Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ… ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ…

Income tax, new regime rates: ಈ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದವರು ಮತ್ತು ಸಂಬಳದಾರರಿಗೆ ರಿಲೀಫ್ ನೀಡಿದ್ದಾರೆ. ಅದರಲ್ಲೂ ತಿಂಗಳಿಗೆ ಒಂದು ಲಕ್ಷ ರೂ ಒಳಗೆ ಸಂಬಳ ಪಡೆಯುತ್ತಿರುವ ಜನರಿಗೆ ತೆರಿಗೆ ಬಾಧ್ಯತೆ ಇಲ್ಲದಂತೆ ಮಾಡಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್​ ಪ್ರಕಾರ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆ ಕಟ್ಟಬೇಕು ಎನ್ನುವ ಗಣಕ ಇಲ್ಲಿದೆ.... ಬಳಸಿ...

Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ... ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ...
ಟ್ಯಾಕ್ಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2025 | 5:21 PM

ಈ ಬಾರಿಯ ಬಜೆಟ್​ನಲ್ಲಿ ಆದಾಯ ತೆರಿಗೆಯಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಟ್ಯಾಕ್ಸ್ ರಿಬೇಟ್ ಹೆಚ್ಚಿಸಲಾಗಿದೆ. ಟ್ಯಾಕ್ಸ್ ಸ್ಲ್ಯಾಬ್ ದರಗಳಲ್ಲಿ ಬದಲಾವಣೆ ಮಾಡಲಾಗಿದೆ. 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಅದನ್ನು ಹೊರತುಪಡಿಸಿ ಉಳಿದ ಆದಾಯದಲ್ಲಿ 4 ಲಕ್ಷ ರೂವರೆಗಿನ ಮೊತ್ತಕ್ಕೆ ತೆರಿಗೆ ಇರುವುದಿಲ್ಲ. 4ರಿಂದ 8 ಲಕ್ಷ ರೂ ಮೊತ್ತಕ್ಕೆ ಶೇ. 5 ತೆರಿಗೆ ಇದೆ. 8ರಿಂದ 12 ಲಕ್ಷ ರೂ ಮೊತ್ತಕ್ಕೆ ಶೇ. 10 ತೆರಿಗೆ ಇದೆ. 12ರಿಂದ 15 ಲಕ್ಷ ರೂವರಗಿನ ಆದಾಯಕ್ಕೆ ಶೇ. 15 ತೆರಿಗೆ ಇದೆ. 15ರಿಂದ 20 ಲಕ್ಷ ರೂಗೆ ಶೇ. 20 ತೆರಿಗೆ; 20ರಿಂದ 24 ಲಕ್ಷ ರೂಗೆ ಶೇ. 25, ಹಾಗೂ 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಇದೆ.

ಇವುಗಳ ಮಧ್ಯೆ ನಿಮಗೆ ತೆರಿಗೆ ಎಷ್ಟು ಕಟ್ಟಬೇಕಾಗಬಹುದು ಎಂದು ಲೆಕ್ಕ ಹಾಕಲು ಗೊಂದಲವಾಗುತ್ತಿದ್ದರೆ, ಇಗೋ ಇಲ್ಲಿದೆ ಸಿಂಪಲ್ ಕ್ಯಾಲ್ಕುಲೇಟರ್.

ಇದನ್ನೂ ಓದಿ: Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

ಈ ಮೇಲಿನ ಕ್ಯಾಲ್ಕುಲೇಟರ್​ನಲ್ಲಿ ನೀವು ನಿಮ್ಮ ಟ್ಯಾಕ್ಸಬಲ್ ಇನ್ಕಮ್ ಅನ್ನು ಮಾತ್ರ ನಮೂದಿಸಬಹುದು. ಆಗ ನೀವು ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಕಟ್ಟಬೇಕಾದ ತೆರಿಗೆ ಎಷ್ಟು, ಹಳೆಯ ಟ್ಯಾಕ್ಸ್ ರಿಜೈಮ್​ನಲ್ಲಿ ಎಷ್ಟು ತೆರಿಗೆ ಕಟ್ಟಬೇಕು ಎಂಬುದನ್ನು ತಿಳಿಸುತ್ತದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?