AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union budget 2024: ಮುದ್ರಾ ಯೋಜನೆ ಅಡಿ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಸಣ್ಣ ಉದ್ದಿಮೆದಾರರಿಗೆ ಅನುಕೂಲ

MUDRA yojana funds: ಇಂದು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್​ನಲ್ಲಿ ಮುದ್ರಾ ಯೋಜನೆಗೆ ಒತ್ತು ಕೊಡಲಾಗಿದೆ. ಎಂಎಸ್​ಎಂಇ ವಲಯಕ್ಕೆ ಉತ್ತೇಜನ ಕೊಡುವ ಈ ಸಾಲ ಯೋಜನೆಗೆ ಮೀಸಲಿರಿಸಿದ ಹಣವನ್ನು ಹೆಚ್ಚಿಸಲಾಗಿದೆ. ಯೋಜನೆ ಅಡಿ ಸಿಗುವ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 20 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಕೋಳಿ ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಣೆ ಇತ್ಯಾದಿ ಸಣ್ಣ ಪುಟ್ಟ ಉದ್ದಿಮೆಗಳಿಗೆ ಇದರಿಂದ ಬಹಳಷ್ಟು ಉಪಯೋಗವಾಗಲಿದೆ.

Union budget 2024: ಮುದ್ರಾ ಯೋಜನೆ ಅಡಿ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಸಣ್ಣ ಉದ್ದಿಮೆದಾರರಿಗೆ ಅನುಕೂಲ
ಮುದ್ರಾ ಯೋಜನೆ
TV9 Web
| Edited By: |

Updated on:Jul 23, 2024 | 6:57 PM

Share

ನವದೆಹಲಿ, ಜುಲೈ 23: ಎಂಎಸ್​ಎಂಇ ವಲಯಕ್ಕೆ ಉತ್ತೇಜನ ನೀಡಲು ಮುದ್ರಾ ಯೋಜನೆಯ ಮೊತ್ತವನ್ನು ಹೆಚ್ಚಿಸಲಾಗಿದೆ. ಯೋಜನೆ ಅಡಿ ನೀಡಲಾಗುವ ಗರಿಷ್ಠ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 20 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಸತತ 7ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಪ್ರಧಾನಮಂತ್ರಿ ಮುದ್ರಾ ಯೋಜನೆಗೆ (Mudra Yojana) ಮೀಸಲಿಡುವ ಹಣದಲ್ಲಿ ಗಣನೀಯ ಪ್ರಮಾಣದ ಏರಿಕೆಯನ್ನ ಘೋಷಿಸಿದ್ದಾರೆ. ದ್ವಿಗುಣಗೊಳಿಸಲಾದ ಮೊತ್ತವು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ತೇಜಿಸುವ ಮೂಲಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ, ಮತ್ತು ನಾವಿನ್ಯತೆಗೆ ಅಗತ್ಯವಾದ ಆರ್ಥಿಕ ಬೆಂಬಲವನ್ನು ಒದಗಿಸುತ್ತದೆ. ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವುದರಿಂದ ಉದ್ಯೋಗಾವಕಾಶಗಳನ್ನ ಸೃಷ್ಟಿಸುವ ಗುರಿಯನ್ನ ಯೋಜನೆ ಹೊಂದಿದೆ.

ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮತ್ತು ದೇಶಾದ್ಯಂತ ಉದ್ಯೋಗವನ್ನು ಹೆಚ್ಚಿಸುವಲ್ಲಿ ಯೋಜನೆಯ ಯಶಸ್ಸನ್ನು ಎತ್ತಿ ತೋರಿಸಿದ ಸೀತಾರಾಮನ್, ಹೆಚ್ಚಿದ ಆರ್ಥಿಕ ಸಹಾಯವು ಸೂಕ್ಷ್ಮ ಉದ್ಯಮಗಳನ್ನು ಮತ್ತಷ್ಟು ಸಶಕ್ತಗೊಳಿಸುತ್ತದೆ ಮತ್ತು ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವುದಾಗಿ ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್​ಎಮ್​ಇ) ಬೆಂಬಲ ನೀಡುವ ಉದ್ದೇಶದಿಂದ ಹೊಸ ಸಾಲ ಖಾತರಿ ಯೋಜನೆಯನ್ನು ಪರಿಚಯಿಸುವುದಾಗಿಯೂ ತಿಳಿಸಿದ್ದಾರೆ.

ಮೋದಿ ಸರ್ಕಾರದ ಪ್ರಮುಖ ಯೋಜನೆಗಳಲ್ಲೊಂದಾದ ಮುದ್ರಾ ಸಾಲ ಉಪಕ್ರಮವು ಕಾರ್ಪೊರೇಟ್ ಅಲ್ಲದೇ, ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ಸಾಲವನ್ನು ವಿಸ್ತರಿಸುವಲ್ಲಿ ಪರಿಣಾಮಕಾರಿಯಾಗಿದೆ. ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಾದ ಕೋಳಿ ಸಾಕಣಿಕೆ, ಹೈನುಗಾರಿಕೆ, ಜೇನುಸಾಕಣೆ ಇತ್ಯಾದಿಗಳನ್ನು ಒಳಗೊಂಡಂತೆ ಉತ್ಪಾದನೆ, ವ್ಯಾಪಾರ ಅಥವಾ ಸೇವಾ ಕ್ಷೇತ್ರಗಳಲ್ಲಿ ಹಾಗು ಕೃಷಿಯೇತರ ವಲಯದಲ್ಲಿ ತೊಡಗಿರುವಂತಹ ಆದಾಯದಾಯಕವಾದ ಯಾವುದೇ ಅರ್ಹ ಸೂಕ್ಷ್ಮ ಉದ್ಯಮಗಳಿಗೆ ಅತ್ಯಂತ ಸುಲಭವಾಗಿ ಸಾಲವನ್ನು ಒದಗಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ. ಆರ್ಥಿಕವಾಗಿ ಸಶಕ್ತವಲ್ಲದ, ಆದರೆ ಉದ್ಯಮಶೀಲತೆಯ ಮನಸ್ಥಿತಿಯುಳ್ಳವರಿಗೆ ಈ ಯೋಜನೆ ಆಶಾಕಿರಣವಾಗಿದೆ.

ಇದನ್ನೂ ಓದಿ: ಕಾರ್ಪೊರೇಟ್ ತೆರಿಗೆ 5 ಪ್ರತಿಶತದಷ್ಟು ಇಳಿಕೆ; ಏಂಜೆಲ್ ಟ್ಯಾಕ್ಸ್ ರದ್ದು; ಉದ್ಯಮ ವಲಯಕ್ಕೆ ತುಸು ರಿಲೀಫ್

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲಗಳನ್ನು ಬ್ಯಾಂಕ್ ಇತ್ಯಾದಿ ನಿಯೋಜಿತ ಹಣಕಾಸು ಸಂಸ್ಥೆಗಳ ಮೂಲಕ ಪಡೆಯಬಹುದು. ಸರ್ಕಾರಿ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು, ರಾಜ್ಯ ಸರ್ಕಾರಗಳ ಅಡಿಗೆ ಬರುವ ಸಹಕಾರಿ ಬ್ಯಾಂಕುಗಳು, ಪ್ರಾದೇಶಿಕ ವಲಯದ ಗ್ರಾಮೀಣ ಬ್ಯಾಂಕುಗಳು, ಮೈಕ್ರೋ ಫೈನಾನ್ಸ್ ಸಂಸ್ಥೆ, ಎನ್​ಬಿಎಫ್​ಸಿ, ಸ್ಮಾಲ್ ಫೈನಾನ್ಸ್ ಬ್ಯಾಂಕುಗಳು ಮುದ್ರಾ ಯೋಜನೆ ಅಡಿ ಸಾಲ ನೀಡಲು ಅನುಮತಿ ಹೊಂದಿರುತ್ತವೆ.

– ದರ್ಶಿನಿ ತಿಪ್ಪಾರೆಡ್ಡಿ

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Tue, 23 July 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!