ಬೆಂಗಳೂರು: ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಬಜೆಟ್ನಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ಪ್ರಸ್ತಾವ ಮಾಡಲಾದ ಯೋಜನೆಗಳ ವಿವರ ಹೀಗಿದೆ:
* ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳು, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಲಾಗುತ್ತದೆ.
* ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೂ ಸಾಲ ನೀಡಲಾಗುತ್ತದೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ
* ಆನ್ಲೈನ್ ಮಾರುಕಟ್ಟೆ ಒದಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಪಾಸ್ ನೀಡಲಾಗುತ್ತದೆ.
* ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್
* ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾಗಳ ಅಳವಡಿಕೆ
* ನಿರ್ಭಯಾ ಯೋಜನೆಯಡಿ ಸಿಸಿ ಕ್ಯಾಮರಾಗಳ ಅಳವಡಿಕೆ
* ಎಲಿವೇಟ್ ವುಮನ್ ಎಂಟರ್ಪ್ರನ್ಯೂರ್ಶಿಪ್ ಯೋಜನೆ ಜಾರಿಗೆ ಬರಲಿದೆ
* 2021- 22ನೇ ಸಾಲಿನಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲು.