AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

Union Budget 2025: ಕೇಂದ್ರ ಬಜೆಟ್​​ನಲ್ಲಿ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ನಲ್ಲಿ ತೆಗೆದುಕೊಳ್ಳಬಹುದಾದ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಏನು, ಇದರಿಂದ ರೈತರಿಗೇನು ಪ್ರಯೋಜನ ಮತ್ತು ಯಾವ ರೈತರಿಗೆ ಇದರ ಲಾಭ ಸಿಗುತ್ತದೆ ಎಂಬ ಮಾಹಿತಿ ಇಲ್ಲಿದೆ.

Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ
ಕಿಸಾನ್ ಕ್ರೆಡಿಟ್ ಕಾರ್ಡ್ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Feb 01, 2025 | 4:53 PM

Share

ನವದೆಹಲಿ, ಫೆಬ್ರವರಿ 1: ಬಡವರು, ಯುವಕರು, ರೈತರು ಮತ್ತು ಮಹಿಳೆಯರಿಗೆ ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ರೈತರಿಗೆ ಸಂಬಂಧಿಸಿದಂತೆ ಅನೇಕ ಘೋಷಣೆಗಳನ್ನು ಮಾಡಲಾಗಿದೆ. ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಜೆಟ್​​​ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಮಿತಿಯನ್ನು ಹೆಚ್ಚಿಸಲಾಗಿದೆ. ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ನೀಡುವ ಸಾಲದ ಪ್ರಮಾಣವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು?

ಬೆಳೆ ಉತ್ಪಾದನೆ ಮತ್ತು ಕೃಷಿ ಅಗತ್ಯಗಳಿಗಾಗಿ ರೈತರಿಗೆ ಸುಲಭವಾಗಿ ಸಾಲ ನೀಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯನ್ನು 1988 ರಲ್ಲಿ ಭಾರತ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನಾಬಾರ್ಡ್ ಸಹಕಾರದೊಂದಿಗೆ ಜಾರಿಗೆ ತಂದಿತ್ತು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರು ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯುತ್ತಾರೆ. ಆ ಮೂಲಕ ರೈತರು ಬಿತ್ತನೆ ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳು ಮತ್ತು ಇತರ ಕೃಷಿ ಅಗತ್ಯಗಳನ್ನು ಪೂರೈಸಬಹುದಾಗಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಯಾರು ಅರ್ಹರು?

ಒಬ್ಬನೇ ಅಥವಾ ಜಂಟಿಯಾಗಿ ಕೃಷಿ ಮಾಡುತ್ತಿರುವ ಎಲ್ಲ ರೈತರು ಈ ಯೋಜನೆಯ ಲಾಭವನ್ನು ಪಡೆಯಬಹುದು. ಇವುಗಳಲ್ಲಿ ಭೂ ಮಾಲೀಕರು, ಗೇಣಿದಾರ ರೈತರು, ಮೌಖಿಕ ಗುತ್ತಿಗೆದಾರರು ಕೂಡ ಸೇರಿದ್ದಾರೆ. ಜೊತೆಗೆ, ಸ್ವಸಹಾಯ ಗುಂಪು (SHG) ಮತ್ತು ಜಂಟಿ ಹೊಣೆಗಾರಿಕೆ ಗುಂಪುಗಳಾಗಿ (JLG) ಕೃಷಿ ಮಾಡುವ ರೈತರು ಸಹ ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ವಿಶೇಷವೇನು?

  • ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ನೇರವಾಗಿ ಇನ್‌ಪುಟ್ ಡೀಲರ್‌ಗಳೊಂದಿಗೆ ವಹಿವಾಟು ನಡೆಸಲು ಮತ್ತು ಅವರ ಕೃಷಿ ಉತ್ಪನ್ನಗಳ ಮಾರಾಟದಿಂದ ಬರುವ ಆದಾಯವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪಡೆಯಲು ಅನುಮತಿಸುತ್ತದೆ.
  • ಇದು ಮ್ಯಾಗ್ನೆಟಿಕ್ ಸ್ಟ್ರೈಪ್ ಕಾರ್ಡ್ ಆಗಿದ್ದು, ಇದರಲ್ಲಿ ವೈಯಕ್ತಿಕ ಗುರುತಿನ ಸಂಖ್ಯೆ (PIN) ಮತ್ತು ISO IIN ಸಂಖ್ಯೆಯನ್ನು ನೀಡಲಾಗಿದೆ.
  • ಇದು ಎಲ್ಲಾ ಬ್ಯಾಂಕ್‌ಗಳ ಎಟಿಎಂ ಮತ್ತು ಮೈಕ್ರೋ ಎಟಿಎಂಗಳಲ್ಲಿ ಕಾರ್ಯನಿರ್ವಹಿಸುತ್ತದೆ.
  • ಕಾರ್ಡ್ ಅನ್ನು ಯುರೋಪೇ, ಮಾಸ್ಟರ್ ಕಾರ್ಡ್ ಅಥವಾ ವೀಸಾ ಮೂಲಕ ನೀಡಲಾಗುತ್ತದೆ.
  • ಆಧಾರ್ ಲಿಂಕ್ಡ್ ಬ್ಯಾಂಕಿಂಗ್ ವ್ಯವಸ್ಥೆಯಡಿ, ಕೆಲವು ಬ್ಯಾಂಕ್‌ಗಳಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಡೆಬಿಟ್ ಕಾರ್ಡ್‌ಗಳನ್ನು ಸಹ ನೀಡಲಾಗುತ್ತದೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ