ಜುಲೈ 23ಕ್ಕೆ ಆರ್ಥಿಕ ಸಮೀಕ್ಷೆ, ಜುಲೈ 24ಕ್ಕೆ ಬಜೆಟ್ ಮಂಡನೆ ಸಾಧ್ಯತೆ: ವರದಿ

Union Budget 2024 date: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಜುಲೈ 24ರಂದು ಮಂಡನೆ ಆಗಬಹುದು ಎಂದು ವರದಿಗಳು ಹೇಳುತ್ತಿವೆ. ಜುಲೈ 22ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದೆ. ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಪಡಿಸಲಾಗುತ್ತದೆ. 24ಕ್ಕೆ ಬಜೆಟ್ ಇರುತ್ತದೆ. ರೈತರು, ಬಡವರು, ಯುವಜನರು ಮತ್ತು ಮಹಿಳೆಯರು ಈ ನಾಲ್ಕು ವರ್ಗಗಳಿಗೆ ಸರ್ಕಾರದ ನೀತಿಯಲ್ಲಿ ಆದ್ಯತೆ ಇರಲಿದೆ ಎನ್ನುವ ಸುಳಿವನ್ನು ರಾಷ್ಟ್ರಪತಿಗಳು ನೀಡಿದ್ದಾರೆ.

ಜುಲೈ 23ಕ್ಕೆ ಆರ್ಥಿಕ ಸಮೀಕ್ಷೆ, ಜುಲೈ 24ಕ್ಕೆ ಬಜೆಟ್ ಮಂಡನೆ ಸಾಧ್ಯತೆ: ವರದಿ
ನಿರ್ಮಲಾ ಸೀತಾರಾಮನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 03, 2024 | 11:44 AM

ನವದೆಹಲಿ, ಜುಲೈ 3: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತವೆ. ಅಂತೆಯೇ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜುಲೈ 22ರಂದು ನಡೆಯಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಫೈನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆಯ ವರದಿ ಪ್ರಕಾರ ಜುಲೈ 24ರಂದು ಸಂಸತ್ತಿನಲ್ಲಿ ಪೂರ್ಣ ಪ್ರಮಾಣದ ಮುಂಗಡ ಪತ್ರ (Union Budget 2024) ಮಂಡನೆ ಆಗಬಹುದು ಎನ್ನಲಾಗಿದೆ. ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ಈ ಅಂದಾಜು ಮಾಡಿದೆ.

ಈ ವರದಿ ಪ್ರಕಾರ ಜುಲೈ 22ಕ್ಕೆ ಬಜೆಟ್ ಅಧಿವೇಶನ ಆರಂಭವಾಗಬಹುದು. ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಬಹುದು. ಜುಲೈ 24ಕ್ಕೆ ಯೂನಿಯನ್ ಬಜೆಟ್ ಅನ್ನು ಪ್ರಸ್ತುತಪಡಿಸಬಹುದು ಎನ್ನಲಾಗಿದೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ (ಜುಲೈ 2) ಮುಕ್ತಾಯಗೊಂಡಿದೆ. ವಾಡಿಕೆ ಪ್ರಕಾರ ಎರಡನೇ ಸೆಷನ್ ಅನ್ನು 15 ದಿನಗಳ ಅಂತರದಲ್ಲಿ ಮಾಡಲಾಗುತ್ತದೆ. ಅದರಂತೆ ಜುಲೈ 18ಕ್ಕೆ ಮುಂಗಾರು ಅಧಿವೇಶನ ಶುರುವಾಗಬೇಕಾಗುತ್ತದೆ. ಅದೇ ರೀತಿ ಆದರೆ ಜುಲೈ 20, ಶನಿವಾರ ಬಜೆಟ್ ಮಂಡನೆ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಅಧಿವೇಶನ ತುಸು ವಿಳಂಬವಾಗಿ ಶುರುವಾಗಬಹುದು. ಜುಲೈ 22ಕ್ಕೆ ಅಧಿವೇಶನ ಆರಂಭವಾಗಿ ಜುಲೈ 24, ಬುಧವಾರದಂದು ಬಜೆಟ್ ಮಂಡನೆ ಆಗಬಹುದು ಎನ್ನುತ್ತಿದೆ ಈ ಎಫ್​ಇ ವರದಿ.

ಇದನ್ನೂ ಓದಿ: ಸೆಕ್ಷನ್ 80ಸಿ ಅಡಿಯಲ್ಲಿ ಡಿಡಕ್ಷನ್ ಮಿತಿ ಹೆಚ್ಚಿಸಲಿ: ಬಜೆಟ್​ನಿಂದ ಆದಾಯ ತೆರಿಗೆ ಪಾವತಿದಾರರಿಂದ ಅಪೇಕ್ಷೆ

ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ

ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಬಜೆಟ್​ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳು ಅನಾವರಣಗೊಳ್ಳಲಿವೆ ಎಂದು ಪೂರ್ವನೋಟ ನೀಡಿದ್ದರು. ಹಾಗೆಯೇ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ಹೆಜ್ಜೆಗಳನ್ನು ಬಜೆಟ್​ನಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ