900 ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯ್ತು: ಗಾದೆ ಮೂಲಕ ಬಜೆಟ್​ ವ್ಯಂಗ್ಯವಾಡಿದ ಖರ್ಗೆ

2025ನೇ ಸಾಲಿನ ಕೇಂದ್ರ ಬಜೆಟ್ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. "ಒಂಬತ್ತು ನೂರು ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯಿತು" ಎಂಬ ಗಾದೆಯನ್ನು ಉಲ್ಲೇಖಿಸಿ, ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರ್ಣಗೊಳಿಸಿಲ್ಲ ಎಂದು ಕಿಡಿಕಾರಿದ್ದಾರೆ.

900 ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯ್ತು: ಗಾದೆ ಮೂಲಕ ಬಜೆಟ್​ ವ್ಯಂಗ್ಯವಾಡಿದ ಖರ್ಗೆ
900 ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯ್ತು: ಗಾದೆ ಮೂಲಕ ಬಜೆಟ್​ ವ್ಯಂಗ್ಯವಾಡಿದ ಖರ್ಗೆ
Updated By: ಗಂಗಾಧರ​ ಬ. ಸಾಬೋಜಿ

Updated on: Feb 01, 2025 | 6:28 PM

ಬೆಂಗಳೂರು, ಫೆಬ್ರವರಿ 01: ದೇಶವೇ ಹಣದುಬ್ಬರ, ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸುಳ್ಳು ಹೊಗಳಿಕೆ ಗಳಿಸಲು ಹಠ ಹಿಡಿದಿದೆ. 900 ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯಿತು ಎಂಬ ಗಾದೆ ಈ ಬಜೆಟ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಬಜೆಟ್​ನಲ್ಲಿ ಯುವಕರಿಗೆ ಏನೂ ಇಲ್ಲ

ಈ ಕುರಿತಾಗಿ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, 10 ವರ್ಷಗಳಲ್ಲಿ, ಮೋದಿ ಸರ್ಕಾರವು ಮಧ್ಯಮ ವರ್ಗದಿಂದ 54.18 ಲಕ್ಷ ಕೋಟಿ ರೂ. ಆದಾಯ ತೆರಿಗೆಯನ್ನು ಸಂಗ್ರಹಿಸಿದೆ. ಈಗ ನೀಡುತ್ತಿರುವ 12 ಲಕ್ಷದವರೆಗಿನ ವಿನಾಯಿತಿಯ ಪ್ರಕಾರ 1 ವರ್ಷಕ್ಕೆ 80,000 ಉಳಿತಾಯ, ತಿಂಗಳಿಗೆ ಕೇವಲ 6,666 ರೂ ಮಾತ್ರ. ಇದನ್ನ ಸ್ವತಃ ಹಣಕಾಸು ಸಚಿವರೇ ಹೇಳುತ್ತಿದ್ದಾರೆ. ಕೇಂದ್ರ ಬಜೆಟ್​ನಲ್ಲಿ ಯುವಕರಿಗೆ ಏನೂ ಇಲ್ಲ. ಮೇಕ್ ಇನ್ ಇಂಡಿಯಾ, ಅದರ ನ್ಯೂನತೆ ಮರೆಮಾಚಲು ರಾಷ್ಟ್ರೀಯ ಉತ್ಪಾದನಾ ಮಿಷನ್ ಆಗಿ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬಿಹಾರಕ್ಕೆ ಗಿಫ್ಟ್ ನೀಡಿ, ಆಂಧ್ರವನ್ನು ಹೀನಾಯವಾಗಿ ನಿರ್ಲಕ್ಷ್ಯಿಸಿದ್ದೇಕೆ?; ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಿನ್ನೆ ಪ್ರಧಾನಿ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ದೊಡ್ಡ ಹೆಜ್ಜೆ ಎಂದಿದ್ದರು. ಆದರೆ, ಬಜೆಟ್‌ನಲ್ಲಿ ಅಂತಹದ್ದೇನಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವ ಮಾರ್ಗಸೂಚಿಯೇ ಇಲ್ಲ. ಕೃಷಿ ಸರಕುಗಳ ಮೇಲಿನ ಜಿಎಸ್​ಟಿ ದರಗಳಲ್ಲಿ ರಿಯಾಯ್ತಿ ನೀಡಿಲ್ಲ. ದಲಿತ, ಬುಡಕಟ್ಟು ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತ
ಬಡ ಮಕ್ಕಳಿಗೆ ಆರೋಗ್ಯ, ಶಿಕ್ಷಣಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

ಖಾಸಗಿ ಹೂಡಿಕೆ ಹೆಚ್ಚಿಸಲು ಯಾವುದೇ ಸುಧಾರಣಾ ಕ್ರಮವಿಲ್ಲ. ಬಡವರು, ಕಾರ್ಮಿಕರ ಆದಾಯ ಹೆಚ್ಚಿಸಲು ಏನೂ ಮಾಡಿಲ್ಲ ಜಿಎಸ್​ಟಿ​ಯ ಬಹು ದರಗಳಲ್ಲಿ ಸುಧಾರಣೆ ಬಗ್ಗೆ ಮಾತೇ ಬಂದಿಲ್ಲ. ಉದ್ಯೋಗ ಹೆಚ್ಚಿಸುವ ಬಗ್ಗೆ ಯಾವುದೇ ಮಾತುಕತೆ ನಡೆಯಲಿಲ್ಲ. ಸ್ಟಾರ್ಟ್ಅಪ್ ಇಂಡಿಯಾ, ಸ್ಟ್ಯಾಂಡ್ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಸ್ಕೀಂ ಕೇವಲ ಘೋಷಣೆಗಳಾಗಿ ಉಳಿದಿವೆ. ಒಟ್ಟಾರೆ ಈ ಬಜೆಟ್​​ ಜನರನ್ನ ಮೂರ್ಖರನ್ನಾಗಿಸಲು ಮೋದಿ ಸರ್ಕಾರದ ಪ್ರಯತ್ನವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.