ರಾಜ್ಯಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11495 ಕೋಟಿ ರೂ. ಅನುದಾನ ನೀಡಿ: ಕೆಂದ್ರಕ್ಕೆ ಕೃಷ್ಣ ಬೈರೇಗೌಡ ಮನವಿ

ಕೇಂದ್ರದಲ್ಲಿ ಹೊಸ ಸರ್ಕಾರ ರಚನೆ ಆಗಿರುವುದಿಂದ ಪ್ರಸಕ್ತ ಆರ್ಥಿಕ ವರ್ಷದ ಕೇಂದ್ರ ಸರ್ಕಾರ ಹೊಸ ಬಜೆಟ್​ ಮಂಡಿಸಲಿದೆ. ಅದಕ್ಕಾಗಿ ಇಂದು ಕೇಂದ್ರ ಬಜೆಟ್ ಪೂರ್ವಭಾವಿ ಸಮಾಲೋಚನಾ ಸಭೆ ನಿಗದಿಯಾಗಿತ್ತು. ಸಿಎಂ ಸಿದ್ದರಾಮಯ್ಯ ಪರವಾಗಿ ಕರ್ನಾಟಕದಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಅಹವಾಲು ಇಟ್ಟಿದ್ದಾರೆ.

ರಾಜ್ಯಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11495 ಕೋಟಿ ರೂ. ಅನುದಾನ ನೀಡಿ: ಕೆಂದ್ರಕ್ಕೆ ಕೃಷ್ಣ ಬೈರೇಗೌಡ ಮನವಿ
ರಾಜ್ಯಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11495 ಕೋಟಿ ರೂ. ಅನುದಾನ ನೀಡಿ: ಕೆಂದ್ರಕ್ಕೆ ಕೃಷ್ಣ ಬೈರೇಗೌಡ ಮನವಿ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jun 22, 2024 | 5:54 PM

ಬೆಂಗಳೂರು, ಜೂನ್ 22: ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ರೂ. ಅನುದಾನವನ್ನು ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದ್ದಾರೆ. ಕೇಂದ್ರ ಬಜೆಟ್ (Budget) ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕರ್ನಾಟಕದಿಂದ ಭಾಗಿಯಾಗಿದ್ದ ಕೃಷ್ಣ ಬೈರೇಗೌಡ ರಾಜ್ಯದ ಅಹವಾಲುಗಳನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರದ ಮುಂದೆ ಅಹವಾಲು ಇಟ್ಟಿ ರಾಜ್ಯ

  1. ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5300 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಿ ಮತ್ತು ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ.
  2. ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11495 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ.
  3. ಸೆಸ್‌ಗಳು ಮತ್ತು ಸರ್‌ಚಾರ್ಜ್‌ಗಳನ್ನು ವಿಭಾಗಿಸಬಹುದಾದ ಪೂಲ್‌ಗೆ ಸೇರಿಸಿ ಇದರಿಂದ ರಾಜ್ಯಗಳು ಕೇಂದ್ರ ತೆರಿಗೆಗಳಲ್ಲಿ ತಮ್ಮ ಸರಿಯಾದ ಪಾಲನ್ನು ಪಡೆಯಬಹುದು.
  4. ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಎಸ್ಪಿ ಪ್ಯಾಕೇಜ್ ಅನ್ನು ಘೋಷಿಸಿ.
  5. ⁠ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಿ.
  6. ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶದಲ್ಲಿ ರೂ. 1.5 ರಿಂದ 5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರೂ. 1.2 ರಿಂದ ₹ 3 ಲಕ್ಷಕ್ಕೆ ಹೆಚ್ಚಿಸಿ.
  7. ⁠ರಾಯಚೂರಿಗೆ ಎಐಐಎಂಎಸ್ ಘೋಷಿಸಿ.
  8. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವರವಾದ ಟಿಪ್ಪಣಿಯನ್ನು ಸಹ ಸಲ್ಲಿಕೆ ಮಾಡಲಾಗಿದೆ.

ಕೃಷ್ಣ ಬೈರೇಗೌಡ ಟ್ವೀಟ್​

ಹೊಸ ಸರ್ಕಾರ ರಚನೆ ಆಗಿರುವುದಿಂದ ಪ್ರಸಕ್ತ ಆರ್ಥಿಕ ವರ್ಷದ ಕೇಂದ್ರ ಸರ್ಕಾರ ಹೊಸ ಬಜೆಟ್​ ಮಂಡಿಸಲಿದೆ. ಅದಕ್ಕಾಗಿ ಇಂದು ಕೇಂದ್ರ ಬಜೆಟ್ ಪೂರ್ವಭಾವಿ ಸಮಾಲೋಚನಾ ಸಭೆ ನಿಗದಿಯಾಗಿತ್ತು. ಮುಂಚೆ ಈ ಸಭೆಗೆ ಕರ್ನಾಟಕದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಭಾಗವಹಿಸುವಂತೆ ನಿರ್ಮಲಾ ಸೀತಾರಾಮನ್​ ಪತ್ರದ ಮೂಲಕ ಆಹ್ವಾನ ನೀಡಿದ್ದರು.

ಇದನ್ನೂ ಓದಿ: ಡೆಹ್ರಾಡೂನ್​​ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಕೃಷ್ಣ ಬೈರೇಗೌಡ

ನನ್ನ ಬದಲಿಗೆ ಕೃಷ್ಣ ಬೈರೇಗೌಡ ಅವರು ರಾಜ್ಯದ ಪ್ರತಿನಿಧಿಯಾಗಿ ಬಜೆಟ್ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ರಾಜ್ಯದ ಜಿಎಸ್​ಟಿಗೆ ಸಂಬಂಧಿಸಿದ ವಿಚಾರಗಳನ್ನು ಅವರು ನಿರ್ವಹಿಸುತ್ತಿರುವುದರಿಂದ ಅವರೇ ಸಭೆಯಲ್ಲಿ ಭಾಗಿಯಾಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ