Budget 2022: ಕೇಂದ್ರ ಸರ್ಕಾರದ ಬಜೆಟ್ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ
ಇಂದಿನ ಬಜೆಟ್ ಮಂಡನೆ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು, ಪ್ರಧಾನಿ ಮೋದಿ ಹಾಗೂ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ. ದೇಶ ವೇಗವಾಗಿ ಬೆಳೆಯಲು ಅನುಕೂಲವಾಗುವ ಬಜೆಟ್ ಇದಾಗಿದೆ.
ಇಂದು (ಫೆ.01) ಪ್ರಧಾನಿ ನರೇಂದ್ರ (Narendra Modi) ಮೋದಿ ಅವರ 10ನೇ ಬಜೆಟ್ ಮಂಡನೆ ಆಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 90 ನಿಮಿಷಗಳ ಕಾಲ ಬಜೆಟ್ ಭಾಷಣ ಮಾಡಿದ್ದಾರೆ. ಈ ಬಜೆಟ್ಗೆ ಕರ್ನಾಟಕದಲ್ಲಿ ಕೆಲವು ನಾಯಕರು ಸ್ವಾಗತಿಸಿದ್ದಾರೆ. ಇನ್ನು ಕೆಲವರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಈ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವ ಕೊಡುಗೆ ನೀಡಿಲ್ಲ. ಈ ಬಾರಿ ಬಜೆಟ್ ಬಗ್ಗೆ ತುಂಬಾ ನಿರೀಕ್ಷೆಯಿತ್ತು. ಆದರೆ ನಿರಾಸೆ ಮೂಡಿದೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಇದು ಜನಪರ ಬಜೆಟ್. ಕೊರೊನಾ ಇದ್ದಾಗಲೂ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ ಅಂತ ಅಭಿಪ್ರಾಯಪಟ್ಟಿದ್ದಾರೆ.
ಇಂದಿನ ಬಜೆಟ್ ಮಂಡನೆ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು, ಪ್ರಧಾನಿ ಮೋದಿ ಹಾಗೂ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ. ದೇಶ ವೇಗವಾಗಿ ಬೆಳೆಯಲು ಅನುಕೂಲವಾಗುವ ಬಜೆಟ್ ಇದಾಗಿದೆ. ಕೊವಿಡ್ ಇದ್ದಾಗಲು ಒಳ್ಳೆಯ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನೂ ಸಮಯ ಇದೆ. ನಮ್ಮ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಕೊಡುವ ಸಾಧ್ಯತೆ ಇದೆ. ಮೋದಿ 100 ಕೋಟಿ ಜನರಿಗೆ ವ್ಯಾಕ್ಸಿನ್ ಕೊಟ್ಟು ಜನರ ಪ್ರಾಣ ಉಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಐಟಿ ಬಿಟಿಗೆ ಒತ್ತು ಕೊಟ್ಟಿದ್ದಾರೆ. ರೈತರಿಗೆ ಅನೇಕ ಯೋಜನೆ ಕೊಟ್ಟು ರೈತ ಹಿತ ಕಾದಿದ್ದಾರೆ. ಆರೋಗ್ಯಕ್ಕೆ, ಶಿಕ್ಷಣಕ್ಕೆ, ರಸ್ತೆ, ಸಾರಿಗೆ, ಮೂಲಭೂತ ಸಮಸ್ಯೆಗೆ ಸ್ಪಂದಿಸಿದ್ದಾರೆ. ರಕ್ಷಣಾ ಕ್ಷೆತ್ರದಲ್ಲಿ ಬದಲಾವಣೆ ಮಾಡಿದ್ದಾರೆ. 2022 ರ 5 ಜಿ ತರಲು ಮುಂದಾಗಿ ಬಹುದಿನದ ಕನಸು ನನಸಾಗಿಸಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಎಲ್ಲೇ ಇದ್ದರೂ ಭೂಮಿ ಖರೀದಿಸಲು ರಿಜಿಸ್ಟರ್ ಮಾಡಿಸಲು ಅನುವು ಮಾಡಿರುವುದು ಒಳ್ಳೆಯದು. ಮಹಿಳೆ ಸಬಲೀಕರಣಕ್ಕಾಗಿ ಮಿಷನ್ ಶಕ್ತಿ ಜಾರಿಗೆ ತಂದಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಬಸ್ ಉಚಿತ ಕೊಡಲು ಮುಂದಾಗಿರೋದು ಒಳ್ಳೆಯದು. ನದಿ ಜೋಡಣೆಗೆ ಪೂರಕವಾಗುವ ಪ್ರಸ್ತಾಪ ಮಾಡಿದ್ದಾರೆ ಅಂತ ಶ್ರೀರಾಮುಲು ಹೇಳಿದರು.
ಅರ್ಥ ವ್ಯವಸ್ಥೆಯನ್ನು ಸರಿಪಡಿಸುವ ಬಜೆಟ್ ಇದಾಗಿದೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಅನೇಕ ವರ್ಷಗಳಿಂದ ನೀರಿಗಾಗಿ ಹೋರಾಟ ಮಾಡುತ್ತಿದ್ದೆವು. ನದಿ ಜೋಡಣೆ ಯೋಜನೆ ಘೋಷಣೆ ಮೂಲಕ 25 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರತಿ ಮನೆಗೂ ನೀರು ಕೊಡಲು 60 ಲಕ್ಷ ಕೋಟಿ ಕೊಟ್ಟಿದ್ದಾರೆ. ಎರಡು ಲಕ್ಷ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಎಸ್ಸಿ, ಎಸ್ಟಿ, ಬಡ ರೈತರಿಗೆ ನೀರಾವರಿ ಸೌಲಭ್ಯ ಕೊಟ್ಟಿದ್ದಾರೆ. 400 ಹೊರ ರೈಲು ಮಾರ್ಗಗಳನ್ನು ಘೋಷಣೆ ಮಾಡಿದ್ದಾರೆ. ಸೋಲಾರ್ ವಿದ್ಯುತ್ ಯೋಜನೆಗೆ ಒತ್ತು ನೀಡಿದ್ದಾರೆ. 80 ಲಕ್ಷ ಮನೆ ಕೊಡುವ ಯೋಜನೆ ರೂಪಿಸಿದ್ದಾರೆ ಅಂತ ಅಭಿಪ್ರಾಯಪಟ್ಟರು
ಮೋದಿಯವರ ಆತ್ಮ ನಿರ್ಭರ ಭಾರತದ ಕನಸು ನನಸಾಗಿದೆ- ಸಿಸಿ ಪಾಟೀಲ್: ಮೋದಿಯವರ ಆತ್ಮ ನಿರ್ಭರ ಭಾರತದ ಕನಸು ನನಸಾಗಿದೆ ಅಂತ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಐತಿಹಾಸಿಕ ಬಜೆಟ್ ಮಂಡನೆ ಮಾಡಲಾಗಿದೆ. ರಸ್ತೆ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಯೋಜನೆಗೆ ಹಣ ಬಿಡುಗಡೆಯಾಗಿದೆ. ಬಡವರ ಅನುಕೂಲಕ್ಕೆ 400 ರೈಲು ಘೋಷಣೆ ಮಾಡಲಾಗಿದೆ. ರೈತರಿಗೆ ಬೆಲೆ ಬಿದ್ದ ಸಂದರ್ಭದಲ್ಲಿ ಉತ್ತೇಜನ ನೀಡಲು ಹಣ ಮೀಸಲಿಡಲಾಗಿದೆ. ನದಿ ಜೋಡಣೆಗೆ ಸ್ವಾಗತ. ಶಿರಾಡಿ ಘಾಟ್ಗೆ 1,200 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಗಡ್ಕರಿ ಅವರಿಗೆ ಧನ್ಯವಾದಗಳು. ಕೊವಿಡ್ ಹಿನ್ನೆಲೆ ಟ್ಯಾಕ್ಸ್ ಸಂಗ್ರಹದಲ್ಲಿ ಯಶಸ್ವಿಯಾಗಿದೆ. ಕೊವಿಡ್ ನಡುವೆ ಅದ್ಭುತವಾದ ಬಜೆಟ್ ಮಂಡನೆಯಾಗಿದೆ ಅಂತ ತಿಳಿಸಿದರು.
ನಿರಾಸದಾಯಕ ಬಜೆಟ್- ಸಂಸದ ಪ್ರಜ್ವಲ್ ರೇವಣ್ಣ: ಇದು ಬಹಳ ನಿರಾಸದಾಯಕ ಬಜೆಟ್. ಬಜೆಟ್ ಮೇಲೆ ನಂಬಿಕೆಯೇ ಹೋಗಿದೆ. 25 ಜನ ಬಿಜೆಪಿ ಎಂಪಿಗಳು ಕರ್ನಾಟಕದಿಂದ ಇದ್ದಾರೆ, ಆದರೆ ಏನ್ ತಂದರು ರಾಜ್ಯಕ್ಕೆ? ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ಫೇಲ್ ಬಜೆಟ್. ಬಹಳಷ್ಟು ನಿರೀಕ್ಷೆಗಳು ಇದ್ದವು. ಕಾವೇರಿ- ಮೇಕೆದಾಟು ವಿಚಾರಕ್ಕೆ ಬಜೆಟ್ನಲ್ಲಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಬಜೆಟ್ನಲ್ಲಿ ರಾಜ್ಯಗಳ ಸಹಮತ ಇದ್ದರೇ ಮಾತ್ರ ಜೋಡೆ ಎಂದಿದ್ದಾರೆ. ಇದು ಎಷ್ಟರ ಮಟ್ಟಿಗೆ ನ್ಯಾಯ. ಇದು ಕಳಪೆ ಬಜೆಟ್. ಕರ್ನಾಟಕ ಕ್ಕೆ ಏನು ಕೊಟ್ಟಿಲ್ಲ ಅಂತ ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ.
ಕೇಂದ್ರ ಬಜೆಟ್ಗೆ ಯಡಿಯೂರಪ್ಪ ಪ್ರತಿಕ್ರಿಯೆ ಏನು?: ಕೇಂದ್ರ ಬಜೆಟ್ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ. ಆಯವ್ಯಯ ಆರ್ಥಿಕ ಹಿಂಜರಿತ ಸರಿಪಡಿಸುವ ದೃಷ್ಟಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿ ಗುರಿ ಹೊಂದಿದೆ. ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕ ಬಜೆಟ್. ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತಾರ್ಹ. ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ ಮಾಡಿದ್ದು, ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಅಂತ ಹೇಳಿದರು.
ಇದನ್ನೂ ಓದಿ
Amazon: ಅಮೆಜಾನ್ ಸೇಲ್ ಮುಕ್ತಾಯವಾಗಿದ್ದರೂ ಬಂಪರ್ ಡಿಸ್ಕೌಂಟ್ಗೆ ಸಿಗುತ್ತಿದೆ ಈ ಫೋನ್ಗಳು