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಬಾಕಿ ತೆರಿಗೆ ಪಾವತಿಸಿದರೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ಇರುತ್ತದೆ ಎಂದು ಬಜೆಟ್​ನಲ್ಲಿ ಆಶ್ವಾಸನೆ ಕೊಡಲಾಗಿದೆ.

ಇದನ್ನೂ ಓದಿ: Karnataka Budget 2023: ಕಿವಿಯಲ್ಲಿ ಹೂ ಇಟ್ಟುಕೊಂಡೇ ಸಿಎಂ ಬೊಮ್ಮಾಯಿಯನ್ನು ಅಭಿನಂದಿಸಿದ ಡಿಕೆ ಶಿವಕುಮಾರ್

ಜಿಎಸ್​ಟಿ ಸಂಗ್ರಹ: ರಾಜ್ಯದಲ್ಲಿ ಜಿಎಸ್​ಟಿ ಸಂಗ್ರಹ ಗಣನೀಯವಾಗಿ ಹೆಚ್ಚಿದೆ. 2022-23ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಸಿಗುವ ಜಿಎಸ್​ಟಿ ಪರಿಹಾರ ಸೇರಿ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹವು 93,558 ಕೋಟಿ ರೂ ಎಂದು ಅಂದಾಜು ಮಾಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್​ಟಿ ಪರಿಹಾರ ಹೊರತುಪಡಿಸಿ 72,010 ಕೋಟಿ ರೂ ಗುರಿ ಹೊಂದಿತ್ತು. ಇದನ್ನು ಮೀರಿ 83,010 ಕೋಟಿ ರೂ ಸಂಗ್ರಹ ಮಾಡಲಾಗುತ್ತಿದೆ. ಕೇಂದ್ರದಿಂದ ಜಿಎಸ್​ಟಿ ಪರಿಹಾರವಾಗಿ 10,548 ಕೋಟಿ ರೂ ಸಿಗಲಿದೆ.

2023-24 ರ ಸಾಲಿನ ವರ್ಷಕ್ಕೆ ಜಿಎಸ್​ಟಿ ಪರಿಹಾರ ಹೊರತುಪಡಿಸಿ 92,000 ಕೋಟಿ ರೂ ತೆರಿಗೆ ಸಂಗ್ರಹಿಸಬೇಕೆಂದು ವಾಣಿಜ್ಯ ಇಲಾಖೆಗೆ ಗುರಿ ಕೊಡಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2022-23ರ ಸಾಲಿನಲ್ಲಿ 15 ಸಾವಿರ ರೂಗಳ ಗುರಿ ಹೊಂದಿತ್ತು. ಆ ಗುರಿ ಮೀರಿ 17 ಕೋಟಿ ರೂ ರೆವೆನ್ಯೂ ಸಂಗ್ರಹ ಆಗುವ ನಿರೀಕ್ಷೆ ಇದೆ. ಮುಂದಿನ ಹಣಕಾಸು ವರ್ಷಕ್ಕೆ ನೊಂದಣಿ ಮತ್ತು ಮುದ್ರಾಂಕ ಇಲಾಖೆಗೆ 19 ಸಾವಿರ ಕೋಟಿ ರೂ ರಾಜಸ್ವ ಸಂಗ್ರಹದ ಗುರಿ ಕೊಡಲಾಗಿದೆ.\

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

Published On - 2:01 pm, Fri, 17 February 23

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ